ಬಸವ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಸಂತಸ

| Published : Jun 17 2024, 01:39 AM IST

ಬಸವ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಸಂತಸ
Share this Article
  • FB
  • TW
  • Linkdin
  • Email

ಸಾರಾಂಶ

ಚಳ್ಳಕೆರೆ ನಗರದ ಪ್ರಗತಿಪರ ರೈತ ಆರ್.ಎ.ದಯಾನಂದರವರಿಗೆ ಬಸವ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಪ್ರಗತಿಪರ ರೈತ ಆರ್.ಎ.ದಯಾನಂದಮೂರ್ತಿಯವರಿಗೆ ಬಸವಪುರಸ್ಕಾರ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಚಳ್ಳಕೆರೆ12ನೇ ಶತಮಾನದ ಶ್ರೇಷ್ಠ ಪುರುಷ ಜಗಜ್ಯೋತಿ ಬಸವೇಶ್ವರ ಹೆಸರಿನಲ್ಲಿ ಬಸವ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿರುವುದು ಸಂತಸದ ವಿಷಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಬೆಂಗಳೂರಿನ ಕೊಂಡಜ್ಜಿ ಸಭಾಂಗಣದಲ್ಲಿ ಬಸವ ಜಯಂತಿ ಪ್ರಯುಕ್ತ ಬಸವ ಪರಿಷತ್ ಬೆಂಗಳೂರು ಹಮ್ಮಿಕೊಂಡಿದ್ದ ಬಸವ ಪುರಸ್ಕಾರ ಪ್ರಶಸ್ತಿಯನ್ನು ತಾಲೂಕಿನ ಪ್ರಗತಿಪರ ರೈತ ಡಾ.ಆರ್.ಎ.ದಯಾನಂದಮೂರ್ತಿಯವರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಸ್ರೋ ಸಂಸ್ಥೆ ವಿಜ್ಞಾನಿ ಬಿಎಚ್‌ಎಂ ದಾರಕೇಶ, ಪ್ರತಿವರ್ಷ ಬಸವ ಪುರಸ್ಕಾರ ನೀಡುತ್ತಿರುವುದು ಸಂತಸ ತಂದಿದೆ. ವಿಶೇಷವಾಗಿ ಈ ಬಾರಿ ನಾಡಿನ ಪ್ರಗತಿಪರ ರೈತ ಆರ್.ಎ.ದಯಾನಂದಮೂರ್ತಿಗೆ ನೀಡುತ್ತಿರುವುದು ಸೂಕ್ತವಾಗಿದೆ. ದಯಾನಂದಮೂರ್ತಿ ಕಳೆದ ಹಲವಾರು ದಶಕಗಳಿಂದ ತಮ್ಮ ಕೃಷಿ ಕಾಯಕದ ಮೂಲಕವೇ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದಿದ್ದಾರೆ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಗತಿಪರ ರೈತ ಡಾ.ಆರ್.ಎ. ದಯಾನಂದಮೂರ್ತಿ, ನನ್ನ ಜೀವಮಾನದಲ್ಲೇ ಅತ್ಯುತ್ತಮ ಸಾಧನೆ ಮಾಡಿದ ದಿನವೆಂದು ಭಾವಿಸುವೆ. ವಿದೇಶದಲ್ಲಿ ಪ್ರಶಸ್ತಿ ಪಡೆದರೂ ನನಗೆ ತೃಪ್ತಿ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಬಸವ ಪ್ರಶಸ್ತಿ ಸಿಕ್ಕಿರುವುದು ಅಲ್ಲದೆ ಮೂರು ಬಾರಿ ಬಸವ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಸಂತಸ ಉಂಟಾಗಿದೆ ಎಂದರು.