ಸಂವಿಧಾನಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳುವದು ಎಲ್ಲರ ಕರ್ತವ್ಯ: ಅಶೋಕ ಪಟ್ಟಣ

| Published : Sep 16 2024, 01:53 AM IST

ಸಂವಿಧಾನಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳುವದು ಎಲ್ಲರ ಕರ್ತವ್ಯ: ಅಶೋಕ ಪಟ್ಟಣ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವದ ಶ್ರೇಷ್ಠ ಸಂವಿಧಾನ ಭಾರತದಾಗಿದ್ದು ಸರ್ವಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ನೀಡಿದ ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ವಿಶ್ವದ ಶ್ರೇಷ್ಠ ಸಂವಿಧಾನ ಭಾರತದಾಗಿದ್ದು ಸರ್ವಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ನೀಡಿದ ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕಿನ ಸಾಲಹಳ್ಳಿಯಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಬೃಹತ್ ಮಾನವ ಸರಪಳಿಗೆ ಚಾಲನೆ ನೀಡಿ ಮಾತನಾಡಿ, ಕೆಲವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದು, ಅದಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ. ಅಂತವರಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ಆದರೂ ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಸೀಲ್ದಾರ ಪ್ರಕಾಶ ಹೊಳೆಪ್ಪಗೋಳ ಸಂವಧಾನ ರಕ್ಷಣೆ ಮತ್ತು ಸಂವಿಧಾನ ಬದ್ಧವಾದ ಹಕ್ಕು ಕರ್ತವ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲ ಅಳವಡಸಿಕೊಳ್ಳಬೇಕೆಂದು ಹೇಳಿದರು.

ತಾಲೂಕಿನ ದಾ. ಸಾಲಾಪುರದಿಂದ ಎಂ.ಚಂದರಗಿವರಗೆ ನಿರ್ಮಾಣವಾದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಭಾಗವಹಿಸಿ ಸುಮಾರು 25 ಕಿಮೀವರೆಗೆ ಭಾಗವಹಿಸಿದ್ದರು.

ತಾಪಂ ಇಒ ಪ್ರವೀಣಕುಮಾರ ಸಾಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸಾಂಕೇತಿಕವಾಗಿ ಸಸಿ ನೆಡಲಾಯಿತು. ಕಾರ್ಯಕ್ರಮದಲ್ಲಿ ಕದಾಂಪೂರ ಗ್ರಾಪಂ ಅಧ್ಯಕ್ಷ ಹಣಮಂತ ಬಂಡಿವಡ್ಡರ, ಉಪಾಧ್ಯಕ್ಷೆ ರೂಪಾ ಅರಮನಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ, ಸಾಮಾಜಿಕ ಅರಣ್ಯ ಇಲಾಖೆಯ ದಾನಮ್ಮ ಇತರರು ಇದ್ದರು.