ಸಾರಾಂಶ
ಹರಿಹರ ನಗರದ ದೇವಸ್ಥಾನ ರಸ್ತೆಯ ರೇಣುಕ ಮಂದಿರ ಹಳೆಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾಭವನದಲ್ಲಿ ಜು.೯ ರಿಂದ ೧೧ರವರೆಗೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಹರಿಹರ: ನಗರದ ದೇವಸ್ಥಾನ ರಸ್ತೆಯ ರೇಣುಕ ಮಂದಿರ ಹಳೆಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾಭವನದಲ್ಲಿ ಜು.೯ ರಿಂದ ೧೧ರವರೆಗೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಜು.೯ರಿಂದ ೧೧ರವರೆಗೆ ಬೆಳಗ್ಗೆ ೬:೩೦ ರಿಂದ 3 ದಿನಗಳ ಕಾಲ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಕಾರ್ಯಕ್ರಮ ನಡೆಯಲಿದೆ. ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿದೆ. ಜು.೯ರಂದು ಸಂಜೆ ೬.೦೦ಕ್ಕೆ ಧರ್ಮ ಜಾಗೃತ ಸಭೆಯಲ್ಲಿ ರಂಭಾಪುರಿ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸುವರು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಬಿ.ಪಿ.ಹರೀಶ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್,ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಚಂದ್ರಶೇಖರ್ ಪೂಜಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಸೋಮೇಶ್ವರ ವಿದ್ಯಾಸಂಸ್ಥೆಯ ಕೆ.ಎಂ.ಸುರೇಶ್, ಮತ್ತಿತರರು ಭಾಗವಹಿಸುವರು.
ಜು.೧೦ರಂದು ಸಂಜೆ ೬.೩೦ಕ್ಕೆ ನಡೆಯುವ ಧರ್ಮ ಜಾಗೃತ ಸಭೆಯಲ್ಲಿ ವರಸದ್ಯೋಜಾತ ಶಿವಾಚಾರ್ಯ ಶ್ರೀಗಳು, ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕಿ ಲತಾ ಮಲ್ಲಿಕಾರ್ಜುನ, ವೀರಶೈವ ಮಹಾ ಸಭಾ ತಾಲೂಕು ಅಧ್ಯಕ್ಷ ಡಿ.ಜಿ.ಶಿವಾನಂದಪ್ಪ, ಜಿಪಂ ಮಾಜಿ ಸದಸ್ಯ ಬಿ.ಎಂ.ವಾಗೀಶ್ ಸ್ವಾಮಿ, ತಪೋವನದ ಶಶಿಕುಮಾರ್ ಮೆರ‍್ವಾಡೆ, ಮುಖಂಡ ಹಾಲೇಶ್ ಗೌಡ ಮತ್ತಿತರರು ಪಾಲ್ಗೊಳ್ಳುವರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಾಗೂ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು.
- - - -೮ಎಚ್‌ಆರ್‌ಆರ್೨: ರಂಭಾಪುರಿ ಶ್ರೀ