ತರೀಕೆರೆ, ನಾಡಿನ ಮಕ್ಕಳಲ್ಲಿ ಕಾಡು ಹಾಗೂ ಕಾಡಿನ ಅವಶ್ಯಕತೆ ಬಗ್ಗೆ ಅರಿವು ಮೂಡಿಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದು ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಮಕ್ಕಳ ದಿನಾಚರಣೆ ಅಂಗವಾಗಿ ತರೀಕೆರೆಯಲ್ಲಿ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಕನ್ನಡಪ್ರಭ ವಾರ್ತೆ ತರೀಕೆರೆ

ನಾಡಿನ ಮಕ್ಕಳಲ್ಲಿ ಕಾಡು ಹಾಗೂ ಕಾಡಿನ ಅವಶ್ಯಕತೆ ಬಗ್ಗೆ ಅರಿವು ಮೂಡಿಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದು ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಮಂಗಳವಾರ ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದೊಂದಿಗೆ ಕನ್ನಡಪ್ರಭ ಮಕ್ಕಳ ದಿನಾಚರಣೆ ಅಂಗವಾಗಿ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಕ್ಕಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷ ತಂದಿದೆ ಎಂದ ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳು ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಯಶಸ್ಸುಗಳಿಸಲಿ ಎಂದು ಶುಭ ಹಾರೈಸಿದರು.

ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ನಿಂದಲೂ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಮತ್ತು ವನ್ಯ ಪ್ರಾಣಿಗಳ ಬಗ್ಗೆ ಸಂವಾದ ಹಮ್ಮಿಕೊಳ್ಳಲಾಗಿತ್ತು ಎಂದು ಸ್ಮರಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಕನ್ನಡಪ್ರಭ ಪತ್ರಿಕೆಯಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ ಆಯೋಜನೆ ಸಂತೋಷಕರ ಎಂದು ತಿಳಿಸಿ ಮಕ್ಕಳಿಗೆ ಶುಭಾಷಯ ಕೋರಿದರು.

ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್ ಮಾತನಾಡಿ ನಿಸರ್ಗವನ್ನು ಕಾಪಾಡಬೇಕು. ಪೋಷಕರು ಶಾಲೆ ಪಠ್ಯಗಳಿಗೆ ತೋರಿಸುವ ಆಸಕ್ತಿಯಂತೆ ಮಕ್ಕಳಲ್ಲಿ ಅಡಗಿರುವ ಕಲಾ ಪ್ರತಿಭೆಗೂ ಪ್ರೋತ್ಸಾಹ ನೀಡಬೇಕು. ಚಿತ್ರಕಲೆ ಮನಸ್ಸಿನಲ್ಲಿ ಮೂಡುವ ಕಲೆ. ಇದೇ ರೀತಿ ಚಿತ್ರ ಮೂಡಬೇಕು ಎಂದು ಮನಸ್ಸು ಸಲಹೆ ನೀಡುತ್ತದೆ. ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಮಕ್ಕಳಲ್ಲಿ ಅಂಕ ನೋಡುವ ಜೊತೆಗೆ ಅವರಲ್ಲಿ ಅಡಗಿರುವ ಆಟೋಟ, ಚಿತ್ರಕಲೆ ಇನ್ನಿತರ ಪಠ್ಯೇತರ ಚಟುವಟಿಕೆಗಳಿಗೆ ಪೋಷಕರು ಪ್ರೋತ್ಸಾಹಿಸಬೇಕು. ಕನ್ನಡಪ್ರಭ ಪತ್ರಿಕೆ ಚಿತ್ರಕಲಾ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಏರ್ಪಡಿಸಿರುವುದು ಸಂತೋಷದ ವಿಚಾರ ಎಂದರು.ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮಾತನಾಡಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದು ತುಂಬಾ ಅರ್ಥಪೂರ್ಣ ಕಾರ್ಯಕ್ರಮ. ಕಾಡು ಮತ್ತು ಪರಿಸರವನ್ನು ನಾವು ಸಂರಕ್ಷಿಸಬೇಕು, ಉತ್ತಮ ಪರಿಸರ ನಮಗೆ ಬೇಕೇ ಬೇಕು, ಸಾಲುಮರ ತಿಮ್ಮಕ್ಕ ಮರಗಳನ್ನು ಮಕ್ಕಳಂತೆ ಬೆಳೆಸಿದರು. ಅರಳಿ ಮತ್ತು ಅಲದ ಮರಗಳನ್ನು ಬೆಳೆಸಿದರೆ ಉತ್ತಮ ಗಾಳಿ ಪಡೆಯಬಹುದು. ಕಾಡು ಉಳಿಸಿ, ಪರಿಸರ ಕಾಳಜಿ ವಹಿಸಬೇಕು ಎಂದು ಹೇಳಿದರು.ಕೆಡಿಪಿ ಸದಸ್ಯ ಎಚ್.ಎನ್.ಮಂಜುನಾಥ್ ಲಾಡ್ ಮಾತನಾಡಿ ಚಿತ್ರಕಲಾ ಸ್ಪರ್ಧೆ ಮಕ್ಕಳಲ್ಲಿ ಕ್ರೀಯಾಶೀಲತೆ, ಕಲ್ಪನಾ ಶಕ್ತಿ ಹೆಚ್ಚಿಸುತ್ತದೆ. ಚಿತ್ರಕಲಾ ಸ್ಪರ್ಧೆ ವನ್ಯಜೀವಿಗಳನ್ನು ಉಳಿಸುವಂತಹ ಜಾಗೃತಿ ಮುಡಿಸುತ್ತದೆ. ಪ್ರಕೃತಿ ಮತ್ತು ಮನುಷ್ಯ ಸಮತೋಲನವಾಗಿರಬೇಕು. ಮಕ್ಕಳು ರಾಜ್ಯ ಮಟ್ಟದಲ್ಲಿ ಯಶಸ್ಸುಗಳಿಸಲಿ ಎಂದು ಶುಭ ಹಾರೈಸಿದರು.ಪ್ರಕೃತಿ ಶ್ರೀ ಕಲಾ ಕುಟೀರ ಅಧ್ಯಕ್ಷೆ ಉಮಾ ಪ್ರಕಾಶ್ ಮಾತನಾಡಿ ಮುದ್ರಣ ಮತ್ತು ದೃಶ್ಯ ಮಾದ್ಯಮಗಳು ಸುದ್ದಿ ಪ್ರಸಾರ ಮಾಡುವುದೊಂದೇ ಅಲ್ಲದೆ ತಮ್ಮ ಸಾಮಾಜಿಕ ಜವಾಬ್ದಾರಿ ಮೆರೆದು ಮಕ್ಕಳ ಪ್ರತಿಭೆಯನ್ನು ಪ್ರೊತ್ಸಾಹಿಸುವ ಉದ್ದೇಶ ದಿಂದ ಈ ಸ್ಪರ್ಧೆ ಏರ್ಪಡಿಸಲಾಗಿದೆ. ಮಕ್ಕಳಲ್ಲಿ ಪ್ರಕೃತಿ, ಪರಿಸರ, ನಮ್ಮ ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಇದಾಗಿದೆ ಎಂದು ಪ್ರತಿಪಾದಿಸಿದರು.ಉಪವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿ ಸದಸ್ಯ ಎಸ್.ಎನ್. ಸಿದ್ರಾಮಪ್ಪ ಮಾತನಾಡಿ ಕನ್ನಡಪ್ರಭ ಪತ್ರಿಕೆ ಮಕ್ಕಳಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದು ಅರ್ಥಪೂರ್ಣವಾಗಿದೆ. ಅದರಲ್ಲೂ ಕಾಡು ಮತ್ತು ಪರಸರ ವಿಷಯವನ್ನೇ ಚಿತ್ರಕಲಾ ಸ್ಪರ್ಧೆಗೆ ನೀಡಿರುವುದು ಉತ್ತಮ ನಿರ್ಧಾರ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ.ಪರುಶುರಾಮಪ್ಪ ಮಾತನಾಡಿ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲದ ಅಸಮತೋಲನ ಅರಣ್ಯ ಮತ್ತು ವನ್ಯಮೃಗಗಳ ಅವನತಿಗೆ ಕಾರಣ. ಅತಿಯಾಸೆ, ಮಾನವನ ಮಹತ್ವಾಕಾಂಕ್ಷೆಯಿಂದ ನಗರೀಕರಣ, ಅಧುನಿಕತೆ ವ್ಯಾಮೋಹದಿಂದ ಇಂದು ಪ್ರಕೃತಿ ನಾಶಕ್ಕೆ ಕಾರಣವಾಗುತ್ತಿದೆ. ಅರಣ್ಯ ಮತ್ತು ಕಾಡು ಪ್ರಾಣಿಗಳ ರಕ್ಷಣೆಗೆ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು. ಶಾಲಾ ಕಾಲೇಜುಗಳಲ್ಲಿ ಪರಿಸರಕ್ಕೆ ಸಂಬಂಧಿಸಿದ ಉಪನ್ಯಾಸ ಕಾರ್ಯಾ ಗಾರ ಮಕ್ಕಳ ಸೃಜನಶೀಲತೆ ಹೆಚ್ಚಿಸುವ ಇಂತಹ ಕಾರ್ಯಕ್ರಮಗಳ ಆಯೋಜನೆ ಆದ್ಯತೆ ಯಾಗಿದೆ ಎಂದು ಪ್ರಶಂಸಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ್ ಮಾತನಾಡಿ ಕರ್ನಾಟಕದ ಅರಣ್ಯ ಸಂಪತ್ತನ್ನು ಚಿತ್ರದ ಮೂಲಕ ಅನಾವರಣ ಗೊಳಿಸುವುದು ಒಂದು ಸವಾಲಿನಂತೆ ಭಾಸವಾದರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ಸಿಆರ್.ಪಿ ಶಿಲ್ಪ ಮಾತನಾಡಿ ಒಂದು ಚಿತ್ರಸಾವಿರ ಪದಗಳಿಗೆ ಸಮ ಎಂಬ ಮಾತಿದೆ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ರಾಜ್ಯದ ಅರಣ್ಯ ಸಂಪತ್ತನ್ನು ಚಿತ್ರದ ಮೂಲಕ ಅಭಿವ್ಯಕ್ತಿಸುವ ಅವಕಾಶ ಒದಗಿರುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.

