ಹಾವೇರಿ ಜಿಲ್ಲೆಯಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ

| Published : Oct 15 2025, 02:07 AM IST

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಈ ಕುರಿತು ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಹಾವೇರಿ: ಜಿಲ್ಲೆಯಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಈ ಕುರಿತು ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.ಇಸ್ಪೀಟ್ ಆಡಿಸಲು ಟೆಂಟ್ ವ್ಯವಸ್ಥೆ ಮಾಡಲಾಗಿದ್ದು, ಹಾಡಹಗಲೇ ಐಷಾರಾಮಿಯಾಗಿ ಇಸ್ಪೀಟ್ ದಂಧೆ ನಡೆಯುತ್ತಿದೆ. ಇಸ್ಪೀಟ್ ಆಡಲು ಆಯೋಜಕರೇ ವಾಹನ ವ್ಯವಸ್ಥೆ ಮಾಡಿದ್ದಾರೆ. ದೂರದ ಪ್ರದೇಶದಿಂದ ಜನರನ್ನು ಕರೆತಂದು ಇಲ್ಲಿ ದಂಧೆ ನಡೆಸಲಾಗುತ್ತಿದೆ. ನೂರಾರು ಜನ ಗುಂಪು ಸೇರಿ ಹಣದ ಬಂಡಲ್ ಹಿಡಿದು ಇಸ್ಪೀಟ್ ಆಡುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಹಾಡಹಗಲೇ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿಂದೆ ಶಿಗ್ಗಾಂವಿ ತಾಲೂಕಿನ ಅರಣ್ಯ ಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡಿಸುತ್ತಿರುವ ಕುರಿತು ಆರೋಪ ಕೇಳಿಬಂದಿತ್ತು. ಈಗ ಬ್ಯಾಡಗಿ, ರಾಣಿಬೆನ್ನೂರು ತಾಲೂಕಿನಲ್ಲೂ ಅಕ್ರಮ ಚಟುವಟಿಕೆ ಹೆಚ್ಚಾಗಿರುವ ಬಗ್ಗೆ ಆರೋಪ ಕೇಳಿಬರುತ್ತಿದೆ.