ಮಹಿಳೆಯರು ಕೌಟುಂಬಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹಲವು ರೀತಿಯ ದೌರ್ಜನ್ಯ ಎದುರಿಸುತ್ತಿದ್ದಾರೆ. ಹೀಗಾಗಿ ಹಕ್ಕುಗಳ ಬಗ್ಗೆ ತಿಳಿದು ಅನ್ಯಾಯದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು ಎಂದರು. ಮಹಿಳೆಯರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.

ಕೆ.ಎಂ.ದೊಡ್ಡಿ: ಮಹಿಳೆಯರು ದೌರ್ಜನ್ಯ ತಡೆಯುವ ಜೊತೆಗೆ, ತಮ್ಮ ಹಕ್ಕುಗಳು, ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ಜಾಗೃತರಾಗುವುದು ಅಗತ್ಯ ಎಂದು ಭಾರತೀನಗರ ರೋಟರಿ ಸೆಂಟ್ರಲ್‌ ಕಾರ್ಯದರ್ಶಿ ಡಾ.ಸೌಮ್ಯ ರಾಜೇಶ್ ಹೇಳಿದರು. ಮಣಿಗೆರೆ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ ಹಾಗೂ ಐಕ್ಯೂಎಸಿ ವತಿಯಿಂದ ಆಯೋಜಿಸಿದ್ದ ಮಹಿಳಾ ದೌರ್ಜನ್ಯ ತಡೆ ಮತ್ತು ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಕೌಟುಂಬಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹಲವು ರೀತಿಯ ದೌರ್ಜನ್ಯ ಎದುರಿಸುತ್ತಿದ್ದಾರೆ. ಹೀಗಾಗಿ ಹಕ್ಕುಗಳ ಬಗ್ಗೆ ತಿಳಿದು ಅನ್ಯಾಯದ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು ಎಂದರು. ಮಹಿಳೆಯರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೆ ಸೂಕ್ತ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ಎ.ಟಿ.ಶ್ರೀನಿವಾಸಮೂರ್ತಿ ಮಾತನಾಡಿದರು. ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ ಸಂಚಾಲಕಿ ಡಾ.ಶಾರದಮ್ಮ, ಐಕ್ಯೂಎಸಿ ಸಂಚಾಲಕ ಡಾ.ಪಾರ್ಥ, ಪ್ರೊ.ಮಂಚಯ್ಯ, ಪ್ರೊ.ಬರಗೂರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಸುರೇಶ್ ಬಾಬು, ಗ್ರಂಥಪಾಲಕ ಡಾ. ಸುರೇಂದ್ರ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.