ವಿದ್ಯಾವಂತರು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವುದು ದುರಂತ: ಡಾ. ನಾಗೇಶ್ ಕಳವಳ

| Published : Nov 19 2025, 12:30 AM IST

ವಿದ್ಯಾವಂತರು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವುದು ದುರಂತ: ಡಾ. ನಾಗೇಶ್ ಕಳವಳ
Share this Article
  • FB
  • TW
  • Linkdin
  • Email

ಸಾರಾಂಶ

ಸಾಲುಮರದ ತಿಮ್ಮಕ್ಕನವರ ಸಮಾಜಮುಖಿ ಕೆಲಸಗಳನ್ನು ನೆನಪಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ಜ್ಞಾನಸಾಗರ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಜ್ಞಾನಸಾಗರ ಪಿಯು ಕಾಲೇಜಿನ ಸಹಯೋಗದೊಂದಿಗೆ ಮಕ್ಕಳ ದಿನವನ್ನು ಆಚರಿಸಲಾಯಿತು.

ನಾಗೇಶ್ ಎಜುಕೇಷನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಡಾ. ಕೆ. ನಾಗೇಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಉತ್ತಮ ಸಂಸ್ಕಾರಯುತ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಪಡೆದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಉಪಯೋಗಿಸಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೇ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವುದು ದುರಂತ ಎಂದು ದೆಹಲಿಯಲ್ಲಿ ನಡೆದ ಬಾಂಬ್ ದುರಂತದ ಘಟನೆಯನ್ನು ಸ್ಮರಿಸಿದರು.

ಸಾಲುಮರದ ತಿಮ್ಮಕ್ಕನವರ ಸಮಾಜಮುಖಿ ಕೆಲಸಗಳನ್ನು ನೆನಪಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆ ಮಾಡಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಭಾರತಿ ನಾಗೇಶ್ ಮಾತನಾಡಿ, ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ಅವಶ್ಯಕವಾಗಿ, ಸಂಸ್ಕಾರವಿಲ್ಲದ ಶಿಕ್ಷಣ ವ್ಯರ್ಥ ಹಾಗಾಗಿ ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು, ಬಾಲ್ಯದ ದಿನಗಳನ್ನು ಸಂತೋಷದಿಂದ ಪರಿಪೂರ್ಣವಾಗಿ ಕಲಿಯುತ್ತಾ ಕಳಿಯಬೇಕು ಎಂದರು.

ಮಕ್ಕಳ ಮನರಂಜನೆಗಾಗಿ ಶಿಕ್ಷಕರು, ಶಿಕ್ಷಕಿಯರ ವೃಂದದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಡಾ. ಸುಜಾ ಫಿಲಿಪ್, ಆಡಳಿತಾಧಿಕಾರಿ ಫಿಲಿಪ್, ವಿಶೇಷ ಅತಿಥಿಗಳಾದ ಮಾಸ್ಟರ್ ಚೇತನ್, ಉದೀಪ್ತಿ, ಬೋಧಕ- ಬೋಧಕೇತರ ವೃಂದ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.