ಸಾರಾಂಶ
ಪಕ್ಷದಲ್ಲಿ ಕೇವಲ ಸ್ಥಾನಮಾನ ಪಡೆಯುವುದು ಮುಖ್ಯವಲ್ಲ. ಅದರ ಜತೆಯಲ್ಲೇ ಸದಸ್ಯತ್ವ ಅಭಿಯಾನದಲ್ಲೂ ಪಾಲ್ಗೊಂಡು ಅತೀ ಹೆಚ್ಚು ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಪಕ್ಷದಲ್ಲಿ ಕೇವಲ ಸ್ಥಾನಮಾನ ಪಡೆಯುವುದು ಮುಖ್ಯವಲ್ಲ. ಅದರ ಜತೆಯಲ್ಲೇ ಸದಸ್ಯತ್ವ ಅಭಿಯಾನದಲ್ಲೂ ಪಾಲ್ಗೊಂಡು ಅತೀ ಹೆಚ್ಚು ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ಶನಿವಾರ ಪಟ್ಟಣದ ವಿವಿಧ ವಾರ್ಡುಗಳ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡ ಮಾಡಿಸಿದ್ದಾರೆ. ಇನ್ನೂ ಹೆಚ್ಚು ಸದಸ್ಯತ್ವ ಮಾಡಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ತಮ್ಮ ತಮ್ಮ ಬೂತ್‍ಗಳಲ್ಲಿ ಸದಸ್ಯತ್ವ ಮಾಡಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.ಮುಂದಿನ ದಿನಗಳಲ್ಲಿ ತಾ.ಪಂ, ಜಿ.ಪಂ. ಹಾಗೂ ಪುರಸಭಾ ಚುನಾವಣೆಗಳು ಸಾಲು ಸಾಲಾಗಿ ಬರಲಿವೆ. ಅಷ್ಟೊತ್ತಿಗೆ ಸದಸ್ಯತ್ವ ಅಭಿಯಾನ ಮುಗಿದಿರಬೇಕು. ನಂತರ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಸಾಧ್ಯವಾದಷ್ಟು ಹೆಚ್ಚು ಸದಸ್ಯತ್ವ ಮಾಡಿಸಲು ಪ್ರಯತ್ನಿಸಿ ಎಂದರು.ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ರಸ್ತೆಗಳು ಹಾಳಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಘಟಕಗಳು ದುರಸ್ಥಿಗೆ ಬಂದಿದೆ. ಸರ್ಕಾರದ ಯೋಜನೆಗಳು ಸರಿಯಾಗಿ ಸಕಾಲದಲ್ಲಿ ಜನ ಸಾಮಾನ್ಯರಿಗೆ ತಲುಪುತ್ತಿಲ್ಲ. ಇಂತಹ ಎಲ್ಲಾ ವಿಚಾರಗಳನ್ನು ತಮ್ಮ ಗ್ರಾಮಗಳಲ್ಲಿ ಸಾಮಾನ್ಯ ಜನತೆಗೆ ತಿಳಿಸಬೇಕು ಎಂದರು.ಅತೀವೃಷ್ಟಿಯಲ್ಲಿ ಬೆಳೆಗಳು ಹಾಳಾಗಿದ್ದರೂ ಈವರೆವಿಗೂ ಪರಿಹಾರ ಸಿಕ್ಕಿಲ್ಲ. ಧಾರಕಾರವಾಗಿ ಬಿದ್ದ ಮಳೆಯಿಂದ ಹಾನಿಯಾದ ಮನೆಗಳಿಗೂ ಪರಿಹಾರ ಸಿಕ್ಕಿಲ್ಲ. ಆದರೂ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಈ ವೇಳೆ ಪ್ರಮುಖರಾದ ಪಾಲಕ್ಷಪ್ಪ, ಶಿವು, ಮಹಿಳೆಯರು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.