ರೈತರ ಸಂಕಷ್ಟವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಬಿಳಿಸುಳಿ ರೋಗದಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಸದನದ ಕಲಾಪ ಸುಗಮವಾಗಿ ನಡೆಯದ ಹಿನ್ನೆಲೆಯಲ್ಲಿ ಈ ಮಹತ್ವದ ವಿಚಾರವನ್ನು ಸಮರ್ಪಕವಾಗಿ ಚರ್ಚಿಸಲು ಸಾಧ್ಯವಾಗಲಿಲ್ಲ. ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿರುವ ಹಿನ್ನೆಲೆಯಲ್ಲಿ ಹಾಸನದ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದೆ ಬಲವಾಗಿ ಪ್ರಸ್ತಾಪಿಸಿದ್ದೇನೆ. ಇದಕ್ಕೆ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದೆ.

ಕನ್ನಡಪ್ರಭ ವಾರ್ತೆ ಹಾಸನ

ಬರದ ಆತಂಕದ ನಡುವೆಯೇ ಜೋಳಕ್ಕೆ ಬಿಳಿಸುಳಿ ರೋಗದ ಬಾಧೆ ಜಿಲ್ಲೆಯ ರೈತರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದ್ದು, ಸುಮಾರು ೭೦ ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. ರೈತರಿಗೆ ಸೂಕ್ತ ಪರಿಹಾರ ಮತ್ತು ಬೆಳೆ ವಿಮೆ ದೊರಕಿಸುವ ನಿಟ್ಟಿನಲ್ಲಿ ಯೋಚಿಸದೆ ಜಿಲ್ಲಾಧಿಕಾರಿಗಳ ಮೇಲೆ ಆರೋಪ ಮಾಡಿಕೊಂಡು ಕೂರುವುದು ಸರಿಯಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿಕೆಗೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ.ಎಂ.ಶಿವಲಿಂಗೇಗೌಡರು ತಿರುಗೇಟು ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಕುರಿತು ಸಮಗ್ರ ಅಧ್ಯಯನ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೇವಲ ಶೇ.೩೮ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಬಿತ್ತನೆಯಾದ ಬೆಳೆಗಳಿಗೂ ಬಿಳಿಸುಳಿ ರೋಗ ತಗುಲಿ ಹಾನಿಯಾಗಿದೆ. ರೈತರ ಸಂಕಷ್ಟವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಬಿಳಿಸುಳಿ ರೋಗದಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಸದನದ ಕಲಾಪ ಸುಗಮವಾಗಿ ನಡೆಯದ ಹಿನ್ನೆಲೆಯಲ್ಲಿ ಈ ಮಹತ್ವದ ವಿಚಾರವನ್ನು ಸಮರ್ಪಕವಾಗಿ ಚರ್ಚಿಸಲು ಸಾಧ್ಯವಾಗಲಿಲ್ಲ. ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿರುವ ಹಿನ್ನೆಲೆಯಲ್ಲಿ ಹಾಸನದ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದೆ ಬಲವಾಗಿ ಪ್ರಸ್ತಾಪಿಸಿದ್ದೇನೆ. ಇದಕ್ಕೆ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದೆ.

ನಿಯಮ ಮೀರಿ ಮದ್ಯದಂಗಡಿ ತೆರೆದರೆ ಲೈಸೆನ್ಸ್ ರದ್ದುಗೋವಾದಿಂದ ತೆರಿಗೆ ಪಾವತಿಸದ ಮದ್ಯವನ್ನು ಅಕ್ರಮವಾಗಿ ತಂದು ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಬಂದಿದ್ದು, ಇದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ನಿಗದಿತ ಸ್ಥಳದ ಹೊರತಾಗಿ ಕಾನೂನು ಉಲ್ಲಂಘಿಸಿ ಮದ್ಯದಂಗಡಿ ತೆರೆದರೆ ಲೈಸೆನ್ಸ್ ರದ್ದುಪಡಿಸಲಾಗುವುದು. ಇಷ್ಟು ದಿನ ಅಬಕಾರಿ ಇಲಾಖೆ ಹೇಗೆ ಕಾರ್ಯನಿರ್ವಹಿಸುತ್ತಿತ್ತು ಎಂಬುದು ನನಗೆ ಗೊತ್ತಿಲ್ಲ. ಆದರೆ ನನ್ನ ಅವಧಿಯಲ್ಲಿ ಹಿಂದಿನ ರೀತಿಯ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಳೆ ವಿಮೆ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೊರೆಬರ ಪರಿಸ್ಥಿತಿ, ಬೆಳೆ ನಷ್ಟ ಹಾಗೂ ಬಿಳಿಸುಳಿ ರೋಗದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ರೋಗಬಾಧೆ ಕಾಣಿಸಿಕೊಂಡಿದ್ದು, ರೈತರಿಗೆ ಪರಿಹಾರ ನೀಡಲು ದೊಡ್ಡ ಮೊತ್ತದ ಹಣದ ಅಗತ್ಯವಿದೆ ಎಂದು ಸಚಿವರು ಹೇಳಿದರು. ರೈತರು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು. ರಾಜ್ಯದಿಂದ ಕೇಂದ್ರಕ್ಕೆ ತೆರಿಗೆ ಪಾವತಿಯಾಗುತ್ತಿಲ್ಲವೇ? ಎಂದು ಪ್ರಶ್ನಿಸಿದ ಅವರು, ರೈತರಿಗೆ ಬೆಳೆ ವಿಮೆ ಮತ್ತು ಸೂಕ್ತ ಪರಿಹಾರ ದೊರಕಿಸಿಕೊಡದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಎಚ್ಚರಿಕೆ ನೀಡಿದರು. ನಾನು ಮಂತ್ರಿಯಾದಾಗಲೇ ಬರಗಾಲ ಬಂದಿದೆ. ನಮ್ಮ ನೀರನ್ನೂ ತಮಿಳುನಾಡಿನವರು ಕಿತ್ತುಕೊಳ್ಳುತ್ತಿದ್ದಾರೆ,” ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

===

ಬಾಕ್ಸ್:::; ಸಚಿವ ನಾಗೇಂದ್ರ ವಿರುದ್ಧದ ಆರೋಪ: ತನಿಖೆ ನಡೆಯಲಿ

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಪ ಬಂದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇ.ಡಿ. ಮತ್ತು ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳು ತನಿಖೆ ನಡೆಸಲಿ. ತಪ್ಪಿತಸ್ಥರಾಗಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಬಿಜೆಪಿಯವರು ಪಾದಯಾತ್ರೆ ಮಾಡಲಿ, ಅದರಲ್ಲಿ ತಪ್ಪೇನಿಲ್ಲ. ಆದರೆ ಜನರು ಬುದ್ಧಿವಂತರಾಗಿದ್ದು, ಸತ್ಯಾಸತ್ಯತೆ ಮತ್ತು ಅದರ ಅಗತ್ಯವನ್ನು ಅವರೇ ನಿರ್ಧರಿಸುತ್ತಾರೆ ಎಂದರು.