ಇಸ್ರೇಲ್‌ನ ಮರ್ಚವಿ ಅಸ್ಸಾಫ್‌ನ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿದೆ. ಆದರೂ ತನ್ನ ಗುರುತನ್ನು ಹೇಳದೇ ಅಕ್ರಮವಾಗಿ ಭಾರತದಲ್ಲಿ ಸುತ್ತಾಡುತಿದ್ದ.
ಹೊನ್ನಾವರ: ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದಡಿ ಇಸ್ರೇಲ್ ಪ್ರಜೆ ಮರ್ಚವಿ ಅಸ್ಸಾಫ್ (50) ಎಂಬವರನ್ನು ತಾಲೂಕಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಸ್ರೇಲ್‌ನ ಮರ್ಚವಿ ಅಸ್ಸಾಫ್‌ನ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿದೆ. ಆದರೂ ತನ್ನ ಗುರುತನ್ನು ಹೇಳದೇ ಅಕ್ರಮವಾಗಿ ಭಾರತದಲ್ಲಿ ಸುತ್ತಾಡುತಿದ್ದ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಉಳಿದುಕೊಂಡಿದ್ದು, ಸೆ. 13ರಂದು ಗೋಕರ್ಣದಿಂದ ಮುರುಡೇಶ್ವರದತ್ತ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ತಾಲೂಕಿನ ಹಳದಿಪುರದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಆಗ ಆತ ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ವಾಸಿಸುತ್ತಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಸೆ. 14ರಂದು ವಿದೇಶಿ ಪ್ರಜೆಯನ್ನು ಬೆಂಗಳೂರಿನ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ ಕಳಿಸಲಾಗಿದೆ.ವೀಸಾ ಅವಧಿ ಮುಗಿದ ಬಳಿಕ ಭಾರತದಲ್ಲಿ ಉಳಿದುಕೊಂಡಿರುವ ಕುರಿತು ಮುಂದಿನ ಕಾನೂನು ಪ್ರಕ್ರಿಯೆಯನ್ನು ವಿದೇಶಿಗರ ಪ್ರಾದೇಶಿಕ ನೋಂದಣಿ ಅಧಿಕಾರಿಗಳು ಕೈಗೊಳ್ಳಲಿದ್ದಾರೆ.
ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆಭಟ್ಕಳ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಭದ್ರತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್‌ಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.ಕಾರವಾರದಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವು ಪಟ್ಟಣದ ವಿವಿಧ ಗಣೇಶೋತ್ಸವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಗಣೇಶ ಚತುರ್ಥಿ ಹಬ್ಬ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದೆ ಶಾಂತಿಯುತವಾಗಿ ನಡೆಯುವಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ತಾಲೂಕಿನ ಹಳೆ ಬಸ್ ನಿಲ್ದಾಣದಲ್ಲಿರುವ ಭಟ್ಕಳ ರಿಕ್ಷಾ ಚಾಲಕ ಮತ್ತು ಮಾಲಕರ ಗಣೇಶೋತ್ಸವ ಸಮಿತಿ, ಪುರವರ್ಗ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಚನ್ನಪಟ್ಟಣ ಹನುಮಂತ ಗಣೇಶೋತ್ಸವ ಸಮಿತಿ ಹಾಗೂ ಮಣ್ಕುಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸೇರಿದಂತೆ ವಿವಿಧ ಗಣೇಶೋತ್ಸವ ಪೆಂಡಾಲ್‌ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು..