ಛಾಯಾಗ್ರಾಹಕರ ವೃತ್ತಿಗೆ ಗುರುತಿನ ಮಹತ್ವ ಹೆಚ್ಚುತ್ತಿದ್ದು, ಐಡಿ ಕಾರ್ಡ್‌ಗಳ ಮೂಲಕ ವೃತ್ತಿಪರತೆಗೆ ಮತ್ತಷ್ಟು ಗೌರವ ಮತ್ತು ಭದ್ರತೆ ಸಿಗಲಿದೆ. ಇಂದು ಛಾಯಾಗ್ರಹಣ ಕ್ಷೇತ್ರವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ವೇಗವಾಗಿ ಬೆಳೆಯುತ್ತಿದೆ. ಮದುವೆ, ಸಾಮಾಜಿಕ ಕಾರ್ಯಕ್ರಮಗಳು, ಸುದ್ದಿ ವರದಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಛಾಯಾಗ್ರಾಹಕರ ಪಾತ್ರ ಪ್ರಮುಖವಾಗಿದೆ. ಇಂತಹ ಸಂದರ್ಭದಲ್ಲಿ ಸಂಘದ ಸದಸ್ಯರು ಏಕತೆ ಮತ್ತು ಶಿಸ್ತಿನಿಂದ ಕೆಲಸ ಮಾಡುವುದು ಅಗತ್ಯ ಎಂದು ಅವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರುತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಸದಸ್ಯರಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಣೆ ಕಾರ್ಯಕ್ರಮವನ್ನು ಪಟ್ಟಣದ ನೌಕರ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಂಘದ ಹಿರಿಯ ಸದಸ್ಯರು ಉದ್ಘಾಟಿಸಿ, ನಂತರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಘದ ಎಲ್ಲಾ ಸದಸ್ಯರಿಗೆ ಕ್ರಮವಾಗಿ ಐಡಿ ಕಾರ್ಡ್‌ಗಳನ್ನು ವಿತರಿಸಿದರು. ಐಡಿ ಕಾರ್ಡ್‌ಗಳನ್ನು ವಿತರಿಸಿ ಮಾತನಾಡಿದ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಛಾಯಾಗ್ರಾಹಕರ ವೃತ್ತಿಗೆ ಗುರುತಿನ ಮಹತ್ವ ಹೆಚ್ಚುತ್ತಿದ್ದು, ಐಡಿ ಕಾರ್ಡ್‌ಗಳ ಮೂಲಕ ವೃತ್ತಿಪರತೆಗೆ ಮತ್ತಷ್ಟು ಗೌರವ ಮತ್ತು ಭದ್ರತೆ ಸಿಗಲಿದೆ. ಇಂದು ಛಾಯಾಗ್ರಹಣ ಕ್ಷೇತ್ರವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ವೇಗವಾಗಿ ಬೆಳೆಯುತ್ತಿದೆ. ಮದುವೆ, ಸಾಮಾಜಿಕ ಕಾರ್ಯಕ್ರಮಗಳು, ಸುದ್ದಿ ವರದಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಛಾಯಾಗ್ರಾಹಕರ ಪಾತ್ರ ಪ್ರಮುಖವಾಗಿದೆ. ಇಂತಹ ಸಂದರ್ಭದಲ್ಲಿ ಸಂಘದ ಸದಸ್ಯರು ಏಕತೆ ಮತ್ತು ಶಿಸ್ತಿನಿಂದ ಕೆಲಸ ಮಾಡುವುದು ಅಗತ್ಯ ಎಂದು ಅವರು ತಿಳಿಸಿದರು.ಸಂಘದ ಮಾಜಿ ಅಧ್ಯಕ್ಷ ರಾಘವೇಂದ್ರ ಹೊಳ್ಳ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನೂತನ ಛಾಯಾಗ್ರಹಕರು ಹೆಚ್ಚಾಗಿ ಬರುತ್ತಿದ್ದು ಅವರಿಗೆ ಸಂಘದ ಮಹತ್ವ ತಿಳಿಯುತ್ತಿಲ್ಲ. ಸದಸ್ಯರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಅಪಘಾತ ವಿಮೆ, ತುರ್ತು ನೆರವು ನಿಧಿ, ತರಬೇತಿ ಶಿಬಿರಗಳು ಹಾಗೂ ನವೀನ ತಂತ್ರಜ್ಞಾನಗಳ ಪರಿಚಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ. ಹೊಸದಾಗಿ ಕ್ಷೇತ್ರಕ್ಕೆ ಬರುತ್ತಿರುವ ಯುವ ಛಾಯಾಗ್ರಾಹಕರಿಗೆ ಮಾರ್ಗದರ್ಶನ ನೀಡುವುದು ಸಂಘದ ಪ್ರಮುಖ ಗುರಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಸಂಘದ ಈ ಪ್ರಯತ್ನವನ್ನು ಶ್ಲಾಘಿಸಿದರು. ಐಡಿ ಕಾರ್ಡ್‌ಗಳು ವಿವಿಧ ಕಾರ್ಯಕ್ರಮಗಳಲ್ಲಿ ಪ್ರವೇಶ ಹಾಗೂ ಕೆಲಸ ನಿರ್ವಹಣೆಗೆ ಅನುಕೂಲವಾಗಲಿದ್ದು, ಛಾಯಾಗ್ರಾಹಕರಿಗೆ ವೃತ್ತಿಪರ ಗುರುತು ನೀಡಲಿದೆ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ, ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಸಂದೀಪ್, ಖಜಾಂಚಿ ನವೀನ್, ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ದೇಶಕರು ಹಾಗೂ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಛಾಯಾಗ್ರಾಹಕರು ಹಾಜರಿದ್ದರು.
