ಸಾರಾಂಶ
ಚಿಕಿತ್ಸಾ ವೆಚ್ಚದ ದರ ಪಟ್ಟಿ ಹಾಕುವುದು ಕಡ್ಡಾಯ: ಡಿಎಚ್‌ಒ ಡಾ. ಅಶ್ವತ್ ಬಾಬು
ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಸ್ಕ್ಯಾನಿಂಗ್ ಸೆಂಟರ್ । ಖಾಸಗಿ ಆಸ್ಪತ್ರೆ, ಕ್ಲಿನಿಕ್ ಲ್ಯಾಬ್‌ಗಳ ಮೇಲೆ ದಾಳಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚದ ದರ ಪಟ್ಟಿ ಹಾಕಬೇಕು ಹಾಗೂ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಅಶ್ವಥ್ ಬಾಬು ಸೂಚನೆ ನೀಡಿದರು. ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಸರ್ಕಾರದ ನಿಯಮ ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಿ ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಹಾಗೂ ಕೆಪಿಎಂಇ ದಾಖಲೆಗಳ ಬಗ್ಗೆ ತಪಾಸಣೆ ನಡೆಸಿ ಮಾತ ನಾಡಿದರು.ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಲ್ಯಾಬ್‌ಗಳ ಮೇಲೆ ದಾಳಿ ನಡೆಸ ಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಅಕ್ರಮ ಗರ್ಭಪಾತ, ಭ್ರೂಣ ಲಿಂಗ ಪತ್ತೆ, ಪಿಸಿ ಮತ್ತು ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆ ಹಾಗೂ ಕೆಪಿಎಂಇ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಆಸ್ಪತ್ರೆ ಕ್ಲಿನಿಕ್ ಹಾಗೂ ಲ್ಯಾಬ್‌ಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು, ಸರ್ಕಾರದ ನಿಯಮಗಳನ್ನು ಪಾಲಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮಕೈಗೊಂಡು ಆಸ್ಪತ್ರೆ ಗಳನ್ನು ಮುಚ್ಚಿಸಲಾಗುವುದೆಂದು ಎಚ್ಚರಿಸಿದರು. ಖಾಸಗಿ ಆಸ್ಪತ್ರೆಗಳಿಗೆ ನಮ್ಮ ಇಲಾಖೆ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆ ಸಂದರ್ಭದಲ್ಲಿ ಹೆರಿಗೆ ಆಸ್ಪತ್ರೆಗಳು ನೋಂದಣಿ ಆಗದ ಚಿಕ್ಕ ಚಿಕ್ಕ ಕ್ಲಿನಿಕ್‌ಗಳಿಗೂ ಭೇಟಿ ನೀಡಿ ನಿಯಮ ಬಾಹಿರ ವಾಗಿದ್ದರೆ ಅಂತಹ ಆಸ್ಪತ್ರೆಗಳಿಗೆ ಬೀಗ ಹಾಕುವುದಾಗಿ ಹೇಳಿದರು. ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ, ಅನಾವಶ್ಯಕವಾಗಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. ತಾಯಿ ಮರಣಗಳಾಗುತ್ತಿವೆಯೇ, ಮಗು ಮರಣ, ಆಸ್ಪತ್ರೆಗಳ ಸ್ವಚ್ಛತೆ, ಇಲ್ಲಿ ವಿಧಿಸುತ್ತಿರುವ ಚಿಕಿತ್ಸಾ ವೆಚ್ಚದ ದರ ಇವೆಲ್ಲದರ ಬಗ್ಗೆಯೂ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ ಮಾತನಾಡಿ, ಇಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೂ ಭೇಟಿ ನೀಡಿ ನೂನ್ಯತೆಗಳ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲು ಸೂಚನೆ ನೀಡಿದ್ದೇವೆ ಎಂದರು. ಈ ಪರಿಶೀಲನೆ ಅವಧಿಯಲ್ಲಿ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ ಇರುವಂತೆ ಸೂಚನೆ ನೀಡುತ್ತೇವೆ. ಇದರಿಂದ ಭ್ರೂಣಲಿಂಗ ಪತ್ತೆ ಆಗಿರುವ ಬಗ್ಗೆ ನೋಂದಣಿ ಮಾಡಿ ಸ್ಕ್ಯಾನಿಂಗ್ ಮಿಷನ್ ಅನ್ನು ತಪಾಸಣೆ ಮಾಡುತ್ತೇವೆ. ಕೆಲವು ದಾಖಲೆಗಳನ್ನು ಅವರು ನಿರ್ವಹಣೆ ಮಾಡಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸುತ್ತೇವೆಂದು ಹೇಳಿದರು. ಆರೋಗ್ಯ ಇಲಾಖೆ ಸೂಚನೆಗಳನ್ನು ಸರಿಯಾಗಿ ಪಾಲಿಸದ ಆಸ್ಪತ್ರೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ ಮಾತನಾಡಿ, ಈ ಕಾರ್ಯಾಚರಣೆ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಲಿದ್ದು ಸಂಬಂಧಿಸಿದ ವರದಿಯನ್ನು ಸರ್ಕಾರಕ್ಕೆ ರವಾನಿಸುತ್ತೇವೆ ಎಂದರು. ಈ ಸಂದರ್ಭದಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಭರತ್‌ಕುಮಾರ್, ಪಿಸಿ ಮತ್ತು ಪಿಎಸ್ ಡಿಟಿ ವಿಷಯ ನಿರ್ವಾಹಕರಾದ ಹರ್ಷ ಅರಸ್ ಉಪಸ್ಥಿತರಿದ್ದರು.8 ಕೆಸಿಕೆಎಂ 1ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಹಾಗೂ ಅಧಿಕಾರಿಗಳ ತಂಡ ಶುಕ್ರವಾರ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಕ್ಯಾನಿಂಗ್ ಸೆಂಟರ್ ಹಾಗೂ ಇತರೆ ಸೇವೆಗಳ ಬಗ್ಗೆ ಪರಿಶೀಲಿಸಿದರು.