ತರೀಕೆರೆನಮ್ಮ ಗ್ರಾಮದ ಶ್ರದ್ಧಾಕೇಂದ್ರ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಹೇಳಿದ್ದಾರೆ.
-ಇಟ್ಟಿಗೆ ಗ್ರಾಮದಲ್ಲಿ ಶ್ರದ್ದಾಕೇಂದ್ರ ಸ್ವಚ್ಛತೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ತರೀಕೆರೆನಮ್ಮ ಗ್ರಾಮದ ಶ್ರದ್ಧಾಕೇಂದ್ರ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಹೇಳಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇಟ್ಟಿಗೆ ಗ್ರಾಮದ ಶ್ರೀ ಈಶ್ವರ ದೇವಸ್ಥಾನ ಆವರಣದಲ್ಲಿ ಶ್ರದ್ಧಾಕೇಂದ್ರದಿಂದ ನಡೆದ ಸ್ವಚ್ಛತೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ಬೆಳೆದು ಬಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಯವರ ಆಶಯದಂತೆ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಕಟಿಬದ್ಧವಾಗಿದೆ. ಈ ಸಂಬoಧ ಯೋಜನೆ ಕಾರ್ಯಕ್ರಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.ಯೋಜನೆ ಪಾಲುದಾರರೆಲ್ಲರೂ ಸ್ವಚ್ಛತೆ ಬಗ್ಗೆ ಅಭಿಮಾನವುಳ್ಳವರಾಗಿದ್ದಾರೆ. ಧಾರ್ಮಿಕ ಕೇಂದ್ರಗಳು ಮನು ಕುಲಕ್ಕೆ ಬದುಕುವ ರೀತಿ ತಿಳಿಸುವ ಕೇಂದ್ರಗಳೂ ಆಗಿವೆ. ಸ್ವಚ್ಛತೆ ಪರಿಕಲ್ಪನೆ ಆರಂಭ ಗೊoಡರೆ ರಾಜ್ಯದ ಪ್ರತಿ ಮನೆಯಲ್ಲಿಯೂ ಜಾಗೃತಿ ಮೂಡಿಸಬಹುದೆಂದು ಡಾ. ಡಿ. ವೀರೇಂದ್ರ ಹೆಗ್ಗಡೆ “ಸ್ವಚ್ಛ ಶ್ರದ್ಧಾ ಕೇಂದ್ರದ ಪರಿಕಲ್ಪನೆಗೆ ಚಾಲನೆ ನೀಡಿದ್ದಾರೆ. ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ತಮ್ಮ ಶ್ರದ್ಧಾ ಕೇಂದ್ರ ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಮುಂದಕ್ಕೆ ಗ್ರಾಮಸ್ಥರೆಲ್ಲರೂ ಸೇರಿ ಸ್ವಚ್ಛತೆ ಕಾಪಾಡಿಕೊಳ್ಳುವ ಜನರ ಸಹಭಾಗಿತ್ವದ ಈ ಕಲ್ಪನೆ ಸಾಮಾನ್ಯರಲ್ಲಿ ಬಹಳಷ್ಟು ಉತ್ಸಾಹ ಮೂಡಿಸಿದೆ. ಕಳೆದ ಆರು ವರ್ಷ ಗಳಿಂದ ನಿರಂತರವಾಗಿ ವರ್ಷಕ್ಕೆ 2 ಬಾರಿಯಂತೆ ಸಾಮುದಾಯಿಕ ಸ್ವಚ್ಛತಾ ಕಾರ್ಯಕ್ರಮ ರಾಜ್ಯಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.ನಾಡಿನಾದ್ಯಂತ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ 2016 ರಿಂದ ಪ್ರಾರಂಭಿಸಲಾಗಿದೆ. ಕಳೆದ 6 ವರ್ಷಗಳಲ್ಲಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿರುತ್ತದೆ. ಪ್ರಸ್ತುತ ವರ್ಷವೂ ಸ್ವಚ್ಚತೆಯೆಡೆಗೆ ನಮ್ಮ ನಡಿಗೆ ಎಂಬ ದಿಟ್ಟ ನಿಲುವಿನೊಂದಿಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಂಡು ನಮ್ಮ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕೆಂಬ ಸಂದೇಶ ನೀಡಲಾಗಿದೆ ಎಂದು ತಿಳಿಸಿದರು. ವಲಯದ ಮೇಲ್ವಿಚಾರಕ ರಮೇಶ್, ಒಕ್ಕೂಟ ಅಧ್ಯಕ್ಷ ಜಯಂತಿ, ಅರ್ಚಕ ವಿನಾಯಕ, ಸೇವಾಪ್ರತಿನಿಧಿ ಉಷಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
-20ಕೆಟಿಆರ್.ಕೆ.4ಃ
ತರೀಕೆರೆ ಸಮೀಪದ ಇಟ್ಟಿಗೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕುಸುಮಾಧರ್ ಮಾತನಾಡಿದರು.