ಬಾಂಬೆ ಗೆಜೆಟಿಯರ್‌ನಲ್ಲಿ ಪುಷ್ಕರಣಿ ಇರುವ ದಾಖಲೆ ಸಿಕ್ಕಿದೆ. ಅಲ್ಲಿರುವ ದೇವಸ್ಥಾನವನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಆರೋಪವೂ ಇದೆ. ಪುಷ್ಕರಣಿಯನ್ನು ಮುಚ್ಚಿ ರಸ್ತೆ ನಿರ್ಮಿಸಿರುವುದು ಸಹಿಸಲು ಸಾಧ್ಯವಿಲ್ಲ.

ಧಾರವಾಡ:

ಹಳೇ ಹುಬ್ಬಳ್ಳಿಯ ಭವಾನಿ ಶಂಕರ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಲ್ಲಿ ಸರ್ವೇ ಕಾಯ್ದೆ ಮೀರಿ ಭವಾನಿ ಶಂಕರ ಹೊಂಡವನ್ನು ಆಸಾರ ಓಣಿ ಹೊಂಡ ಎಂದು ದಾಖಲಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಈ ಕುರಿತು ಸರ್ಕಾರ ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಬಾಂಬೆ ಗೆಜೆಟಿಯರ್‌ನಲ್ಲಿ ಪುಷ್ಕರಣಿ ಇರುವ ದಾಖಲೆ ಸಿಕ್ಕಿದೆ. ಅಲ್ಲಿರುವ ದೇವಸ್ಥಾನವನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಆರೋಪವೂ ಇದೆ. ಪುಷ್ಕರಣಿಯನ್ನು ಮುಚ್ಚಿ ರಸ್ತೆ ನಿರ್ಮಿಸಿರುವುದು ಸಹಿಸಲು ಸಾಧ್ಯವಿಲ್ಲ. ಇದು ತುಷ್ಟೀಕರಣದ ಪರಮಾವಧಿ ಎಂದು ಪ್ರಹ್ಲಾದ ಜೋಶಿ ಆರೋಪಿಸಿದರು.

‘ಕಾಂಗ್ರೆಸ್‌ಗೆ ನೈತಿಕತೆ ಇದ್ದರೆ ಸಚಿವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಲಿ, ಸಚಿವರಾಗುವ ಮೊದಲೇ ಸಿಬಿಐ ರಾಜ್ಯಪಾಲರಿಗೆ ಚಾರ್ಜ್‌ಶೀಟ್ ಸಲ್ಲಿಸಲು ಮನವಿ ಮಾಡಿತ್ತು. ಇಂತಹ ಬೆಳವಣಿಗೆಗಳ ನಡುವೆಯೂ ಕಾಂಗ್ರೆಸ್ ಯಾವ ಮಟ್ಟಿಗೆ ಹೋಗುತ್ತಿದೆ ಎಂಬ ಪ್ರಶ್ನೆ ಎದುರಾಗಿದೆ. ಹೀಗಾಗಿ ಇದು ‘ಪೇಮೆಂಟ್ ಸೀಟ್’ ಎಂದು ಆರ್. ಅಶೋಕ ಆರೋಪಿಸಿದ್ದಾರೆ. ಕಾಂಗ್ರೆಸ್‌ಗೆ ನೈತಿಕತೆ ಇದ್ದರೆ ತಕ್ಷಣ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದರು.

ಕೆಪಿಎಸ್ಸಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮೊದಲೇ ಎಚ್ಚರಿಕೆ ನೀಡಿದ್ದೆ. ಆಗ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿತ್ತು. ಇದೀಗ ತಡವಾದರೂ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ಕೆಪಿಎಸ್‌ಸಿಯನ್ನು ಮತ್ತಷ್ಟು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಬೇಕು ಎಂದು ಹೇಳಿದರು.

ದೇಶಕ್ಕೆ ಅಪಾರ ಕೊಡುಗೆ ನೀಡಿದ ದೇಶಭಕ್ತ ಮುಸ್ಲಿಮರನ್ನು ಗೌರವಿಸಬೇಕು. ಮತಾಂಧರ ಮಾತನ್ನು ಕೇಳುವ ಬದಲು ಎಪಿಜೆ ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಕ್ಷುಲ್ಲಕ ಕಾರಣಗಳಿಗೆ ತುಷ್ಟೀಕರಣ ಮಾಡಬಾರದು. ಇಡೀ ಮಳೆಗಾಲದ ಅಧಿವೇಶನವನ್ನು ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನವನ್ನಾಗಿ ಮಾಡಿಕೊಂಡಿದೆ ಎಂದು ಟೀಕಿಸಿದರು.