ಬಿಜೆಪಿಗೆ ಐಟಿ, ಇಡಿ, ಸಿಬಿಐಗಳೇ ಚುನಾವಣಾ ಅಸ್ತ್ರ

| Published : Apr 23 2024, 12:51 AM IST

ಸಾರಾಂಶ

ದಾಬಸ್‌ಪೇಟೆ: ಬಿಜೆಪಿ ಸರ್ಕಾರ ಐಟಿ, ಇಡಿ, ಸಿಬಿಐಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್‌ ಮುಖಂಡರನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದು, ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಆರೋಪಿಸಿದರು.

ದಾಬಸ್‌ಪೇಟೆ: ಬಿಜೆಪಿ ಸರ್ಕಾರ ಐಟಿ, ಇಡಿ, ಸಿಬಿಐಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್‌ ಮುಖಂಡರನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದು, ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಆರೋಪಿಸಿದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧಡೆ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾರಾಮಯ್ಯ ಪರ ಪ್ರಚಾರ ಮಾಡಿ, ಕೇಂದ್ರ ಸರ್ಕಾರ ಇತ್ತೀಚೆಗೆ ನೆಲಮಂಗಲದ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ಮಾಡಿದೆ. ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದಾಳಿ ಮಾಡಿರುವುದು ಸ್ಪಷ್ಟವಾಗಿದೆ ಎಂದರು.

ಶಾಸಕ ಶ್ರೀನಿವಾಸ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ವಾತಾವರಣವಿದೆ. ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ನೆಲಮಂಗಲಕ್ಕೆ ಬಂದಾಗ ಮಾಜಿ ಶಾಸಕರು ಕುಮಾರಸ್ವಾಮಿ ಭಾಷಣ ಮಾಡುವಾಗ ಕಿವಿಯಲ್ಲಿ ಹೇಳೀಕೊಟ್ಟು ಕ್ಷೇತ್ರದ ಜನತೆಗೆ ಕಿರಿಕಿರಿ ಮಾಡುತ್ತಾರೆ ಭಾಷಣ ಮಾಡಿಸಿದ್ದಾರೆ. ನಾನೇನೂ ಇವರ ಹಾಗೆ ಭ್ರಷ್ಟಾಚಾರ ಮಾಡಿಲ್ಲ. ನ್ಯಾಯಯುತ ಮಾರ್ಗದಲ್ಲಿ ಹಣ ಸಂಪಾದಿಸಿದ್ದೇನೆ. ನಾನು ಈಗಾಗಲೇ ಈ ಆರೋಪಗಳಿಗೆ ಉತ್ತರ ನೀಡಿದ್ದೇನೆ. ನಿಮ್ಮ ನೀತಿ ಪಾಠ ನಮಗೆ ಅವಶ್ಯವಿಲ್ಲ. ಮತ್ತೆ ಭ್ರಷ್ಟಾಚಾರ ಆರೋಪ ಮಾಡಿದರೆ ಮಾಜಿ ಶಾಸಕರ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಮಾಜಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು.

ಅಭ್ಯರ್ಥಿ ರಕ್ಷರಾಮಯ್ಯ ಮಾತನಾಡಿ, ನಾನು ಯುವಕನಾಗಿದ್ದು, ಯುವಕನಿಗೆ ಮತ ನೀಡಿ ಗೆಲ್ಲಿಸಿ ನಾನು ನಿಮ್ಮ ಸೇವಕನಾಗಿ ಪಾರ್ಲಿಮೆಂಟ್ ನಲ್ಲಿ ಕ್ಷೇತ್ರದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇನೆ ಎಂದರು.ಪೋಟೋ 2: ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾರಾಮಯ್ಯ ಪರ ಎಂಎಲ್‌ಸಿ ರವಿ ಪ್ರಚಾರ ಮಾಡಿದರು.