ಸಂವಿಧಾನ ಬದಲಾಯಿಸುತ್ತೇವೆ ಎನ್ನುವುದು ಸರಿಯಲ್ಲ: ನ್ಯಾ. ನಾಗಮೋಹನದಾಸ್

| Published : Mar 09 2025, 01:45 AM IST

ಸಾರಾಂಶ

ಉಡುಪಿ ಎಲ್‌ಐಸಿ ಎಂಪ್ಲಾಯೀಸ್‌ ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ ಆರಂಭಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಾವು ಮೊದಲು ನಮ್ಮಲ್ಲಿರುವ ದೋಷಗಳನ್ನು ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಸಂವಿಧಾನ ಸರಿ ಇಲ್ಲ, ಅದು ಪ್ರಸ್ತುತ ಕಾಲಕ್ಕೆ ಸರಿಯಾಗಿಲ್ಲ, ಆದ್ದರಿಂದ ಅದನ್ನು ಬದಲಿಸುತ್ತೇವೆ ಎಂದು ಹೇಳುವುದು ಸರಿಯಲ್ಲ ಎಂದು ನಿವೃತ್ತ ನ್ಯಾಯಾಧೀಶ ಎಚ್‌.ಎನ್‌. ನಾಗಮೋಹನದಾಸ್ ಅಭಿಪ್ರಾಯಪಟ್ಟರು.ಅವರು ನಗರದ ಎಲ್‌ಐಸಿ ಎಂಪ್ಲಾಯೀಸ್‌ ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಆರಂಭಗೊಂಡ ಉಡುಪಿ ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರದಲ್ಲಿ ಅವರು ಮಾತನಾಡಿದರು.ದೇಶದ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನವೊಂದೇ ಪರಿಹಾರ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಬೇಕು ಮತ್ತು ಅರ್ಥೈಸಿಕೊಳ್ಳಬೇಕು. ಜೊತೆಗೆ ಸಂವಿಧಾನಬದ್ಧವಾಗಿ ಜೀವಿಸುವುದನ್ನು ಕಲಿಯಬೇಕು, ಅದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.ಹಿರಿಯ ಸಾಹಿತ್ಯ ವಿಮರ್ಷಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ., ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್‌ ಕುಮಾರ್‌, ಪ್ರಾಧ್ಯಾಪಕಿ ಡಾ. ನಿಕೇತನಾ, ಸಂಘಟಕರಾದ ಪ್ರಭಾಕರ ಬಿ. ಕುಂದರ್‌, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.