ಸಾರಾಂಶ
ಕಾರ್ಯಕರ್ತರ ಅವಿರತ ಪರಿಶ್ರಮದಿಂದ ನಾನು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಯಾವುದೇ ಕೆಲಸ ಕಾರ್ಯಗಳನ್ನು ನನ್ನ ಜವಾಬ್ದಾರಿ ಎಂದು ಮಾಡಿಕೊಡುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಕೊಲ್ಹಾರ : ಕಾರ್ಯಕರ್ತರ ಅವಿರತ ಪರಿಶ್ರಮದಿಂದ ನಾನು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಯಾವುದೇ ಕೆಲಸ ಕಾರ್ಯಗಳನ್ನು ನನ್ನ ಜವಾಬ್ದಾರಿ ಎಂದು ಮಾಡಿಕೊಡುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಪಟ್ಟಣದ ಸಮುದಾಯ ಭವನದಲ್ಲಿ ಗುರುವಾರ ನಡೆದ ಬಸವನಬಾಗೇವಾಡಿ ಮಂಡಲದ ಭಾರತೀಯ ಜನತಾ ಪಾರ್ಟಿ ಸದಸ್ಯತ್ವ ಅಭಿಯಾನ 2024 ರ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಲೋಕಸಬಾ ಸದಸ್ಯನಾಗಿ ಆಯ್ಕೆಯಾದಾಗಿನಿಂದ ಜಿಲ್ಲೆಗೆ ನಿಮ್ಮೆಲ್ಲರ ಆಶೀರ್ವಾದದಿಂದ ಏಳು ರಾಷ್ಟ್ರೀಯ ಹೆದ್ದಾರಿಗಳನ್ನು ಮಂಜೂರು ಮಾಡಿಸುವುದರ ಜೊತೆಗೆ ವಿವಿಧ ಅಭಿವೃದ್ಧಿಯ ಕಾಮಗಾರಿಗಳಿಗಾಗಿ 1.10 ಲಕ್ಷ ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ ಎಂದರು.ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಬಸವನ ಬಾಗೇವಾಡಿ ಮಂಡಲದ ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸುವಲ್ಲಿ ಕ್ರಿಯಾಶೀಲರಾಗಿರಬೇಕು. ಇಂತಹ ಕಾರ್ಯ ತಳಮಟ್ಟದ ಕಾರ್ಯಕರ್ತನು ಮುಂದೊಂದು ದಿನ ನಾಯಕನಾಗಿ ಗುರ್ತಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ.
ಈ ದೆಸೆಯಲ್ಲಿ ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸದಸ್ಯತ್ವ ಅಭಿಯಾನ ಯಶಸ್ವಿಯಾಗಲು ಶ್ರಮಿಸಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಪ್ರಬಾರಿ ಚಂದ್ರಶೇಖರ ಕವಟಗಿ, ಬಸವನಬಾಗೇವಾಡಿ ಮಂಡಲದ ಅಧ್ಯಕ್ಷ ಸಿದ್ದರಾಮಪ್ಪ ಕಾಖಂಡಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರೇವೂರ, ಶಂಕರಗೌಡ ಪಾಟೀಲ ಅನೇಕ ಪ್ರಮುಖರು ಉಪಸ್ಥಿತರಿದ್ದರು. ಬಸವನ ಬಾಗೇವಾಡಿ ಮಂಡಲದ ಸುಮಾರು 200 ಅಧಿಕ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.