ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಸಲೀಂ ಅಹ್ಮದ್‌

| Published : May 01 2024, 01:18 AM IST

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಸಲೀಂ ಅಹ್ಮದ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಹಾವೇರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ತಮ್ಮೆಲ್ಲರ ಹೋರಾಟದ ಪರಿಣಾಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಹಲವು ಕನಸು ಮತ್ತು ಗುರಿಯೊಂದಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಆನಂದಸ್ವಾಮಿ ಗಡ್ಡದೇವರಮಠ ಅವರ ಕನಸು ನನಸು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಎಲ್ಲ ಶಾಸಕರೊಂದಿಗೆ ಒಡನಾಟವಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ತಮ್ಮ ಬೇಡಿಕೆಗಳಿಗೆ ಖಂಡಿತವಾಗಿ ಸ್ಪಂದಿಸುವರು ಎಂದರು.ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹೇಶ ಹಾವೇರಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ. ಅವರು ಗೆಲುವು ಸಾಧಿಸಿದ ಬಳಿಕ ಗುತ್ತಿಗೆದಾರರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.ಬ್ಯಾಡಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಡಾ.ಸಂಜಯ ಡಾಂಗೆ, ಸಂಘದ ದಾಸಪ್ಪ ಕರ್ಜಗಿ, ಪ್ರಭು ಎ.ಎಂ, ನಿರಂಜನ ಮರಡೂರಮಠ, ಕೊಟ್ರೇಶ ಮಂಜಲಾಪುರ, ಬಿ.ಎಚ್.ಹುಲ್ಲತ್ತಿ, ರಮೇಶ ಸುತ್ತಕಟ್ಟಿ, ಗಂಗಾಧರ ಕರಬಸಣ್ಣನವರ, ಬಿ.ಕೆ. ಲಕ್ಷ್ಮೇಶ್ವರಮಠ, ಮುತ್ತು ಕೊರವರ ಇದ್ದರು.