ವೃತ್ತಿ ಧರ್ಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ

| Published : Apr 27 2025, 01:45 AM IST

ವೃತ್ತಿ ಧರ್ಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ವೃತ್ತಿ ಧರ್ಮ ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಮಾಜಿ ಇನ್ನರ್ವಿಲ್ ಕ್ಲಬ್ ಅಧ್ಯಕ್ಷೆ ನಾಗರತ್ನ ಮನಗೂಳಿ ಅಭಿಪ್ರಾಯ ಪಟ್ಟರು. ಸಿಂದಗಿ ಪಟ್ಟಣದ ಓಂ ಶಾಂತಿ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ತಾಲೂಕು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ನಡೆದ ಆಶಾ ಕಾರ್ಯಕರ್ತೆಯರಿಗಾಗಿ ವೃತ್ತಿ ಕೌಶಲ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು ಸಮಾಜದ ಭರವಸೆಯ ಬೆಳಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಸಿಂದಗಿ

ವೃತ್ತಿ ಧರ್ಮ ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಮಾಜಿ ಇನ್ನರ್ವಿಲ್ ಕ್ಲಬ್ ಅಧ್ಯಕ್ಷೆ ನಾಗರತ್ನ ಮನಗೂಳಿ ಅಭಿಪ್ರಾಯ ಪಟ್ಟರು.

ಸಿಂದಗಿ ಪಟ್ಟಣದ ಓಂ ಶಾಂತಿ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ತಾಲೂಕು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ನಡೆದ ಆಶಾ ಕಾರ್ಯಕರ್ತೆಯರಿಗಾಗಿ ವೃತ್ತಿ ಕೌಶಲ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು ಸಮಾಜದ ಭರವಸೆಯ ಬೆಳಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಎಂದರೆ ಆಸೆ, ಹಾರೈಕೆ, ಭರವಸೆಯಲ್ಲಿ ಪ್ರತಿ ವ್ಯಕ್ತಿಯ ಬದುಕಿಗೆ ಮತ್ತು ಸ್ವಾಸ್ತ್ಯ ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಇವರ ಕಾರ್ಯ ಶ್ಲಾಘನೀಯವಾಗಿದೆ. ಜನಸೇವೆಗೆ ಅವಕಾಶ ಸಿಕ್ಕಾಗ ಬಿಡದೆ ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.ಅತಿಥಿಯಾಗಿ ಮಾತನಾಡಿದ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಚಿನ ಉಟಗಿ, ಧರ್ಮ-ದೇವರುಗಳ ಪರಿಕಲ್ಪನೆಯಲ್ಲಿ ಪ್ರಕೃತಿದತ್ತ ತೋಟಗಾರಿಕೆ ಮತ್ತು ಆಧ್ಯಾತ್ಮ ಎರಡು ಒಂದೇ. ಆಧ್ಯಾತ್ಮ ಮನವನ್ನು ಅರಳಿಸಿದರೆ ಪ್ರಕೃತಿ ಹೂಗಳನ್ನು ಸಸಿಗಳನ್ನು ಅರಳಿಸುತ್ತದೆ. ಹಾಗೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಆಧ್ಯಾತ್ಮದ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಿದರೆ, ಆಶಾ ಕಾರ್ಯಕರ್ತೆಯರು ಸಮಾಜದಲ್ಲಿ ಆರೋಗ್ಯ ಕಾಪಾಡುವ ಮೂಲಕ ರೋಗ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಬಾಗಲಕೋಟೆ ಸೇವಾ ಕೇಂದ್ರದ ಸಂಚಾಲಕಿ ಬಿ.ಕೆ.ನಾಗರತ್ನ, ಅಲಮೇಲ ಸೇವಾ ಕೇಂದ್ರದ ಸಂಚಾಲಕಿ ಬಿ.ಕೆ.ರೇಣುಕಾ, ಸಿಂದಗಿ ಸೇವಾ ಕೇಂದ್ರದ ಸಂಚಾಲಕಿ ಪವಿತ್ರಾ.ಜಿ, ಎಂ.ಕೆ.ಹುಬ್ಬಳ್ಳಿ ಸೇವಾ ಕೇಂದ್ರ ಸಂಚಾಲಕಿ ಬಿ.ಕೆ.ಜ್ಯೋತಿ, ಬಿ.ಕೆ.ಗಾಯತ್ರಿ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಸರೋಜಿನಿ ಪೊದ್ಧಾರ ವೇದಿಕೆ ಮೇಲಿದ್ದರು. ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕರಿಸಿದರು. ಶಿಕ್ಷಕ ಸಿದ್ದಲಿಂಗ ಚೌದರಿ ನಿರೂಪಿಸಿದರು.ಈ ಸಂದರ್ಭದಲ್ಲಿ ಎಸ್.ವೈ.ಬಿರಾದಾರ, ಎಂ.ಎಂ.ದೊಡ್ಡಮನಿ, ಕೆ.ಎಸ್.ಪತ್ತಾರ, ಐಶ್ವರ್ಯ ನಾಯಕ, ತಾನಾಜಿ ಕನ್ಸೆ, ವಿಜಯಕುಮಾರ ತೇಲಿ ವಿಜಯಕುಮಾರ ಪತ್ತಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಸುಮಾರು 200 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.