ಪ್ರಕೃತಿ ಶ್ರೀ ಕಲಾ ಕುಟೀರ ಅಧ್ಯಕ್ಷೆ ಉಮಾ ಪ್ರಕಾಶ್, ಚಿತ್ತಕಲಾ ಶಿಕ್ಷಕರಾದ ಲಕ್ಷ್ಮಿ, ರಾಘವೇಂದ್ರ ತೀರ್ಪುಗಾರರಾಗಿ ಭಾಗವಹಿಸಿದ್ದರು.ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರೀತಂ ಟಿ.ಜಿ.ಕುಂಟನಮಡು (ಪ್ರಥಮ) ದೃಷ್ಟಿ ಟಿ.ಜಿ.ಅರುಣೋದಯ ಶಾಲೆ (ದ್ವಿತೀಯ) ನೇತ್ರ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆ (ತೃತೀಯ) ಆಲಿಯಾ, ಮೌಲಾನಾ ಅಜಾದ್ ಶಾಲೆ (ಸಮಾಧಾನಕರ), ಸೋನು ಆರ್.ಆರ್.ಆರಾಧನಾ ಶಾಲೆ (ಸಮಾಧಾನಕರ) ವಿಜೇತರಾದರು

25ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ನಡೆದ ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಕನ್ನಡಪ್ರಭ ಆಯೋಜಿಸಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್, ಪುರಸಭೆ ಅಧ್ಯಕ್ಷ ವಸಂತಕುಮಾರ್, ಮಾಜಿ ಪುರಸಭಾಧ್ಯಕ್ಷರಾದ ಟಿ.ಎಸ್.ಪ್ರಕಾಶ್ ವರ್ಮ ಮತ್ತತಿರರು ಭಾಗವಹಿಸಿದ್ದರು.