ಸಾರಾಂಶ
ರಾಜ್ಯದಲ್ಲಿ ನೂರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಸಂಗತಿ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ತುರುವೇಕೆರೆ
ರಾಜ್ಯದಲ್ಲಿ ನೂರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಸಂಗತಿ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ತಾಲೂಕು ಆಡಳಿತದಿಂದ ನಡೆದ ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳೆಂದರೆ ಜನರಿಗೆ ತಾತ್ಸಾರ ಮನೋಭಾವ ಮನೆ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸವಲತ್ತುಗಳು ನೂರಾರು. ಇಲ್ಲಿ ನುರಿತ ಮತ್ತು ವಿದ್ಯಾವಂತ ಶಿಕ್ಷಕರು ಇದ್ದಾರೆ. ಆದರೂ ಸಹ ಜನರಿಗೆ ಏಕೋ ಸರ್ಕಾರಿ ಶಾಲೆಗಳೆಂದರೆ ಬೇಡವಾಗಿದೆ. ಇದಕ್ಕೆ ಕಾರಣವೇನೆಂಬುದನ್ನು ಅರಿಯಬೇಕಿದೆ. ಇದರ ಉದಾಸೀನತೆಗೆ ಇರುವ ಕಾರಣವನ್ನು ಹುಡುಕಲು ಪೋಷಕರು, ಶಿಕ್ಷಕರು ತಮ್ಮ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದರು.ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಪ್ರೌಢಶಾಲೆ, ಪದವಿ ಪೂರ್ವ ಕಾಲೆಜಿನ ವಿದ್ಯಾರ್ಥಿಗಳನ್ನು ಶಾಸಕರು ಸೇರಿದಂತೆ ವಿವಿಧ ಗಣ್ಯರು ಅಭಿನಂದಿಸಿದರು. ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅನಂತರಾಮು, ಬಿ.ಆರ್.ಸಿ.ಸುರೇಶ್, ಉಪ ಪ್ರಾಂಶುಪಾಲ ವೆಂಕಟೇಶ್, ಶಿಕ್ಷಣ ಇಲಾಖಾ ಅಧಿಕಾರಿಗಳಾದ ನಳಿನಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ, ಬಿ.ಆರ್.ಪಿ ಕೆ.ಆರ್.ಸುರೇಶ್, ಎಸ್ ಡಿ ಎಂ ಸಿ ಅಧ್ಯಕ್ಷ ದೇವರಾಜು. ಮುನಿಯೂರು ರಂಗಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕ ನಂಜೇಗೌಡ ಸ್ವಾಗತಿಸಿದರು. ಗುರುಮೂರ್ತಿ ವಂದಿಸಿದರು.
;Resize=(128,128))
;Resize=(128,128))