ಮಂಡ್ಯ ಜಿಲ್ಲೆಯಲ್ಲಿ ಕಳ್ಳತನ, ಅಪರಾಧ ಚಟುವಟಿಕೆ ತಡೆಗಟ್ಟಲು ಪ್ರತಿ ಅಂಗಡಿ ಒಳಗೆ ಮತ್ತು ಹೊರಗೆ ಹೆಚ್ಚು ಸಾರ್ವಜನಿಕರು ಸೇರುವ ಸ್ಥಳಗಳ ಕಡೆ ಸಿಸಿ ಕ್ಯಾಮೆರಾ ಅಳವಡಿಸಿದರೆ ಅಪರಾಧ ತಡೆಯಲು ಸಹಕಾರಿಯಾಗಲಿದೆ. ಯಾವುದೇ ಸಂದರ್ಭದಲ್ಲೂ ಯಾರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು.

ಕನ್ನಡಪ್ರಭ ವಾರ್ತೆ ಹಲಗೂರು

ಜಿಲ್ಲೆಯಲ್ಲಿ ಅಪರಾಧಗಳನ್ನು ತಡೆಗಟ್ಟಲು ಅವಶ್ಯಕ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ವ್ಯಾಪಾರಸ್ಥರು, ಅಂಗಡಿ ಮಾಲೀಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭರಾಣಿ ಸೂಚನೆ ನೀಡಿದರು.

ನೂನತ ಜಿಲ್ಲಾ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ಹಲಗೂರಿನ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಿ ಯಾವುದೇ ಅಪರಾಧಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಳ್ಳತನ, ಅಪರಾಧ ಚಟುವಟಿಕೆ ತಡೆಗಟ್ಟಲು ಪ್ರತಿ ಅಂಗಡಿ ಒಳಗೆ ಮತ್ತು ಹೊರಗೆ ಹೆಚ್ಚು ಸಾರ್ವಜನಿಕರು ಸೇರುವ ಸ್ಥಳಗಳ ಕಡೆ ಸಿಸಿ ಕ್ಯಾಮೆರಾ ಅಳವಡಿಸಿದರೆ ಅಪರಾಧ ತಡೆಯಲು ಸಹಕಾರಿಯಾಗಲಿದೆ ಎಂದರು.

ಯಾವುದೇ ಸಂದರ್ಭದಲ್ಲೂ ಯಾರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಶಾಂತಿ ಸೌಹಾರ್ದತೆಯಿಂದ ಜನರು ಸಮಾಜದಲ್ಲಿ ಬದುಕಬೇಕು. ನಿಮ್ಮ ರಕ್ಷಣೆಗೆ ನಾವು ಇದ್ದೇವೆ ಎಂಬುದನ್ನು ಮರೆಯಬಾರದು ಎಂದರು.

ಜನವರಿ ತಿಂಗಳು ರಸ್ತೆ ಸುರಕ್ಷ ಸಪ್ತಾಹ ನಡೆಸಲಾಗುತ್ತಿದೆ. ಜನರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲು ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಇಲಾಖೆಯಿಂದ ಕಾರ್ಯಕ್ರಮ ಆಚರಿಸುತ್ತಿದ್ದೇವೆ. ಹೆಲ್ಮೆಟ್ ರಹಿತ ಚಾಲನೆ, ಅತಿ ವೇಗ ಮತ್ತು ಕುಡಿದು ವಾಹನ ಚಲಾಯಿಸುವುದು ಅಪಘಾತಕ್ಕೆ ಮುಖ್ಯ ಕಾರಣ. ಕಡ್ಡಾಯವಾಗಿ ನೀವು ರಸ್ತೆ ಸುರಕ್ಷಿತ ನಿಯಮ ಹಾಗೂ ಕಾನೂನು ಪಾಲಿಸಬೇಕು ಎಂದರು.

