ಶ್ರೀಮದ್ ವೀರಶೈವ ಸದ್ಬೋಧನಾ ಸಂಸ್ಥೆ ವತಿಯಿಂದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾವೇಶವನ್ನು ಆ.6ರಿಂದ ಆರಂಭವಾಗಿದ್ದು, ಆ.10ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ನಡೆಯಲಿದೆ.

- ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ರಂಭಾಪುರಿ ಶ್ರೀ ಸಾನ್ನಿಧ್ಯದಲ್ಲಿ ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಶ್ರೀಮದ್ ವೀರಶೈವ ಸದ್ಬೋಧನಾ ಸಂಸ್ಥೆ ವತಿಯಿಂದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾವೇಶವನ್ನು ಆ.6ರಿಂದ ಆರಂಭವಾಗಿದ್ದು, ಆ.10ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ನಡೆಯಲಿದೆ.

ಆ.7ರ ಧರ್ಮಸಭೆಯಲ್ಲಿ ರಂಭಾಪುರಿ ಶ್ರೀ ದಿವ್ಯ ಸಾನಿಧ್ಯದಲ್ಲಿ ಆವರಗೊಳ್ಳ-ದಾವಣಗೆರೆಯ ಶ್ರೀ ಸುಜ್ಞಾನಪ್ರಭು ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮಿಗಳು ಸಮಾವೇಶದ ನೇತೃತ್ವ ವಹಿಸಲಿದ್ದಾರೆ. ಕಣ್ವಕುಪ್ಪಿ ಗವಿಮಠದ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹರಿಹರ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಯಶವಂತ ರಾವ್ ಜಾಧವ್, ದಾವಣಗೆರೆ- ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎ.ಮುರುಗೇಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಭಾಗವಹಿಸಲಿದ್ದಾರೆ. ಖ್ಯಾತ ವಕೀಲರಾದ ಸಿ.ಸಂತೋಷ್ ಚನ್ನಬಸಪ್ಪ ಪಾವಟೆ ಅವರಿಗೆ ''''''''ನ್ಯಾಯ ದಾನ ವಾದ ಚತುರ'''''''' ಪ್ರಶಸ್ತಿ ಪ್ರದಾನ ಮಾಡಲಾಗುವುದು ಹಾಗೂ ''''''''ಗುರುಪಥ ದರ್ಶನ'''''''' ಕೃತಿ ಬಿಡುಗಡೆಗೊಳ್ಳಲಿದೆ.

ಆ.8ರ ಸಮಾವೇಶದಲ್ಲಿ ರಂಭಾಪುರಿ ಗುಳೇದಗುಡ್ಡ ಅಗಸ್ತ್ಯಗಿರಿಯ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ರಾಣೆಬೆನ್ನೂರು ಶನೈಶ್ಚರ ಹಿರೇಮಠದ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಬಿ.ಇ.ರಂಗಸ್ವಾಮಿ, ಬಯಲುಸೀಮೆ ನಿಗಮ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮುಖಂಡರಾದ ಎಚ್.ಎಸ್. ನಾಗರಾಜ್, ಎನ್.ಮಹಾಂತೇಶ್ ಭಾಗವಹಿಸಲಿದ್ದಾರೆ. ಸಂತೆಬೆನ್ನೂರಿನ ಉದ್ಯಮಿ ಜಾವಿದ್ ಸಾಬ್ ಅವರಿಗೆ ''''''''ವ್ಯವಹಾರ ಕಲಾ ಕೌಶಲ್ಯ'''''''' ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಆ.9ರಂದು ಮರಿಯಮ್ಮನಹಳ್ಳಿಯ ಶ್ರೀ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಸಮಾವೇಶ ನೇತೃತ್ವ ವಹಿಸಲಿದ್ದಾರೆ. ಶಿರಸಂಗಿ ಕಾಡಸಿದ್ದೇಶ್ವರ ಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಪ ಸದಸ್ಯ ಅಬ್ದುಲ್ ಜಬ್ಬಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಎಸ್. ಗಣೇಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಬಿಜೆಪಿ ಜಿಲ್ಲಾ ಮುಖಂಡ ಲೋಕಿಕೆರೆ ನಾಗರಾಜ, ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಮಾಜಿ ಮಹಾಪೌರ ಬಿ.ಜೆ. ಅಜಯ್ ಕುಮಾರ, ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಭಾಗವಹಿಸಲಿದ್ದಾರೆ. ಅಂದು ಅಂಗವಿಕಲ ಶಿಕ್ಷಕಿಯಾದ ಆರ್.ಶೋಭಾ ಅವರಿಗೆ ''''ಸಮಾಜ ಸೇವಾ ಚಂದ್ರಿಕೆ'''' ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಆ10ರ ಸಮಾವೇಶದಲ್ಲಿ ಹೊಸಹಳ್ಳಿ ಹಿರೇಮಠದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ಪಂಚಗಂಗಾ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಉಪದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಸಮರ್ಥ ಶಾಮನೂರು, ಶಿವಗಂಗಾ ಬಸವರಾಜ್, ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಎನ್.ಜಿ. ಪುಟ್ಟಸ್ವಾಮಿ, ಮಾಜಿ ಮೇಯರ್ ಎಸ್.ಟಿ. ವೀರೇಶ್, ಆಲೂರು ನಿಂಗರಾಜು, ಡಾ. ಎಸ್.ಆರ್. ನಸೀರ್ ಅಹಮದ್ ಭಾಗವಹಿಸಲಿದ್ದಾರೆ. ಉದ್ಯಮಿ ಜಯಪ್ರಕಾಶ್ ಮಾಗಿ ಅವರಿಗೆ ''''''''ಶ್ರಮ ಸೇವಾ ಸಂಜೀವಿನಿ'''''''' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

- - -

-3ಕೆಡಿವಿಜ43: ರಂಭಾಪುರಿ ಶ್ರೀ