ಸಾರಾಂಶ
ಕಮತಗಿ : ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದು ನ್ಯಾಯೋಚಿತವಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಅವರು ಕಮತಗಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ವಿಧಾನಸಭಾ ಮತ ಕ್ಷೇತ್ರದ ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ವಿಶೇಷ ಮಹಾಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಸಿ ತನಿಖೆ ಆರಂಭಿಸಲಿದ್ದಾರೆ. ಆದರೆ ಲೋಕಾಯುಕ್ತ ಪೊಲೀಸರು ಗೃಹ ಇಲಾಖೆ ಅಡಿಯಲ್ಲಿ ಬರುತ್ತಾರೆ. ಅಧಿಕಾರದಲ್ಲಿ ಕೂತಿರುವ ಒಬ್ಬ ಮುಖ್ಯಮಂತ್ರಿಯನ್ನು ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪೊಲೀಸರ ಮೇಲೆ ಒತ್ತಡ ತಂದು ತಮ್ಮ ಪ್ರಭಾವ ಬೀರಲಿದ್ದಾರೆ. ಹೀಗಾಗಿ ಈ ಕೂಡಲೇ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದು ನ್ಯಾಯಸಮ್ಮತ ಎಂದರು.ಬಾಗಲಕೋಟೆ ಮತಕ್ಷೇತ್ರದಿಂದ ಹಿಂದಿನ ಸದಸ್ಯತಾ ಅಭಿಯಾನದಲ್ಲಿ 60 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದುವ ಮೂಲಕ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿತ್ತು. ಸದ್ಯ 80 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡುವ ಗುರಿ ಹೊಂದಿದ್ದು, ಈ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದರು.
ಕಾರ್ಯಕ್ರಮದಲ್ಲಿ ರಾಜು ಮುದೇನೂರ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ಕಲ್ಲಪ್ಪ ಭಗವತಿ, ಹುಚ್ಚಯ್ಯ ನಿಂಬಲಗುಂದಿ, ಹುಚ್ಚಪ್ಪ ವಡವಡಗಿ, ಹೇಮಂತಪ್ಪ ಮಾಡಬಾಳ, ಸಂಗಪ್ಪ ಗಾಣಿಗೇರ, ಮಲ್ಲೇಶ ವಿಜಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.