ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ಎಲ್ಲರ ಕರ್ತವ್ಯ-ಪ್ರೊ. ವೀರಯ್ಯ

| Published : Jan 29 2025, 01:32 AM IST

ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ಎಲ್ಲರ ಕರ್ತವ್ಯ-ಪ್ರೊ. ವೀರಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಪಂಪ, ಪೊನ್ನ, ರನ್ನ, ಜನ್ನ, ಸರ್ವಜ್ಞ, ಕುಮಾರವ್ಯಾಸ ಸೇರಿದಂತೆ ಹಲವಾರು ಮಹಾನ ದಾರ್ಶನಿಕರು ಕನ್ನಡ ಭಾಷೆಯನ್ನು ಕಟ್ಟಿ ಬೆಳಸುವಲ್ಲಿ ಶ್ರಮವಹಿಸಿದ್ದಾರೆ. ಇವರೆಲ್ಲರ ವಾರಸುದಾರರಾಗಿ ನಾವೆಲ್ಲರೂ ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ವೀರಯ್ಯ ಮ. ಗುರುಮಠ ಹೇಳಿದರು.

ಸವಣೂರ: ಪಂಪ, ಪೊನ್ನ, ರನ್ನ, ಜನ್ನ, ಸರ್ವಜ್ಞ, ಕುಮಾರವ್ಯಾಸ ಸೇರಿದಂತೆ ಹಲವಾರು ಮಹಾನ ದಾರ್ಶನಿಕರು ಕನ್ನಡ ಭಾಷೆಯನ್ನು ಕಟ್ಟಿ ಬೆಳಸುವಲ್ಲಿ ಶ್ರಮವಹಿಸಿದ್ದಾರೆ. ಇವರೆಲ್ಲರ ವಾರಸುದಾರರಾಗಿ ನಾವೆಲ್ಲರೂ ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ವೀರಯ್ಯ ಮ. ಗುರುಮಠ ಹೇಳಿದರು.

ಪಟ್ಟಣದ ಶ್ರೀ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ ಸವಣೂರು ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷರ ಭಾಷಣ ಮಾಡಿದರು.ನಮ್ಮ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸಲು ನಮ್ಮ ನಾಡಿನಲ್ಲಿ ಅನೇಕ ಕನ್ನಡ ಸಂಘಟನೆಗಳು ನಿರಂತರವಾಗಿ ಕಾರ್ಯ ಮಾಡುತ್ತಿವೆ. ಅದರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪ್ರಮುಖ ಸಂಸ್ಥೆಯಾಗಿದೆ. ಕನ್ನಡಕ್ಕಾಗಿ ಹೋರಾಡಲು ಕನ್ನಡ ಮನಸ್ಸಿಗಳನ್ನು ಅಣಿಗೊಳಿಸುವುದೆ ಕನ್ನಡ ಸಾಹಿತ್ಯ ಸಮ್ಮೇಳನಗಳ ಮೂಲ ಉದ್ದೇಶವಾಗಿದೆ ಎಂದರು.ನಿವೃತ್ತ ಐಎಎಸ್ ಅಧಿಕಾರಿ ಡಾ.ಅನಿಲ ವಿನಾಯಕ ಗೋಕಾಕ ಸಮ್ಮೇಳನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಸವಣೂರಿನಲ್ಲಿ ಹುಟ್ಟಿ ಬೆಳೆದು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಡಾ. ವಿನಾಯಕ ಗೋಕಾಕರ ಕುರಿತು ಮಾತನಾಡಿದರು.ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಾಹಿತಿ ಚಂದ್ರಶೇಖರ ಕೂಳೆನೂರ ರಚಿಸಿದ ನಿರಂಜನ ಶ್ರೀಗಳ ಬದುಕು ಹಾಗೂ ದಿ. ಹಜರೇಸಾಬ್ ನದಾಫ ರಚಿಸಿದ ಛಂದ ಗೀತ ಮತ್ತು ನಕ್ಷತ್ರ ದಾರಿ ಎಂಬ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಹೂವಿನಶಿಗ್ಲಿಯ ವಿರಕ್ತಮಠದ ಶ್ರೀ ಚನ್ನವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀವರ್ಚನ ನೀಡಿದರು. ಸಾಹಿತಿ ಡಾ.ಎಸ್.ವಿ.ಅಯ್ಯನಗೌಡ್ರ, ಕಸಾಪ ಜಿಲ್ಲಾ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕು ಕಸಾಪ ಅಧ್ಯಕ್ಷ ಚಂದ್ರಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.ಪುರಸಭೆ ಅಧ್ಯಕ್ಷ ಅಲ್ಲಾವುದ್ದೀನ್ ಮನಿಯಾರ, ಅಂಜುಮನ್ ಸಂಸ್ಥೆ ಅಧ್ಯಕ್ಷ ಜೀಶಾನಅಹ್ಮದಖಾನ ಪಠಾಣ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ಮುಲ್ಲಾ, ಬಿಇಒ ಎಂ.ಎಫ್. ಬಾರ್ಕಿ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ಪುರಸಭೆ ಸದಸ್ಯ ಪೀರಅಹ್ಮದ ಗವಾರಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹೊಸಮನಿ, ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಿ ಆಲದಕಟ್ಟಿ, ಸಾಹಿತಿ ಸತೀಶ ಕುಲಕರ್ಣಿ, ಪ್ರಮುಖರಾದ ಸುಭಾಸ ಮಜ್ಜಗಿ, ರವಿ ಕರಿಗಾರ, ಪರಶುರಾಮ ಈಳಗೇರ ಹಾಗೂ ಇತರರು ಪಾಲ್ಗೊಂಡಿದ್ದರು.ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭು ಅರಗೋಳ, ತಾಲೂಕಾ ಕಸಾಪ ಕಾರ್ಯದರ್ಶಿ ಸಿ.ವಿ.ಗುತ್ತಲ, ಸ್ವಾಗತ ಸಮಿತಿ ಅಧ್ಯಕ್ಷ ಮಲ್ಲಾರೆಪ್ಪ ತಳ್ಳಿಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.