ಸಾರಾಂಶ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಬಿ.ದೊಡ್ಡಮನಿ ಕ್ರೀಡಾಜ್ಯೊತಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯೂ ಅಷ್ಟೇ ಮುಖ್ಯ. ಏಕೆಂದರೆ ಶಿಕ್ಷಣ ಬೌದ್ದಿಕ ಮಟ್ಟವನ್ನು ಹೆಚ್ಚಿಸುವ ಸಾಧನವಾದರೆ ಕ್ರೀಡೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಸಾಧನವಾಗುತ್ತದೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರಾಂಶುಪಾಲರಾದ ಸುನೀತಾ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಗಳನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಭಾಗವಹಿಸುವುದು ಮುಖ್ಯ ಎಂದರು. ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಾದ ಬಿ.ಆರ್.ವೇಣುಗೋಪಾಲ್, ಬಾಲಕೃಷ್ಣ, ಎಂ.ಸಿ.ಮಂಜುನಾಥ್, ಉಷಾ, ವಿವಿಧ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.19ಕೆಡಿಬಿಪಿ1-
ದೊಡ್ಡಬಳ್ಳಾಪುರದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಬಿ.ದೊಡ್ಡಮನಿ ಚಾಲನೆ ನೀಡಿದರು. ಪ್ರಾಂಶುಪಾಲರಾದ ಸುನೀತಾ, ಬಿ.ಆರ್.ವೇಣುಗೋಪಾಲ್, ಬಾಲಕೃಷ್ಣ, ಎಂ.ಸಿ.ಮಂಜುನಾಥ್, ಉಷಾ ಇತರರು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))