ಶಾಲಾ ಹಂತದಲ್ಲೇ ಮಕ್ಕಳಿಗೆ ಸ್ವಚ್ಛತೆ ಅರಿವು ಅವಶ್ಯ: ಬಸವಲಿಂಗ ಪಟ್ಟದ್ದೇವರು

| Published : Feb 14 2024, 02:18 AM IST

ಶಾಲಾ ಹಂತದಲ್ಲೇ ಮಕ್ಕಳಿಗೆ ಸ್ವಚ್ಛತೆ ಅರಿವು ಅವಶ್ಯ: ಬಸವಲಿಂಗ ಪಟ್ಟದ್ದೇವರು
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಿಂದ ಸ್ವಚ್ಛತೆ, ಶಿಕ್ಷಕರ ಮೇಲೆ ಕ್ರಮ ಸರಿಯಲ್ಲ ಎಂದು ಬಸವ ಗುರುಕುಲ ಪ್ರಾಥಮಿಕ ಪ್ರೌಢಶಾಲಾ ಆವರಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಕಳವಳ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಔರಾದ್

ಪ್ರಾಯೋಗಿಕವಾಗಿ ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸ್ವಚ್ಛತೆ ಅರಿವು ಮೂಡಿಸುವುದು ಅತಿ ಅವಶ್ಯಕ. ಆದರೆ ಶಿಕ್ಷಣ ಇಲಾಖೆ ಕೆಲವೆಡೆ ಮಕ್ಕಳಿಂದ ಸ್ವಚ್ಛತೆ ಮಾಡಿಸಿದ ಶಿಕ್ಷಕರ ಮೇಲೆ ಕ್ರಮ ವಹಿಸುತ್ತಿರುವುದು ವಿಪರ್ಯಾಸ ಎಂದು ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಬಸವ ಗುರುಕುಲ ಪ್ರಾಥಮಿಕ ಪ್ರೌಢಶಾಲಾ ಆವರಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಕ್ಕಳು ಕಸ ಗುಡಿಸುವಿಕೆ, ಶೌಚಾಲಯ ಸ್ವಚ್ಛತೆ ಸೇರಿದಂತೆ ಇನ್ನಿತರ ಬದುಕಿನ ಅವಶ್ಯಕತೆಗಳನ್ನು ಶಾಲಾ ಹಂತದಿಂದ ಕಲಿಸುವುದೆ ಶಿಕ್ಷಣದ ಮೂಲ ಉದ್ದೇಶ, ವೈಯಕ್ತಿಕ ಹಾಗೂ ಪರಿಸರ ಸ್ವಚ್ಛತೆ ಬಗ್ಗೆ ಶಿಕ್ಷಣ ಪಾಠಗಳನ್ನು ಹೊಂದಿದೆ. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆಯುವಂತೆ ಶಿಕ್ಷಕರು, ಸಂಸ್ಥೆಗಳು ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ತಹಸೀಲ್ದಾರ್‌ ನಾಗಯ್ಯ ಹಿರೇಮಠ ಮಾತನಾಡಿ, ಭಾಲ್ಕಿ ಹಿರೇಮಠ ಸಂಸ್ಥಾನದಿಂದ ಶೈಕ್ಷಣಿಕ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದರು.

ಸಿಪಿಐ ರಘುವೀರಸಿಂಗ್ ಠಾಕೂರ್ ಮಾತನಾಡಿ, ಮಕ್ಕಳು ಉತ್ತಮ ಶಿಕ್ಷಣ ಪಡೆದು ನಾಡಿಗೆ, ದೇಶಕ್ಕೆ ಕಾಣಿಕೆ ನೀಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಗುರುನಾಥ ಬುಟ್ಟೆ, ಮನ್ಮತಪ್ಪ ಬಿರಾದಾರ್‌, ಸತೀಶ ಗಂದಿಗುಡೆ, ಡಾ. ಸಂಜೀವಕುಮಾರ ಜುಮ್ಮಾ, ಶರಣಪ್ಪ ನೌಬಾದೆ, ಶಿವಾನಂದ ಮುಕ್ತೆದಾರ್‌, ನಿರ್ಮಲಾ ಶೇರಿ, ಇಂದುಮತಿ ಎಡವೆ, ನಾಗನಾಥ ಶಂಕು, ಸಂಜೀವ ವಲಾಂಡೆ, ಬಾಲಾಜಿ ಸೇರಿದಂತೆ ಇನ್ನಿತರರಿದ್ದರು.