ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಕೆ ಅಗತ್ಯ: ಸಚಿವ ಕೆ. ವೆಂಕಟೇಶ

| Published : Sep 17 2025, 01:05 AM IST

ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಕೆ ಅಗತ್ಯ: ಸಚಿವ ಕೆ. ವೆಂಕಟೇಶ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ವೃದ್ಧಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿದರ್ಶನ ಸಹಿತ ವಿವರಿಸಿದರು. ಉತ್ತಮ ಆಹಾರ ಸೇವನೆ ಉತ್ತಮ ಆರೋಗ್ಯಕ್ಕೆ ರಹದಾರಿ ಎಂದು ಹೇಳಿದ ಅವರು ಶಾಲಾ ಮಕ್ಕಳಲ್ಲಿಯೇ ಉತ್ತಮ ಆಹಾರ ಅಭ್ಯಾಸಗಳನ್ನ ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಮಾರ್ಗದರ್ಶನ ನೀಡಬೇಕೆಂದು ಕರೆಕೊಟ್ಟರು.

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ

ಸರ್ಕಾರಿ ಶಾಲೆಗಳ ಬಲವರ್ಧನೆ ಆಗಬೇಕೆಂದರೆ ನಮ್ಮ ಶಿಕ್ಷಕರು ಹೊಸ ಕಾಲಘಟ್ಟದಲ್ಲಿನ ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಆಧಾರಿತ ಕಲಿಕೆ ವಿಧಾನಗಳನ್ನು ಬಳಸಬೇಕು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದರು.

ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ

ಅವರು ಮಾತನಾಡಿದರು.

ಶಿಕ್ಷಕರು ವೃತ್ತಿ ಬದ್ಧತೆಯನ್ನು ಮೆರೆಯುವ ಮೂಲಕ ಗ್ರಾಮೀಣ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು, ಹೊಸ ಹೊಸ ಬೋಧನಾ ವಿಧಾನಗಳನ್ನು ಬಳಸಿಕೊಳ್ಳಲಿ ಎಂದೇ ಈಗಾಗಲೇ ತಾಲೂಕಿನ 45 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾವುದರಲ್ಲೂ ಕಡಿಮೆ ಇಲ್ಲದಂತಹ ಸಾಧನೆಗಳನ್ನು ಮಾಡುತ್ತಿರುವುದನ್ನ ಪ್ರಶಂಸಿಸಿದರು. ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ದುರಸ್ತಿಗೊಳ್ಳಬೇಕಾದ ಕಟ್ಟಡಗಳನ್ನು ಹಂತ ಹಂತವಾಗಿ ದುರಸ್ತಿಗೊಳಿಸಲಾಗುತ್ತಿದ್ದು, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶ್ರಮಿಸುದಾಗಿ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಜೆನೆಟಿಕ್ ವಿಭಾಗದ ಮುಖ್ಯಸ್ಥ ಡಾ. ಸುತ್ತೂರು ಮಾಲಿನಿ ಮಾತನಾಡಿ, ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ವೃದ್ಧಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿದರ್ಶನ ಸಹಿತ ವಿವರಿಸಿದರು. ಉತ್ತಮ ಆಹಾರ ಸೇವನೆ ಉತ್ತಮ ಆರೋಗ್ಯಕ್ಕೆ ರಹದಾರಿ ಎಂದು ಹೇಳಿದ ಅವರು ಶಾಲಾ ಮಕ್ಕಳಲ್ಲಿಯೇ ಉತ್ತಮ ಆಹಾರ ಅಭ್ಯಾಸಗಳನ್ನ ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಮಾರ್ಗದರ್ಶನ ನೀಡಬೇಕೆಂದು ಕರೆಕೊಟ್ಟರು.

ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪರಿಶ್ರಮಿಸುತ್ತಿರುವುದಾಗಿ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ನಿತಿನ್ ವೆಂಕಟೇಶ್, ಡಿ.ಟಿ. ಸ್ವಾಮಿ, ರೆಹಮದ್ ಜಾನ್, ಉದ್ಯಮಿ ಬಸವರಾಜ, ಪಿಎಲ್. ಡಿ ಬ್ಯಾಂಕ್ ಅಧ್ಯಕ್ಷ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಬಿಆರ್.ಸಿ ಶಿವರಾಜ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧುರೇಶ್, ಕಾರ್ಯದರ್ಶಿ ಸೋಮಶೇಖರ್, ಸಿಆರ್.ಪಿ ಗಣೇಶ್ ಕುಮಾರ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್ ಇದ್ದರು.