ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುರಾಜ್ಯ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ನಗರ ಸ್ಥಳೀಯ ಸಮಿತಿಯು ಗಾಂಧಿಚೌಕದಲ್ಲಿ ಪ್ರತಿಭಟಿಸಿದರು.ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇ. 15ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಸಿಪಿಐ ಖಂಡಿಸುತ್ತದೆ. ಡೀಸೆಲ್ ದರ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ ಏರಿಸಿರುವುದು ಅಪ್ರಜಾಸತ್ತಾತ್ಮಕ ಮತ್ತು ಅವೈಜ್ಞಾನಿಕ ಎಂದು ಅವರು ದೂರಿದರು.ಡೀಸೆಲ್ ದರ ಹೆಚ್ಚಾಗಿದೆ ಎನ್ನು ಸರ್ಕಾರ, ಡೀಸೆಲ್ ದರ ಇಳಿದಾಗ ಎಂದಾದರೂ ಬಸ್ ಪ್ರಯಾಣ ದರ ಕಡಿಮೆ ಮಾಡಿದೆಯೇ? ಅದಕ್ಕಿಂತ ಮುಖ್ಯವಾಗಿ ಸಾರ್ವನಿಕ ಸಾರಿಗೆಯ ಡೀಸೆಲ್ ದರವನ್ನು ಕಡಿಮೆ ಇಡಬೇಕಾದ್ದು ಸರ್ಕಾರದ ಜವಾಬ್ದಾರಿ. ವಿಪರ್ಯಾಸವೆಂದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ದರವು ಮುಕ್ತ ಮಾರುಕಟ್ಟೆ ದರಗಳಿಗಿಂತ ದುಬಾರಿಯಾಗಿದೆ ಎಂದು ಅವರು ಆರೋಪಿಸಿದರು.ಸರ್ಕಾರಕ್ಕೆ ನಿಜಕ್ಕೂ ವೆಚ್ಚ ಕಡಿಮೆ ಮಾಡಬೇಕೆಂದಿದ್ದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವು ಮುಕ್ತ ಮಾರುಕಟ್ಟೆ ದರಕ್ಕಿಂತ ದುಬಾರಿಯಾಗಿದೆ. ಸರ್ಕಾರಕ್ಕೆ ನಿಜಕ್ಕೂ ವೆಚ್ಚ ಕಡಿಮೆ ಮಾಡಬೇಕೆಂದಿದ್ದರೆ ಸಾರಿಗೆ ನಿಗಮಕ್ಕೆ ಪೂರೈಸುವ ಡೀಸೆಲ್ ದರವನ್ನು ಸಬ್ಸಿಡಿ ದರದಲ್ಲಿ ಪೂರೈಸಬೇಕು ಅಥವಾ ಮುಕ್ತ ಮಾರುಕಟ್ಟೆ ದರಗಳಲ್ಲಾದರೂ ಪೂರೈಸಬೇಕು ಎಂದು ಅವರು ಆಗ್ರಹಿಸಿದರು.ಆದ್ದರಿಂದ ಶೇ. 15ರ ದರ ಹೆಚ್ಚಳಕ್ಕೆ ಡೀಸೇಲ್ ದರ ಹೆಚ್ಚಳ ಕಾರಣ ಎನ್ನುವುದು ಸುಳ್ಳು ನೆಪ. ಸಿಬ್ಬಂದಿ ವೆಚ್ಚ ಹೆಚ್ಚಾಗಿರುವುದು ಮತ್ತೊಂದು ಕಾರಣ ಎನ್ನಲಾಗಿದೆ. ಈಗಾಗಲೇ ನಾಲ್ಕು ನಿಗಮಗಳಲ್ಲಿ ಸಿಬ್ಬಂದಿಗೆ ಸುಮಾರು 3 ವರ್ಷಗಳ ವೇತನ ಬಾಕಿ ನೀಡಬೇಕಿದೆ ಮತ್ತು ಹೊಸ ವೇತನ ಒಪ್ಪಂದ ಮಾಡಬೇಕಿದೆ ಎಂದರು.ಸಾರಿಗೆ ನಿಗಮಗಳ ನಷ್ಟ ಕಡಿಮೆ ಮಾಡಲು ಸಾರ್ವಜನಿಕರ, ರಾಜಕೀಯ ಪಕ್ಷಗಳ ಸಲಹೆಗಳನ್ನು ಆಡಳಿತ ವರ್ಗ ಪಡೆಯಬಹುದು. ಆಡಳಿತಾತ್ಮಕ ವಿಧಾನಗಳಲ್ಲಿ ಸಾಕಷ್ಟು ನಷ್ಟ ಕಡಿಮೆ ಮಾಡಬಹುದು. ಪ್ರಯಾಣಿಕರ ಸಾರಿಗೆ ದರ ಹೆಚ್ಚಳ ಉತ್ತಮ ಮಾರ್ಗವಲ್ಲ. ಎಲೆಕ್ಟ್ರಿಕ್ ಬಸ್ ಗಳನ್ನು ನಿಗಮಗಳೇ ಕಾರ್ಯಾಚರಣೆ ಮಾಡಿದರೆ ಸಾಕಷ್ಟು ಆದಾಯ ಹೆಚ್ಚುತ್ತದೆ ಎಂದರು.ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಎನ್. ಸುಬ್ರಹ್ಮಣ್ಯ, ರಾಜೇಂದ್ರ, ವಿಜಯಕುಮಾರ್, ಬಾಲಾಜಿರಾವ್, ಜಯರಾಂ, ಕೆ. ಬಸವರಾಜ್, ನಾಗರಾಜ್ ಮೊದಲಾದವರು ಇದ್ದರು.