ಐಟಿ ಕಂಪನಿ ಹೆಚ್ಚಾದರೆ ಉದ್ಯೋಗಾವಕಾಶ ಅಧಿಕ: ಪ್ರೊ. ರಾಜಕುಮಾರ ಬುಯ್ಯಾ

| Published : Jan 21 2024, 01:36 AM IST

ಐಟಿ ಕಂಪನಿ ಹೆಚ್ಚಾದರೆ ಉದ್ಯೋಗಾವಕಾಶ ಅಧಿಕ: ಪ್ರೊ. ರಾಜಕುಮಾರ ಬುಯ್ಯಾ
Share this Article
  • FB
  • TW
  • Linkdin
  • Email

ಸಾರಾಂಶ

ಕಲ್ಯಾಣ ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಒಂದು ದಿನದ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜನ್ಸ್‌ ಅಪ್ಲಿಕೆಶನ್ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಬೀದರ್‌

ಕಲ್ಯಾಣ ಕರ್ನಾಟಕದಲ್ಲಿ ಐಟಿ ಬಿಟಿ ಕಂಪನಿಗಳ ಸಂಖ್ಯೆ ಹೆಚ್ಚಾದಾಗ ಈ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳು ಸಿಗುತ್ತವೆ. ಇದರಿಂದ ಮುಂಬರುವ ದಿನಗಳಲ್ಲಿ ಈ ಭಾಗದ ಜನಪ್ರತಿನಿಧಿಗಳು ಹೆಚ್ಚಿನ ಆಸಕ್ತಿ ವಹಿಸಿದರೆ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕವು ಐಟಿ ಕೇಂದ್ರವಾಗುವುದರಲ್ಲಿ ಯಾವುದೆ ಸಂದೇಹವಿಲ್ಲವೆಂದು ಆಸ್ಟ್ರೇಲಿಯಾದ ಮೇಲ್ಬೋರ್ನ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ರಾಜಕುಮಾರ ಬುಯ್ಯಾ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗಣಕಯಂತ್ರ ವಿಜ್ಞಾನ ವಿಭಾಗ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಒಂದು ದಿನದ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜನ್ಸ್‌ ಅಪ್ಲಿಕೆಶನ್ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಅವಕಾಶಗಳು ಸಿಕ್ಕಿದಾಗ ರಾಷ್ಟ್ರಾಭಿವೃದ್ಧಿಗೆ ಪೂರಕವಾದ ಸಂಶೋಧನೆಗಳು ಹೊರಬರಬಹುದು. ಆರ್ಟಿಫಿಶಿಯಲ್ ಇಂಟೆಲಿಜನ್ಸ್‌ ನಿರ್ದಿಷ್ಟ ಅಪ್ಲಿಕೇಶನ್‌ಗಳಲ್ಲಿ ಪರಿಣಿತ ವ್ಯವಸ್ಥೆಗಳು, ನೈಸರ್ಗಿಕ ಭಾಷಾ ಸಂಸ್ಕರಣೆ ಭಾಷಾ ಗುರುತಿಸುವಿಕೆ, ಜೊತೆಗೆ ಇಂದಿನ ದಿನಗಳಲ್ಲಿ ಕೃಷಿ ಕ್ಷೇತ್ರಗಳಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದರ ಮೂಲಕ ಕೃಷಿ ಚಟುವಟಿಗೆಗಳು ಅಭಿವೃದ್ಧಿ ಹೊಂದುವುದರಲ್ಲಿ ಸಂದೇಹವಿಲ್ಲ. ಆದರೆ ಇದರ ಸದುಪಯೋಗ ಆಗಬೇಕು ಎಂದರು.

ಸಂಸ್ಥೆ ಅಧ್ಯಕ್ಷರಾದ ಬಸವರಾಜ ಜಾಬಶಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಶೋಧನೆ ಒಳ್ಳೆಯದು ಆಗಬಹುದು ಅಥವಾ ತೊಡಕಾಗಬಹುದು ಆದರೆ ಸಂಶೋಧನೆ ನಿರಂತರವಾಗಿರಲಿ. ಮುಂಬರುವ ದಿನಗಳಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚು ಒತ್ತು ಕೊಡಬೇಕು. ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇಗಾಗಲೇ ಡ್ರೋಣ್‌ ತಯಾರಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಹಂಗರಗೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿದ್ರಾಮ ಪಾರಾ, ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ವಿದೇಶದ ಟಾಟು ವಿಶ್ವವಿದ್ಯಾಲಯದ ಶಿವಾನಂದ ಪೂಜಾರ, ಹೈದ್ರಾಬಾದ ವಿಶ್ವವಿದ್ಯಾಲಯದ ಪ್ರೋ. ಸತೀಷ ಶ್ರೀರಾಮ್, ಗುರುನಾನಕ ದೇವ ಇಂಜಿನಿಯರಿಂಗ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಧನಂಜಯ್ ಸೇರಿದಂತೆ ಸಂಸ್ಥೇಯ ಆಡಳಿತ ಮಂಡಳಿಯ ಸದಸ್ಯರಾದ ಚಂದ್ರಕಾಂತ ಶಟಕಾರ, ವೀರಭದ್ರಪ್ಪ ಬುಯ್ಯಾ, ರಾಜಶೇಖರ ತಾಂಡೂರ, ರವಿ ಹಾಲಹಳ್ಳಿ, ಆಡಳಿತಾಧಿಕಾರಿ ಪ್ರೋ. ಎಚ್. ಎಸ್. ಪಾಟೀಲ, ಉಪ ಪ್ರಾಚಾರ್ಯರಾದ ಅನಿಲಕುಮಾರ ಚಿಕ್ಕಮಣೂರ, ಗಣಕಯಂತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀಕಾಂತ ದೊಡ್ಡಮನಿ, ಐಕ್ಯೂಎಸಿ ಸಂಯೋಜಕ ರಾಜಮೋಹನ ಪರದೇಶಿ, ಅನಿತಾ ಮಾರ್ಗೆ, ಶಿವಲೀಲಾ ಪಾಟೀಲ, ಜಗದೀಶ ಬೋರಾಳೆ ಹಾಗೂ ವಿವಿಧ ಮಹಾವಿದ್ಯಾಲಯಗಳ ಪ್ರಾಧ್ಯಾಪಕರು ಸೇರಿದಂತೆ ಮಹಾವಿದ್ಯಾಲಯದ ಎಲ್ಲ ಸಹಾಯಕ ಪ್ರಾಧ್ಯಾಪಕರು ಹಾಗೂ 153 ವಿದ್ಯಾಥಿಗಳು ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕ ಡಾ. ಬಿ.ವಿ.ರವಿಚಂದ್ರ ನಿರೂಪಿಸಿದರೆ, ಅಶೋಕ ಹುಡೇದ್ ವಂದಿಸಿದರು.