ಮುಂಡಗೋಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಕ್ಕು ಹೊಂದದಿದ್ದರೆ ಪ್ರಜೆಯಾಗುವ ನೈತಿಕತೆಯನ್ನು ಕಳೆದುಕೊಳ್ಳುತ್ತೇವೆ. ದೇಶದ ಪ್ರಜೆಯಾಗಿ ಮತದಾನ ಹಕ್ಕು ಪಡೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕ ಹಾಗೂ ಉತ್ತರಕನ್ನಡ ಜಿಲ್ಲಾ ಎಸ್.ಐ.ಆರ್. ಉಸ್ತುವಾರಿ ಭೀಮಣ್ಣ ನಾಯ್ಕ ಹೇಳಿದರು.
ಮಂಗಳವಾರ ಸಂಜೆ ಪಟ್ಟಣದ ಗಣಪತಿ ದೇವಾಲಯ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾದ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಬಂಡವಾಳ ಶಾಹಿ ಸರ್ವಾಧಿಕಾರ ಧೋರಣೆಯಿಂದ ಬಿಜೆಪಿ ಹೇಗಾದರೂ ಮಾಡಿ ಅಧಿಕಾರಕ್ಕೇರುವ ದುರುದ್ದೇಶದಿಂದ ಎಸ್.ಐ.ಆರ್. ಜಾರಿ ಮಾಡಿದೆ. ಇದಕ್ಕೆ ತಕ್ಕ ಉತ್ತರ ನೀಡಬೇಕಾದರೆ ಪಕ್ಷಾತೀತವಾಗಿ ಮನೆ ಮನೆಗೆ ತೆರಳಿ ಅರ್ಜಿ ಭರ್ತಿ ಮಾಡಿ ಪಟ್ಟಿಯಿಂದ ಯಾರೂ ವಂಚಿರಾಗದಂತೆ ಕಾಂಗ್ರೆಸ್ ಬೂತ್ ಏಜೆಂಟರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ಬಳಿಕ ದೇಶದಲ್ಲಿ ನೀರಾವರಿ, ಆರೋಗ್ಯ ಕ್ಷೇತ್ರ ಸೇರಿದಂತೆ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕಾಂಗ್ರೆಸ್ಪಾ ತ್ರ ಮಹತ್ವದ್ದಾಗಿದೆ. ಕೇಂದ್ರ ಸರ್ಕಾರದ ವೈಫಲ್ಯದಿಂದ ಜನರ ಮೇಲಾಗುತ್ತಿರುವ ಹೊರೆಯನ್ನು ತಗ್ಗಿಸುವಂತ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಎಲ್ಲ ವರ್ಗದ ಜನರು ನೆಮ್ಮದಿಯಿಂದ ಬದುಕಲು ಅನುಕೂಲ ಮಾಡಿಕೊಟ್ಟಿದೆ. ಆದರೂ ಕೂಡ ಬಿಜೆಪಿಯವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿಯಿಂದ ಸಾಕಷ್ಟು ಜನ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ಯಾವುದಾದರೂ ಒಂದಾದರೂ ಜನಪರವಾದ ಯೋಜನೆ ನೀಡದ್ದಾರಾ ಎಂಬುವುದಕ್ಕೆ ಉತ್ತರಿಸಲಿ ಎಂದ ಅವರು, ಅಧಿಕಾರ ದಾಹದಿಂದ ರಾಜ್ಯದಲ್ಲಿ ಬಿಜೆಪಿ ಸುಳ್ಳಿನ ಸರಮಾಲೆ ಹೆಣೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಸಿ, ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ವೈ.ಪಿ. ಬುಜಂಗಿ, ದೇವು ಪಾಟೀಲ, ಕೆಂಜೋಡಿ ಗಲಬಿ, ಧರ್ಮರಾಜ ನಡಗೇರ, ಮಹ್ಮದಗೌಸ್ ಮಖಾಂದಾರ, ರಾಮಕೃಷ್ಣ ಮೂಲಿಮನಿ, ರಜಾ ಪಠಾಣ, ಸಿದ್ದು ಹಡಪದ, ಸಲ್ಮಾ ಶೇರಖಾನೆ ಮುಂತಾದವರು ಉಪಸ್ಥಿತರಿದ್ದರು. ಧರ್ಮರಾಜ ನಡಗೇರ ನಿರೂಪಿಸಿದರು.17 ವರ್ಷ 8 ತಿಂಗಳಾದವರು ಗಣತಿ ನಮೂನೆ ತುಂಬಲು ಅರ್ಹತೆ
ಶಿರಸಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್ ಐ ಆರ್) ನಮೂನೆಯನ್ನು ಈಗಾಗಲೇ ಮತದಾರರ ಪಟ್ಟಿಯಲ್ಲಿ ನಮೂದಾಗಿರುವ ಮತದಾರರೊಂದಿಗೆ ಹೊಸದಾಗಿ ಪಟ್ಟಿಯಲ್ಲಿ ಸೇರ್ಪಡೆಗೆ 17 ವರ್ಷ 8 ತಿಂಗಳಿನ ವಯೋಮಿತಿಯವರೂ ಅರ್ಹತೆ ಹೊಂದಿರುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದರು.ರಾಜ್ಯಾದ್ಯಂತ ಮತದಾರ ವಿಶೇಷ ಸಮಗ್ರ ಪರಿಷ್ಕರಣೆ ಉದ್ದೇಶ ಎಲ್ಲ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲೆ ಸೇರ್ಪಡೆಗೊಳಿಸಬಹುದಾಗಿದೆ. ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ಅರಣ್ಯವಾಸಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸುವುದು ಅವಶ್ಯ ಎಂದು ಈ ಸಂದರ್ಭದಲ್ಲಿ ಹೇಳಿದರು.ಬಿಎಲ್‌ಓ ಅವರನ್ನು ಗೌರವಿಸಿ:ಕರ್ನಾಟಕದಲ್ಲಿ ೫೯,೦೫೦ ಬೂತ್‌ಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣಾ ಕಾರ್ಯದಲ್ಲಿ ೨೩೦೦೦ ಅಂಗನವಾಡಿ ಕಾರ್ಯಕರ್ತರೊಂದಿಗೆ ಶಿಕ್ಷಕರು ಬಿ ಎಲ್ ಒ ಆಗಿ ಹೆಚ್ಚುವರಿ ಕಾರ್ಯ ಜರುಗಿಸುತ್ತಿದ್ದಾರೆ. ಇಂತಹ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳ ಕಾರ್ಯಕ್ಕೆ ಗೌರವಿಸಿ, ಸೌಜನ್ಯದಿಂದ ಸಹಕರಿಸಿ, ಪರಸ್ಪರ ಸಹಾಯ ಮನೋಭಾವದಿಂದ ಪರಿಷ್ಕರಣಾ ಪ್ರಕ್ರಿಯೆಗೆ ನೆರವಾಗುವಂತೆ ಕರೆ ನೀಡಿದ್ದಾರೆ.