ಸಾರಾಂಶ
ಕಡೂರು, ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಅಗತ್ಯ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್. ಸಿ. ಕಲ್ಮರುಡಪ್ಪ ಹೇಳಿದರು.
ಸಖರಾಯಪಟ್ಟಣ ಸಮೀಪದ ಕಂಚುಗಾರನಹಳ್ಳಿಯಲ್ಲಿ ಬಾಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಕನ್ನಡಪ್ರಭ ವಾರ್ತೆ, ಕಡೂರುಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಅಗತ್ಯ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್. ಸಿ. ಕಲ್ಮರುಡಪ್ಪ ಹೇಳಿದರು.
ತಾಲೂಕಿನ ಸಖರಾಯಪಟ್ಟಣ ಸಮೀಪದ ಕಂಚುಗಾರನಹಳ್ಳಿಯಲ್ಲಿ ನಡೆದ ಬಾಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಪ್ರತಿಭಾ ಕಾರಂಜಿ ಹುಟ್ಟಿರುವುದು ನಮ್ಮ ಜಿಲ್ಲೆಯಲ್ಲಿ ಎಂಬ ಹೆಮ್ಮೆ ಇದೆ. ಪ್ರತಿಭೆಗಳು ಹುಟ್ಟುವುದೇ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ಪ್ರತಿಭೆಗಳು ರಾಜ್ಯ ಮಟ್ಟದಲ್ಲಿ ಬೆಳಗಿ ಶಾಲೆಗೆ ಮತ್ತು ಊರಿಗೆ ಕೀರ್ತಿ ತರುವ ಕೆಲಸ ಮಾಡುವುದು ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿ ಯಾಗಿದೆ ಎಂದರು. ಇಸಿಒ ಗಂಗಪ್ಪ ಮಾತನಾಡಿ, ಮಕ್ಕಳ ಮನಸ್ಸು ಬಿಳಿ ಹಾಳೆಯಂತೆ . ಅದರಲ್ಲಿ ಒಳ್ಳೆಯದನ್ನೇ ನಾವು ಬರೆಯಬೇಕು. ಮಕ್ಕಳಲ್ಲಿ ಇರುವ ವಿವಿಧ ಪ್ರತಿಭೆಗಳನ್ನು ಪೋಷಿಸಿ ಎಂದರು. ತಾಪಂ ಮಾಜಿ ಉಪಾಧ್ಯಕ್ಷ ರುದ್ರಮೂರ್ತಿ ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಎರಡೂ ಮುಖ್ಯ. ನಾವು ಅಂಕಗಳಿಗೆ ಬೆಲೆ ಕೊಡದೆ ಮಕ್ಕಳ ಪ್ರತಿಭೆ ಗುರುತಿಸುವುದು ಅಗತ್ಯ ಎಂದರು.ತಾಪಂ ಮಾಜಿ ಅಧ್ಯಕ್ಷ ಮೋಹನಕುಮಾರ್ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸುವುದು ತುಂಬಾ ಕಷ್ಟದ ಕೆಲಸ. ಹಬ್ಬದ ರೀತಿಯಲ್ಲಿ ಕಾರಂಜಿ ಯನ್ನು ಮಾಡಿರುವುದಕ್ಕೆ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಕಾಂತರಾಜು, ನಾಗೇನಹಳ್ಳಿ ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಶಿಕ್ಷಕರ ಸಂಘದ ಜಗದೀಶ್, ರವಿಕುಮಾರ್, ಶಶಿಧರ್, ಕೆ. ಬಿ. ಚಂದ್ರಪ್ಪ, ಕವಿತಾ, ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. 24ಕೆಕೆಡಿಯು2.ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಂಚುಗಾರನಹಳ್ಳಿಯಲ್ಲಿ ನಡೆದ ಬಾಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಜಿಪಂ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್. ಸಿ. ಕಲ್ಮರುಡಪ್ಪ ಉದ್ಘಾಟಿಸಿದರು.