ಕೆರೆ-ಕಟ್ಟೆ ಉಳಿಸಿ ಅಭಿವೃದ್ಧಿಪಡಿಸುವುದು ಎಲ್ಲರ ಕರ್ತವ್ಯ: ಸತೀಶ್ ಸುವರ್ಣ

| Published : Oct 02 2024, 01:02 AM IST

ಕೆರೆ-ಕಟ್ಟೆ ಉಳಿಸಿ ಅಭಿವೃದ್ಧಿಪಡಿಸುವುದು ಎಲ್ಲರ ಕರ್ತವ್ಯ: ಸತೀಶ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಕೆರೆ ಕಟ್ಟೆಗಳನ್ನು ಉಳಿಸಿ ಅಭಿವೃದ್ಧಿ ಪಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು. ತಿಪಟೂರಿನಲ್ಲಿ ರಟ್ಟೇನಹಳ್ಳಿ ಕೆರೆ ಹಸ್ತಾಂತರ ಮತ್ತು ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಕೆರೆ ಕಟ್ಟೆಗಳನ್ನು ಉಳಿಸಿ ಅಭಿವೃದ್ಧಿ ಪಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.

ತಾಲೂಕಿನ ಹೊನ್ನವಳ್ಳಿ ಹೋಬಳಿ ರಟ್ಟೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ಯಾರಘಟ್ಟ ಗ್ರಾಪಂ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಸಂಯುಕ್ತಾಶ್ರಯದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ರಟ್ಟೇನಹಳ್ಳಿ ಕೆರೆ ಹಸ್ತಾಂತರ ಮತ್ತು ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.

ಜಲಮೂಲವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೆರೆಕಟ್ಟೆಗಳ ಅಭಿವೃದ್ಧಿಯಾಗಬೇಕೆಂಬ ದೃಷ್ಟಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಮ್ಮೂರು ನಮ್ಮ ಕೆರೆಯಂತಹ ಪುನಶ್ಚೇತನ ಕಾರ್ಯಗಳನ್ನು ಜಾರಿಗೆ ತಂದು ಗ್ರಾಮಗಳ ಕೆರೆಕಟ್ಟೆಗಳನ್ನು ಹೂಳೆತ್ತುವ ಮೂಲಕ ಅಂತರ್ಜಲ ವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.

ತಾಲೂಕು ಯೋಜನಾಧಿಕಾರಿ ಕೆ.ಉದಯ್, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧೀಕಾರಿ ಸುದರ್ಶನ್ ಮತನಾಡಿದರು. ಕಾರ್ಯಕ್ರಮದಲ್ಲಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ್‌ಕುಮಾರ್, ಉಪಾಧ್ಯಕ್ಷ ದಕ್ಷಿಣಮೂರ್ತಿ, ಗ್ರಾಪಂ ಅಧ್ಯಕ್ಷೆ ಸುಶೀಲ, ಸದಸ್ಯ ಲೋಕೇಶ್, ಚಿಕ್ಕಹೊನ್ನವಳ್ಳಿ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಶಶಿಧರ್, ಜನ ಜಾಗೃತಿ ಸಮಿತಿ ಸದಸ್ಯ ಮಲ್ಲಿಗಪ್ಪಾಚಾರ್, ಕೆರೆ ಅಭಿಯಂತರ ಭರತ್, ಕೃಷಿ ಮೇಲ್ವಿಚಾರಕ ಪ್ರಮೋದ್ ಕುಮಾರ್, ಹೊನ್ನವಳ್ಳಿ ವಲಯ ಮೇಲ್ವಿಚಾರಕ ಪರಶಿವಮೂರ್ತಿ ಮತ್ತಿತರರಿದ್ದರು.