ದೇಶದ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ

| Published : Nov 27 2024, 01:04 AM IST

ಸಾರಾಂಶ

It is everyone's duty to respect the constitution of the country

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ದೇಶದ ಸಂವಿಧಾನಕ್ಕೆ ಚ್ಯುತಿ ಬಾರದಂತೆ ಅದರ ಆಶಯಗಳಿಗೆ ಬದ್ಧರಾಗಿ ಬಾಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಸೀಲ್ದಾರ್ ಆರ್‌ ಜಗದೀಶ್ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಂವಿಧಾನ ಸಮರ್ಪಣಾ ದಿನ ಆಚರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಡೀ ವಿಶ್ವದಲ್ಲಿಯೇ ಭಾರತದ ಸಂವಿಧಾನಕ್ಕೆ ವಿಶೇಷ ಸ್ಥಾನ ಇದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಲ್ಪನೆಯೊಂದಿಗೆ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ನ್ಯಾಯ ಕಲ್ಪಿಸಿದೆ. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ.

ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ-ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ. ಸಂವಿಧಾನದ ಮೂಲ ಆಶಯಗಳು ಮತ್ತು ಕಾನೂನು ಅಂಶಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಪ್ರತಿ ಶಾಲೆ, ಸರ್ಕಾರಿ ಕಚೇರಿ ಸೇರಿದಂತೆ ನಾನಾ ಕಡೆಯಲ್ಲಿ ಡಾ.ಬಿ.ಅಂಬೇಡ್ಕರ್ ಭಾವ ಚಿತ್ರ ಇಟ್ಟು ಪೂಜೆ ಮಾಡುವ ಮೂಲಕ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.