ಸಾರಾಂಶ
ರಾಮನಗರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಪಿಸಿಸಿ ಅಧ್ಯಕ್ಷರು ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶ್ರಮ ಕಾರಣ. ಹೀಗಾಗಿ ಮುಂದಿನ 5 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವ ಜತೆಗೆ ಮುಖ್ಯಮಂತ್ರಿ ಆಗಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು ತಿಳಿಸಿದರು.
ಕಾರ್ಮಿಕ ಘಟಕದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಲು ಡಿ.ಕೆ.ಶಿವಕುಮಾರ್ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಲ್ಲದೆ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರದ ಗದ್ದುಗೆಗೆ ತರುವಲ್ಲಿ ಶ್ರಮಿಸಿದ್ದಾರೆ. ಇವೆಲ್ಲವನ್ನು ನೋಡಿದಾಗ ಅವರು ಮುಖ್ಯಮಂತ್ರಿ ಗಾದಿಗೆ ಅರ್ಹರು ಎಂದರು.ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅಲ್ಲಂ ವೀರಭದ್ರಪ್ಪ, ದೇಶಪಾಂಡೆ, ಜನಾರ್ಧನ ಪೂಜಾರಿ, ಎಸ್.ಎಂ.ಕೃಷ್ಣ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್, ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಬಳಿಕ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಸಮರ್ಥವಾಗಿ ಪಕ್ಷವನ್ನು ಸಂಘಟಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಸಂದರ್ಭದಲ್ಲಿ ರಾಜ್ಯದಲ್ಲಿ 80 ಕಾಂಗ್ರೆಸ್ ಶಾಸಕರಿದ್ದರು. ಡಿಕೆಶಿ ಅವರು ರಾಜ್ಯಾದ್ಯಂತ ಸಂಚರಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆಲ್ಲಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಅಲ್ಲದೆ ಲೋಕಸಭೆ ಚುನಾವಣೆಯಲ್ಲ್ಲೂ 9 ಸ್ಥಾನ ಗಳಿಸಲು ಶ್ರಮವಹಿಸಿ ಕೆಲಸ ಮಾಡಿದ್ದರು. ಡಿಕೆಶಿ ಒಕ್ಕಲಿಗ ಜನಾಂಗಕ್ಕೆ ಸೀಮಿತ ನಾಯಕರಾಗದೆ ವೀರಶೈವ, ಒಕ್ಕಲಿಗ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ವರ್ಗದವರನ್ನು ಒಗ್ಗಟ್ಟಿನಿಂದ ಕೊಂಡೊಯ್ಯುವ ಶಕ್ತಿ ಡಿಕೆಶಿಗೆ ಇದೆ ಎಂದು ಹೇಳಿದರು.ಮಂಡ್ಯ, ಮೈಸೂರು, ತುಮಕೂರು, ಬೆಂ.ದಕ್ಷಿಣ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಡಿಕೆಶಿ ಮುಖ್ಯಮಂತ್ರಿಯಾಗುತ್ತಾರೆ ಎಂದು ರಾಜ್ಯದ ಜನತೆ 136 ಸ್ಥಾನಗಳನ್ನು ಗೆಲ್ಲಿಸಿ ಆಶೀರ್ವದಿಸಿದ್ದರು. ನನ್ನಂತ ಸಾವಿರಾರು ಮುಖಂಡರು, ಲಕ್ಷಾಂತರ ಕಾರ್ಯಕರ್ತರು ಡಿಕೆಶಿ ಅವರ ಸಿದ್ದಾಂತ, ನಡೆಗೆ ಬದ್ದರಾಗಿದ್ದು, ಅವರಿಗೆ ದೊಡ್ಡ ಸ್ಥಾನ ಲಭಿಸಬೇಕೆಂಬುದು ನಮ್ಮೆಲ್ಲರ ಆಸೆ ಎಂದರು.
