ಚನ್ನರಾಯಪಟ್ಟಣ, ಹೊಳೆನರಸೀಪುರ ಸೇರಿದಂತೆ ಅನೇಕ ತಾಲೂಕುಗಳಲ್ಲಿ ಅಭಿವೃದ್ಧಿ ಕಂಡುಬಂದಿದ್ದರೂ, ಅರಸೀಕೆರೆ ತಾಲೂಕು ಮಾತ್ರ ಶೂನ್ಯ ಬೆಳವಣಿಗೆಯನ್ನು ಅನುಭವಿಸಬೇಕಾಯಿತು ಎಂದು ವಿಷಾದ ವ್ಯಕ್ತಪಡಿಸಿದರು. ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಕುಡಿಯುವ ನೀರಿನ ವ್ಯವಸ್ಥೆ, ಹಳ್ಳಿ ಹಳ್ಳಿಗೂ ರಸ್ತೆ ಸೇರಿದಂತೆ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಈಗ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ಇಡೀ ತಾಲೂಕಿನ ಎಲ್ಲ ಕೆರೆಗಳನ್ನು ಕೆಲವೇ ತಿಂಗಳಲ್ಲಿ ತುಂಬಿಸುವ ಗುರಿ ಹೊಂದಿದ್ದೇನೆ. ಇನ್ನೂ 10 ದಿನಗಳಲ್ಲಿ ಪೈಪ್‌ಲೈನ್ ಎಳೆಯುವ ಪೂಜೆ ಕಾರ್ಯಕ್ರಮವನ್ನು ನನ್ನದೇ ಮುಂದಾಳತ್ವದಲ್ಲಿ ನೆರವೇರಿಸಲಾಗುವುದು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಸ್ವತಂತ್ರ ಭಾರತದ ಇತಿಹಾಸದಲ್ಲೇ ಸುಮಾರು ಎಪ್ಪತ್ತು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಅರಸೀಕೆರೆ ತಾಲೂಕಿಗೆ ಸಮಗ್ರ ಅಭಿವೃದ್ಧಿ ತರುವ ಜವಾಬ್ದಾರಿಯನ್ನು ನಾನು ಹೊತ್ತುಕೊಂಡಿದ್ದೇನೆ. ಮುಂದಿನ ಆರು ತಿಂಗಳಲ್ಲಿ ಬೆಂಡೆಕೆರೆಗೆ ನೀರು ತರಿಸುವ ಹೊಣೆ ನನ್ನದೇ ಎಂದು ಶಾಸಕ ಕೆಎಂ ಶಿವಲಿಂಗೇಗೌಡರು ಭರವಸೆ ನೀಡಿದರು.ತಾಲೂಕಿನ ಬಾಣಾವರ ಹೋಬಳಿಯ ಬೆಂಡೆಕೆರ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಚನ್ನರಾಯಪಟ್ಟಣ, ಹೊಳೆನರಸೀಪುರ ಸೇರಿದಂತೆ ಅನೇಕ ತಾಲೂಕುಗಳಲ್ಲಿ ಅಭಿವೃದ್ಧಿ ಕಂಡುಬಂದಿದ್ದರೂ, ಅರಸೀಕೆರೆ ತಾಲೂಕು ಮಾತ್ರ ಶೂನ್ಯ ಬೆಳವಣಿಗೆಯನ್ನು ಅನುಭವಿಸಬೇಕಾಯಿತು ಎಂದು ವಿಷಾದ ವ್ಯಕ್ತಪಡಿಸಿದರು. ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಕುಡಿಯುವ ನೀರಿನ ವ್ಯವಸ್ಥೆ, ಹಳ್ಳಿ ಹಳ್ಳಿಗೂ ರಸ್ತೆ ಸೇರಿದಂತೆ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಈಗ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ಇಡೀ ತಾಲೂಕಿನ ಎಲ್ಲ ಕೆರೆಗಳನ್ನು ಕೆಲವೇ ತಿಂಗಳಲ್ಲಿ ತುಂಬಿಸುವ ಗುರಿ ಹೊಂದಿದ್ದೇನೆ. ಇನ್ನೂ 10 ದಿನಗಳಲ್ಲಿ ಪೈಪ್‌ಲೈನ್ ಎಳೆಯುವ ಪೂಜೆ ಕಾರ್ಯಕ್ರಮವನ್ನು ನನ್ನದೇ ಮುಂದಾಳತ್ವದಲ್ಲಿ ನೆರವೇರಿಸಲಾಗುವುದು ಎಂದು ಹೇಳಿದರು. ನಾನು ಸತ್ಯದ ರಾಜಕಾರಣ ಮಾಡುತ್ತೇನೆ; ಆಗದ ಕೆಲಸವನ್ನೂ ಸಾಧ್ಯವಾಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸುಳ್ಳು ಹೇಳುವುದು ನನ್ನ ರಾಜಕಾರಣದಲ್ಲಿಲ್ಲ. ತಾಲೂಕಿನ ಅಭಿವೃದ್ಧಿಯೇ ನನ್ನ ರಾಜಕಾರಣ ಎಂದು ಸ್ಪಷ್ಟಪಡಿಸಿದರು. ಬೆಂಡೆಕೆರ ಗ್ರಾಮಕ್ಕೆ ಅಗತ್ಯವಿರುವ ಸೇತುವೆ, ಸಮುದಾಯ ಭವನ, ಕಾಂಕ್ರೀಟ್ ರಸ್ತೆ ಹಾಗೂ ದೇವಸ್ಥಾನ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಕೇಳಿದ ತಕ್ಷಣವೇ ಒದಗಿಸಲಾಗಿದೆ ಎಂದು ತಿಳಿಸಿದ ಅವರು, ಬೆಂಡೆಕೆರೆ ಕೆರೆಗೆ ನೀರನ್ನು ಹರಿಸುವುದೇ ನನ್ನ ಮುಖ್ಯ ಧ್ಯೇಯ ಎಂದು ಹೇಳಿದರು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಂದಾಯ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಬಾಕಿ ಉಳಿದಿದ್ದ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಮನವಿ ಮಾಡಲಾಯಿತು, ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಅರ್ಜಿಗಳನ್ನು ಸ್ವೀಕರಿಸಲಾಯಿತು. ಅವುಗಳಲ್ಲಿ ಹಲವು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಯಿತು.ಈ ಸಭೆಯಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿ ನಾಗೇಂದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಗಂಗಣ್ಣನವರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಬಿಳಿ ಚೌಡಯ್ಯ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.