ಸಾರಾಂಶ
ಹಿರಿಯೂರು: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ, ಯುವಕರಿಗೆ ಕಾನೂನಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಹೇಳಿದರು.
ಹಿರಿಯೂರು: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ, ಯುವಕರಿಗೆ ಕಾನೂನಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಹೇಳಿದರು.
ತಾಲೂಕಿನ ಅಂಬಲಗೆರೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕಾದ ಅವಶ್ಯಕತೆ ಇದ್ದು, ಕಾನೂನಿನ ಅರಿವಿದ್ದರೆ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತದೆ. ಅದೇ ರೀತಿ ಕಾನೂನಿನ ನೆರವು ನೀಡುವ ಅವಶ್ಯಕತೆಯೂ ಇದೆ. ದೇಶದ ಪ್ರತಿಯೊಂದು ಹಂತದಲ್ಲೂ ಕಾನೂನು ಪ್ರಾಧಿಕಾರಗಳಿದ್ದು, ಅವಶ್ಯಕತೆ ಇರುವವರು ಅವುಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಇಂದು ಕಾನೂನಿನ ವ್ಯಾಪ್ತಿಯ ಮತ್ತು ಅದರ ಶಕ್ತಿಯ ಅರಿವಿಲ್ಲದೇ ಸಾಕಷ್ಟು ತಪ್ಪುಗಳಾಗುತ್ತಿವೆ. ತಪ್ಪು ಮಾಡಿದ ಮೇಲೆ ಕಾನೂನು ತಿಳಿದಿಲ್ಲ ಎಂದರೆ ನಡೆಯುವುದಿಲ್ಲ. ಗೊತ್ತಿದ್ದೂ ಗೊತ್ತಿಲ್ಲದೆಯೋ ತಪ್ಪು ಸಂಭವಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಕಾನೂನಿನಲ್ಲಿದೆ. ಹಾಗಾಗಿ ಎಲ್ಲರೂ ಕಾನೂನಿನ ಅರಿವು ಹೊಂದಿ ಅದರ ನೆರವು ಪಡೆದು ಸುಂದರ ಹಾಗೂ ಶಾಂತ ಸಮಾಜವನ್ನು ಸೃಷ್ಟಿಸಬೇಕಿದೆ ಎಂದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಗೀತಾ, ವಕೀಲರಾದ ಪಿ.ರಮೇಶ್, ಬಿ.ಟಿ.ಸವಿತಾ, ಎಂ.ಕೆ.ವೀರೇಂದ್ರ ಸ್ವಾಮಿ, ತಿಪ್ಪೇಸ್ವಾಮಿ, ಅಜಯ್, ಚಿತ್ರಲಿಂಗಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಹನುಮಂತರಾಯಪ್ಪ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.