ಡಿಕೆಶಿ ಕಾಂಗ್ರೆಸ್ ಪಕ್ಷದ ಚದುರಂಗದ ಚಾಣಕ್ಯ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಾದರೆ ರಾಜ್ಯದ ಕಾಂಗ್ರೆಸ್ ಪಕ್ಷ ಹೆಚ್ಚಿನ ರೀತಿಯಲ್ಲಿ ಸಂಘಟನೆಯಾಗಲಿದೆ. ಡಿಕೆಶಿ, ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೆ 5 ವರ್ಷ ಮುಂದುವರಿದರೆ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು.ಮುಂದೆ ಪಂಚಾಯಿತಿ ಚುನಾವಣೆ ಬರಲಿದ್ದು, ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಕರ್ತರು ಪ್ರಚಾರ ಮಾಡಬೇಕಿದೆ. ಕಾಂಗ್ರೆಸ್‌ನ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಮಿಕ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಘಟಕದ ರಾಜ್ಯ ಜಂಟಿ ಕಾರ್ಯದರ್ಶಿ ಮಹಮದ್ ಶಕೀಲ್, ಜಿಲ್ಲಾ ಉಪಾಧ್ಯಕ್ಷ ರವಿಕುಮಾರ್, ರಾಮನಗರ ತಾಲ್ಲೂಕು ಅಧ್ಯಕ್ಷ ದೇವರಾಜು, ಉಪಾಧ್ಯಕ್ಷ ಮಹದೇವಯ್ಯ, ಚನ್ನಪಟ್ಟಣ ಬ್ಲಾಕ್ ಅಧ್ಯಕ್ಷ ಮಹೇಂದ್ರ, ಚನ್ನಪಟ್ಟಣ ಟೌನ್ ಅಧ್ಯಕ್ಷ ಜಯಲಕ್ಷಿö್ಮ, ಜಿಲ್ಲಾ ಕಾರ್ಯದರ್ಶಿ ವಿನಯ್ ರಾವ್, ಕೂಟಗಲ್ ಬ್ಲಾಕ್ ಅಧ್ಯಕ್ಷ ಸಿದ್ದರಾಜು, ಕನಕಪುರ ಬ್ಲಾಕ್ ಅಧ್ಯಕ್ಷ ಸುಂದರ್, ಕಾರ್ಮಿಕ ಘಟಕದ ಮುಖಂಡರಾದ ಆರೀಫ್ ಉಲ್ಲಾ, ಮಹಮದ್ ಅಖಿದ್, ಸೈಯದ್ ಇಬ್ರಾಹಿಂ, ಎಂ.ಸಿ.ಸ್ವಾಮಿ, ಜೋಸೆಫ್ ಇತರರಿದ್ದರು.ಬಾಕ್ಸ್ ................
ಡಿಕೆಶಿ ಸಿಎಂ ಆಗಲು ಹೈಕಮಾಂಡ್ ತೀರ್ಮಾನ ಮುಖ್ಯಡಿ.ಕೆ.ಶಿವಕುಮಾರ್ ಚದುರಂಗದ ಚಾಣಕ್ಯ. ಪಕ್ಷ ಅಧಿಕಾರ ಹಿಡಿಯುವಲ್ಲಿ ಇವರ ಕೊಡುಗೆ ಅಪಾರವಾಗಿದೆ. ಹಾರ್ಡ್ ವರ್ಕರ್ ಆಗಿರುವ ಡಿಕೆಶಿ ಪಕ್ಷದ ಬಗ್ಗೆ ಸದಾ ಚಿಂತಿಸುತ್ತಾರೆ. ಪಕ್ಷದಲ್ಲಿ ದುಡಿಯುವವರಿಗೆ ಕೂಲಿ ಕೊಡಬೇಕಿದ್ದು, ಡಿಕೆಶಿ ಕುರಿತಾಗಿ ಹೈಕಮಾಂಡ್ ನಿರ್ಧಾರಕ್ಕೆ ಲಕ್ಷಾಂತರ ಕಾರ್ಯಕರ್ತರು ಕಾಯುತ್ತಿದ್ದು, ಜಿಲ್ಲೆಯ ಮಗ ಡಿಕೆಶಿ ಸಿಎಂ ಆದರೆ ಸಂತೋಷ. ನಮಗೆ ಪಕ್ಷ ಮುಖ್ಯ. ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದು, ಡಿಕೆಶಿ ಸಿಎಂ ಆಗಲಿ ಎಂಬುದು ನಮ್ಮ ಅಭಿಲಾಷೆ.
-ಪುಟ್ಟರಾಜು, ಜಿಲ್ಲಾಧ್ಯಕ್ಷರು, ಕಾಂಗ್ರೆಸ್ ಕಾರ್ಮಿಕ ಘಟಕ, ಬೆಂ.ದಕ್ಷಿಣ ಜಿಲ್ಲೆ30ಕೆಆರ್ ಎಂಎನ್ 4.ಜೆಪಿಜಿ
ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))