ಮಕ್ಕಳಲ್ಲಿ ಬಾಲ್ಯದಿಂದಲೇ ಸ್ವಚ್ಛತೆಯ ಅರಿವು, ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಇನ್ನರ್ ವೀಲ್ ಅಧ್ಯಕ್ಷೆ ಸೀತಾಲಕ್ಷ್ಮಿ ತಿಳಿಸಿದರು.
ಕುಶಾಲನಗರ: ಮಕ್ಕಳಲ್ಲಿ ಬಾಲ್ಯದಿಂದಲೇ ಸ್ವಚ್ಛತೆಯ ಅರಿವು, ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಇನ್ನರ್ ವೀಲ್ ಅಧ್ಯಕ್ಷೆ ಸೀತಾಲಕ್ಷ್ಮಿ ತಿಳಿಸಿದರು.ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಕುಶಾಲನಗರ ಇನ್ನರ್ ವೀಲ್ ಸಂಸ್ಥೆ ವತಿಯಿಂದ ಕಸ ಸಂಗ್ರಹ ಮಾಡಿ, ಅದನ್ನು ಶೇಖರಿಸುವ ಬಾಟಲ್ ಆಕಾರದ ಕಸದ ಬುಟ್ಟಿಯನ್ನು ನೀಡಿದ ನಂತರ ಮಾತನಾಡಿದ ಅವರು, ಶಾಲಾ ಅವರಣ ಸೇರಿದಂತೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಪಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಟಪರಿಣಾಮಗಳು ಮತ್ತು ಕಸವನ್ನು ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡುವ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
