ಚನ್ನಪಟ್ಟಣ: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದ್ದು, ಅಂಧಕಾರವನ್ನು ದೂರ ಮಾಡಿ ಸುಜ್ಞಾನ ತುಂಬಿ ಸತ್ಪ್ರಜೆಗಳನ್ನು ರೂಪಿಸುವ ಗುರುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತ ವಿಕಾಸ್ ಪರಿಷತ್ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು

-ಮಂಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನೆ

ಚನ್ನಪಟ್ಟಣ: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದ್ದು, ಅಂಧಕಾರವನ್ನು ದೂರ ಮಾಡಿ ಸುಜ್ಞಾನ ತುಂಬಿ ಸತ್ಪ್ರಜೆಗಳನ್ನು ರೂಪಿಸುವ ಗುರುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತ ವಿಕಾಸ್ ಪರಿಷತ್ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು.

ತಾಲೂಕಿನ ಮಂಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ವಿಕಾಸ್ ಪರಿಷತ್ ಕಣ್ವ ಶಾಖೆ ಹಮ್ಮಿಕೊಂಡಿದ್ದ ಗುರುವಂದನಾ-ಛಾತ್ರಾಭಿನಂದನಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಆನಂದ್ ಅವರನ್ನು ಗೌರವಿಸಿ ಮಾತನಾಡಿದ ಅವರು, ಶಿಕ್ಷಕರ ವೃತ್ತಿ ಪವಿತ್ರವಾದದ್ದು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು.

ಕಣ್ವ ಶಾಖೆ ಮಾಜಿ ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ಭಾವಿಪ ಶಾಖೆಯಿಂದ ಪ್ರತಿವರ್ಷ ಸರ್ಕಾರಿ ಶಾಲೆಯ ಓರ್ವ ಉತ್ತಮ ಶಿಕ್ಷಕರನ್ನು ಸನ್ಮಾನಿಸುತ್ತೇವೆ. ೨೮ ವರ್ಷಗಳಿಗೂ ಹೆಚ್ಚು ಕಾಲ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿರುವ, ಮಂಕುಂದ ಸರ್ಕಾರಿ ಶಾಲೆ ಶಿಕ್ಷಕ ಆನಂದ್ ಅವರಿಗೆ ಗುರುವಂದನೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಭಾವಿಪ ಪ್ರಾಂತ ಉಪಾಧ್ಯಕ್ಷ ಗುರುಮಾದಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅರಳಾಪುರ ಬಸವರಾಜು, ಭಾವಿಪ ಕಾರ್ಯದರ್ಶಿ ಯೋಗೇಶ್ ಚಕ್ಕೆರೆ, ಬೆಸ್ಕಾಂ ಶಿವಲಿಂಗಯ್ಯ, ಖಜಾಂಚಿ ವಿ.ಟಿ.ರಮೇಶ್, ಉಪಾಧ್ಯಕ್ಷ ಕರಿಯಪ್ಪ, ಪದಾಧಿಕಾರಿಗಳಾದ ಕೃಷ್ಣಕುಮಾರ್, ಟಿ.ಎನ್.ದೇವರಾಜು, ಮಂಕುಂದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶೋಭಾ, ಎಸ್‌ಡಿಎಂಸಿ ಅಧ್ಯಕ್ಷ ಬೀರಯ್ಯ, ಉಪಾಧ್ಯಕ್ಷೆ ಹರ್ಷಿತಾ ಇತರರಿದ್ದರು.

ಪೊಟೋ೨೧ಸಿಪಿಟಿ೩:

ಚನ್ನಪಟ್ಟಣ ತಾಲೂಕಿನ ಮಂಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ವಿಕಾಸ್ ಪರಿಷತ್ ಕಣ್ವ ಶಾಖೆ ಹಮ್ಮಿಕೊಂಡಿದ್ದ ಗುರುವಂದನಾ-ಛಾತ್ರಾಭಿನಂದನಾ ಕಾರ್ಯಕ್ರಮದಲ್ಲಿ ಶಿಕ್ಷಕ ಆನಂದ್ ಅವರನ್ನು ಗೌರವಿಸಲಾಯಿತು.