ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಶೈಲಜಾ

| Published : Dec 26 2024, 01:03 AM IST

ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಶೈಲಜಾ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ಜಾನಪದ ಕಲೆ, ಸಂಸ್ಕೃತಿ ಪರಂಪರೆ ನಮ್ಮ ಪೂರ್ವಿಕರಿಂದ ಬಂದ ಬಳುವಳಿ. ಈ ಸಂಸ್ಕೃತಿ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ ಹೇಳಿದರು.

ಕನ್ನಡ ಜಾನಪದ ದಿನಾಚಾರಣೆ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಜಾನಪದ ಕಲೆ, ಸಂಸ್ಕೃತಿ ಪರಂಪರೆ ನಮ್ಮ ಪೂರ್ವಿಕರಿಂದ ಬಂದ ಬಳುವಳಿ. ಈ ಸಂಸ್ಕೃತಿ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ ಹೇಳಿದರು.

ತಾಲೂಕಿನ ಕೂತಗೋಡು ಪಂಚಾಯಿತಿ ವೈಕುಂಠಪುರದಲ್ಲಿ ಶೃಂಗೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕ ಆಯೋಜಿಸಿದ್ದ ಕನ್ನಡ ಜಾನಪದ ದಿನಾಚಾರಣೆ ಉದ್ಘಾಟಿಸಿ ಮಾತನಾಡಿದರು. ಪ್ರಾಚೀನ ಕಾಲದಿಂದಲೂ ಬಂದಿರುವ ಜಾನಪದ ಕಲೆ, ಮೌಲ್ಯ, ಸಂಸ್ಕೃತಿಗಳು ಇಂದು ನಶಿಸುವ ಹಂತದಲ್ಲಿದೆ. ಪಾಶ್ಚಿಮಾತ್ಯ ಸಂಸ್ಕೃತಿ, ಆಧುನಿಕ ಭರಾಟೆ ನಡುವೆ ನಮ್ಮ ಯುವಜನಾಂಗ ನಮ್ಮ ಸಂಸ್ಕೃತಿ, ಮೌಲ್ಯಗಳಿಂದ ದೂರ ಸರಿಯುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರಾಯಿಕ ಜಾನಪದ ಕಲೆ, ಆಚರಣೆ, ಹಬ್ಬಗಳು ಮಹತ್ವ ಕಳೆದುಕೊಳ್ಳುವತ್ತ ಸಾಗಿದೆ. ಅಂಟಿಕೆ ಪಿಂಟಿಕೆ, ಗ್ರಾಮೀಣ ಆಟಗಳು, ಹುಲಿ ವೇಷ, ಕರಡಿ ಕುಣಿತ ಮೊದಲಾದ ಸಾಂಪ್ರದಾಯಿಕ ಕಲೆಗಳು ಅಪರೂಪಕ್ಕೆ ಕೆಲವೆಡೆ ಉಳಿದುಕೊಂಡಿದ್ದರೂ ಪ್ರೋತ್ಸಾಹವಿಲ್ಲದೇ ಕಣ್ಮರೆಯತ್ತ ಸಾಗುತ್ತಿವೆ. ಇವುಗಳನ್ನು ಉಳಿಸಿ ಬೆಳೆಸಬೇಕು ಎಂದರು.

ತಾಲೂಕು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಕನ್ನಡ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಓಣಿತೋಟ ರತ್ನಾಕರ್, ತಾಲೂಕು ಕಾರ್ಮಿಕ ಮಿತ್ರ ಬಳಗದ ಅಧ್ಯಕ್ಷ ಶೂನ್ಯ ರಮೇಶ್, ಪೋಲೀಸ್ ಅಧಿಕಾರಿ ಡಾ.ಮೋಹನ್ ರಾಜಣ್ಣ, ವೆಂಕಪ್ಪ ಆಚಾರ್ಯ, ಟಿ.ಟಿ.ಕಳಸಪ್ಪ, ರೇಣುಕಾ ರಾಮಪ್ಪ, ಶೋಭಲತಾ, ಲತಾ ಪ್ರಶಾಂತ್ ಮತ್ತಿತರರು ಇದ್ದರು.

25 ಶ್ರೀ ಚಿತ್ರ 1-

ಶೃಂಗೇರಿ ತಾಲೂಕಿನ ವೈಕುಂಠಪುರದಲ್ಲಿ ನಡೆದ ಕನ್ನಡ ಜಾನಪದ ಪರಿಷತ್ ದಿನಾಚಾರಣೆಯನ್ನು ಶೈಲಜಾ ರತ್ನಾಕರ ಹೆಗ್ಡೆ ಉದ್ಘಾಟಿಸಿದರು.