ಮಕ್ಕಳಲ್ಲಿ ಅನ್ವೇಷಣೆ, ಉದ್ಯಮ ಕೌಶಲ್ಯ ಬೆಳೆಸುವುದು ಅಗತ್ಯ: ಮಂಜುನಾಥ್‌

| Published : Apr 05 2024, 01:04 AM IST

ಸಾರಾಂಶ

ಮಕ್ಕಳಿಗೆ ಅನ್ವೇಷಣೆ, ಅಭಿವೃದ್ಧಿ ಮತ್ತು ಉದ್ದಿಮೆದಾರರಾಗುವ ಕುರಿತು ಮಾರ್ಗದರ್ಶನ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೆನ್‌ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್ಸ್‌ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎಚ್‌.ಎಸ್‌.ಮಂಜುನಾಥ್‌ ಅವರು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಕ್ಕಳಿಗೆ ಅನ್ವೇಷಣೆ, ಅಭಿವೃದ್ಧಿ ಮತ್ತು ಉದ್ದಿಮೆದಾರರಾಗುವ ಕುರಿತು ಮಾರ್ಗದರ್ಶನ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೆನ್‌ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್ಸ್‌ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎಚ್‌.ಎಸ್‌.ಮಂಜುನಾಥ್‌ ಅವರು ಸಲಹೆ ನೀಡಿದರು.

ನಗರದ ಎಎಂಸಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಟೊಯೋಟಾ ಸಂಸ್ಥೆ ಶಿಕ್ಷಣ ಸಚಿವಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯ ತನ್ನ ಶಕ್ತಿ ಮೀರಿ ಕೆಲಸ ಮಾಡುವುದಕ್ಕೆ ಮುಂದಾಗುವುದಕ್ಕೆ ಕೈಜೆನ್‌ ತಂತ್ರಗಳೆನ್ನುವರು. ಮಕ್ಕಳು ಶಕ್ತಿಮೀರಿ ಶ್ರಮಿಸಿದಾಗ ಮಾತ್ರ ಉತ್ತಮ ಫಲಿತಾಂಶ ಸಿಗಲು ಸಾಧ್ಯ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಾರ್ಯನಿರತರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಎಂಸಿ ಸಂಸ್ಥೆಯ ಅಧ್ಯಕ್ಷ ಡಾ। ಕೆ.ಆರ್.‌ಪರಮಹಂಸ, ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ। ಕೆ.ಕುಮಾರ್‌, ಎಎಂಸಿ ಸಂಸ್ಥೆಗಳ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಾಹುಲ್ ಕಲ್ಲೂರಿ, ನಿರ್ದೇಶಕ ಡಾ। ಮೋಹನ್ ಬಾಬು ಉಪಸ್ಥಿತರಿದ್ದರು.