ಈ ವೇಳೆ ಡಿವೈಎಸ್ಪಿ ಯಶ್ವಂತ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್, ಸಬ್ ಇನ್ಸ್ ಪೆಕ್ಟರ್ ಹಲಗೂರಿನ ಲೋಕೇಶ್, ಕಿರುಗಾವಲಿನ ರವಿಕುಮಾರ್ ಇದ್ದರು.ಹೆಬ್ಬೆಟ್ಟದ ಬಸವೇಶ್ವರ ಭಕ್ತರ ಇಷ್ಟಾರ್ಥ ನೆರವೇರಿಸುವ ದೈವ ಕ್ಷೇತ್ರ: ಬಸಪ್ಪ

ಹಲಗೂರು: ಸಮೀಪದ ಬಸವನಹಳ್ಳಿ ಬೆಟ್ಟದ ಮೇಲೆ ಪ್ರಕೃತಿ ಸೌಂದರ್ಯದ ನಡುವೆ ನೆಲೆಸಿರುವ ಹೆಬ್ಬೆಟ್ಟದ ಶ್ರೀಬಸವೇಶ್ವರ ಭಕ್ತರ ಇಷ್ಟಾರ್ಥ ನೆರವೇರಿಸುವ ದೈವ ಕ್ಷೇತ್ರವಾಗಿದೆ ಅರ್ಚಕ ಬಸಪ್ಪ ತಿಳಿಸಿದರು.

ದೇವರಿಗೆ ಪೂಜೆ ಪುನಸ್ಕಾರಗಳನ್ನು ನಡೆಸಿ ಭಕ್ತರಿಗೆ ಮಹಾಮಂಗಳಾರತಿ ಪ್ರಸಾದ ನೀಡಿ ಮಾತನಾಡಿ, ದೇವರಿಗೆ ಪೂಜೆ ಸಲ್ಲಿಸಿ ಮಕ್ಕಳಿಲ್ಲದವರು ಮತ್ತು ಮದುವೆ ತಡವಾಗುತ್ತಿದ್ದವರು, ಕೋರ್ಟ್ ಕೇಸ್ ಇತ್ಯರ್ಥಕ್ಕಾಗಿ ಹರಕೆ ಹೊತ್ತುಕೊಂಡರೆ ಇಷ್ಟಾರ್ಥಗಳು ಈಡೇರುತ್ತವೆ ಎಂದರು.

ಧನುರ್ಮಾಸದ ಪ್ರಾರಂಭದಿಂದ ಪ್ರತಿದಿನ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿವೆ. ಅದರಂತೆ ಇಂದು ಬೆಳಗಿನ ಜಾವ ದೇವರ ಮೂರ್ತಿಯನ್ನು ಶುಚಿಗೊಳಿಸಿ ಪಂಚಾಮೃತಾಭಿಷೇಕ, ರುದ್ರಾಭಿಷೇಕ ನಡೆಸಿದ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ನಡೆದ ನಂತರ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

ಸುಮಾರು ಸಾವಿರದ ನಾಲ್ಕುನೂರು ವರ್ಷಗಳ ಇತಿಹಾಸ ಹೊಂದಿರುವ ಚೋಳರ ಕಾಲದ ಹೆಬ್ಬೆಟ್ಟದ ಶ್ರೀಬಸವೇಶ್ವರ ಸ್ವಾಮಿ ದೇವಾಲಯವು ಸುತ್ತಮುತ್ತಲಿನ ಗ್ರಾಮಗಳ ಜನರ ಆರಾಧ್ಯ ದೈವ. ಇಲ್ಲಿ ಮಕ್ಕಳಾಗದಿದ್ದವರು ಹರಕೆ ಹೊತ್ತರೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತಿದೆ. ಮದುವೆಯಾಗದ ಗಂಡು ಮತ್ತು ಹೆಣ್ಣು ಮಕ್ಕಳು ಹರಕೆ ಹೊತ್ತರೆ ಕಂಕಣ ಭಾಗ್ಯ ಕೂಡಿ ಬರುತ್ತಿದೆ ಎಂದು ತಿಳಿಸಿದರು.