ಸಾರಾಂಶ
ಕನ್ನಡಪ್ರಭ ವಾರ್ತೆ ಗುಬ್ಬಿ
ಒಂದು ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದು ಸಮಂಜಸವಲ್ಲ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ತಾಲೂಕಿನ ಡಿ.ರಾಂಪುರದಿಂದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹತ್ತಿರ ಮಾತನಾಡಿದ್ದೇನೆ. ಈ ಬಗ್ಗೆ ತಾಂತ್ರಿಕ ಸಮಿತಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ನಾನು ಒಂದು ವಾರ ಕಳೆದ ನಂತರ ಏನು ಉತ್ತರ ಬರುತ್ತದೆ ಎಂದು ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಗುಬ್ಬಿ ತಾಲೂಕಿನ ಹಾಗಲವಾಡಿ ಮತ್ತಿತರ ಗ್ರಾಮಗಳ ಏತ ನಿರಾವರಿ ಸರಿಪಡಿಸುವ ಕೆಲಸ ಮಾಡುತ್ತೇನೆ. ಸರ್ಕಾರ ನಿಂತ ನಿರಲ್ಲ ಹರಿಯುವ ನೀರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ನಾನು ಕೇಂದ್ರದಲ್ಲಿ ಮಾತನಾಡಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಗೊಂದಲ ಬೇಡ ಎನ್ನುವುದನ್ನ ಮನವರಿಕೆ ಮಾಡಿದ್ದೇವೆ. ನಾವೆಲ್ಲ ಜನರ ನಂಬಿಕೆಯನ್ನು ಮೈಗೂಡಿಸಿ ಕೆಲಸ ಮಾಡೋಣ ಎಂದು ಹೇಳಿದರು.ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಬಗ್ಗೆ ಮುಖ್ಯಮಂತ್ರಿ ಬಳಿ ಮತ್ತು ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಹತ್ತಿರ ಮಾತನಾಡಿ ವಾಸ್ತವಾಂಶ ತಿಳಿಸಿದ್ದೇನೆ. ಅದಕ್ಕೆ ಅವರು ತಾಂತ್ರಿಕ ವರದಿ ಬಂದಮೇಲೆ ನಿಮ್ಮನ್ನೆಲ್ಲ ಕರೆಸಿ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ ಎಂದರು.
ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ, ಗುಬ್ಬಿ ತಾಲೂಕಿನ ಬಿಕ್ಕೆಗುಡ್ಡ ಹಾಗೂ ಹಾಗಲವಾಡಿ ನೀರಾವರಿ ಯೋಜನೆಯ ಕೆಲಸ ಕಳೆದ 10 ವರ್ಷದಿಂದ ನಿಂತಿದೆ. ಈ ನೀರಾವರಿ ಯೋಜನೆ ಆದಷ್ಟು ಬೇಗ ಮುಗಿಸಬೇಕು. ಈ ಯೋಜನೆಯಿಂದ ಸಾವಿರಾರು ರೈತರಿಗೆ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದರು.ಜೆಡಿಎಸ್ ಮುಖಂಡರಾದ ಬಿ.ಎಸ್.ನಾಗರಾಜು, ಹೊನ್ನಗಿರಿ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಭೈರಪ್ಪ, ಚಂದ್ರಶೇಖರ್ ಬಾಬು, ಯೋಗಾನಂದ, ನಿಂಗಪ್ಪ ಯತೀಶ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯ ಜಿ.ಆರ್.ಶಿವಕುಮಾರ್, ಕೃಷ್ಣಮೂರ್ತಿ ಮತ್ತಿತರರು ಇದ್ದರು.