ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುರೋಹಿತನಾ? ಜ್ಯೋತಿಷಿನಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

| Published : Oct 14 2024, 01:36 AM IST / Updated: Oct 14 2024, 06:11 AM IST

Siddaramaiah
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುರೋಹಿತನಾ? ಜ್ಯೋತಿಷಿನಾ? : ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

 ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

  ಬೆಳಗಾವಿ : ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸವದತ್ತಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದಿದ್ದರು. ದಸರಾ ಮುಗಿತಲ್ವಾ ನಾನು ರಾಜೀನಾಮೆ ಕೊಟ್ಟಿದ್ದೇನಾ? ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ ಎಂದು ಕಿಡಿಕಾರಿದರು.

ಪೋಕ್ಸೋ ಪ್ರಕರಣದಲ್ಲಿ ಅವರ ತಂದೆ ಯಡಿಯೂರಪ್ಪ ಬೇಲ್‌ ಮೇಲೆ ಹೊರಗಿದ್ದಾರೆ. ಮೊದಲು ವಿಜಯೇಂದ್ರ‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

ಕೇಂದ್ರ ‌ಸರ್ಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ನಮ್ಮ‌ ಬೇಡಿಕೆಗೆ ತಕ್ಕಷ್ಟು ತೆರಿಗೆ ಹಣ ನೀಡಿಲ್ಲ, ಬದಲಾಗಿ ಕಮ್ಮಿ ನೀಡಿದೆ. ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬಂಧ ಕರ್ನಾಟಕ ಜನರು, ಧ್ವನಿ ಎತ್ತಬೇಕು, ಅನ್ಯಾಯಕ್ಕೆ ಒಳಹಾದ ರಾಜ್ಯಗಳು ಧ್ವನಿ ‌ಎತ್ತಬೇಕು. ಒಕ್ಕೂಟ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಯುತ ಪಾಲು ಕೊಟ್ಟರೆ ನಮಗೆ ಅನುಕೂಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.

ಈ ಬಗ್ಗೆ ರಾಜ್ಯಕ್ಕೆ ಅನ್ಯಾಯವಾದರೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರವನ್ನು ಕೇಳುತ್ತಿಲ್ಲ. ಕೋಮು ವಿಚಾರದಲ್ಲಿ ಮಾತ್ರ ಬಿಜೆಪಿ ಸಂಸದರು ಪ್ರತಿಭಟನೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು.