ಚಿಕ್ಕಮಗಳೂರುಕಾಲಕಾಲಕ್ಕೆ ರಾಜ್ಯ ಸರ್ಕಾರ ಬಿಸಿಯೂಟ ಅಡುಗೆಯವರಿಗೆ ಗೌರವಧನ ಹೆಚ್ಚಿಸುತ್ತಲೇ ಬಂದಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಾಲನ್ನು ಆರಂಭದಿಂದಲೂ ಹೆಚ್ಚಿಸಿಲ್ಲ. ಸಂಘಟನಾತ್ಮಕ ಹೋರಾಟದಿಂದ ಸಮಪಾಲನ್ನು ಪಡೆಯಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಎಂಇಎಸ್ ಸಭಾಂಗಣದಲ್ಲಿ ಅಡುಗೆ ಸಿಬ್ಬಂದಿ ತರಬೇತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಾಲಕಾಲಕ್ಕೆ ರಾಜ್ಯ ಸರ್ಕಾರ ಬಿಸಿಯೂಟ ಅಡುಗೆಯವರಿಗೆ ಗೌರವಧನ ಹೆಚ್ಚಿಸುತ್ತಲೇ ಬಂದಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಾಲನ್ನು ಆರಂಭದಿಂದಲೂ ಹೆಚ್ಚಿಸಿಲ್ಲ. ಸಂಘಟನಾತ್ಮಕ ಹೋರಾಟದಿಂದ ಸಮಪಾಲನ್ನು ಪಡೆಯಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಅಡಿ ನಗರದ ಎಂಇಎಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಡುಗೆ ಸಿಬ್ಬಂದಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅಕ್ಷರದಾಸೋಹ ಬಿಸಿಯೂಟ ಕಾರ್ಯಕ್ರಮ ಜಾರಿಯಾಗಿತ್ತು. ಆರಂಭದಲ್ಲಿ ಈಶಾನ್ಯ ಕರ್ನಾಟಕದಲ್ಲಿ ಜಾರಿಯಾಗಿ ನಂತರ ರಾಜ್ಯಾದ್ಯಂತ ವಿಸ್ತರಣೆಯಾಗಿದೆ.ಬಿಸಿಯೂಟ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಶೇ.60 ರಷ್ಟು ಹಣ, ರಾಜ್ಯದಿಂದ ಶೇ.40 ರಷ್ಟು ಅನುದಾನದ ಒಪ್ಪಂದ ದಲ್ಲಿ ಈ ಯೋಜನೆ ಆರಂಭವಾಯಿತು. ಆರಂಭದಲ್ಲಿ ರಾಜ್ಯ ₹400 ರು., ಕೇಂದ್ರ ₹600 ರು. ಸೇರಿ ₹1 ಸಾವಿರ ನೀಡಲಾಗುತ್ತಿತ್ತು. ಯೋಜನೆ ಆರಂಭವಾಗಿ ಇಲ್ಲಿಗೆ 23 ವರ್ಷ ಕಳೆದಿದೆ. ಆದರೆ, ಇಂದಿಗೂ ಕೇಂದ್ರ ತನ್ನ ಪಾಲಿನ ಕೇವಲ ₹ 600 ರು. ಮಾತ್ರ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ₹400 ರಿಂದ ₹4 ಸಾವಿರ ರು. ಗೆ ಗೌರವಧನ ಹೆಚ್ಚಿಸಿದೆ. ಕೇಂದ್ರವೂ ₹6 ಸಾವಿರ ನೀಡಿದ್ದರೆ ಇಂದು ನೀವು ₹10 ಸಾವಿರ ರೂ ಗೌರವಧನ ಪಡೆಯಬಹುದಿತ್ತು ಎಂದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆ ಪಕ್ಷದ ಮುಖಂಡರು ಮುಂದೊಂದು ದಿನ ನಿಮ್ಮ ಬಳಿಗೆ ಬಂದೇ ಬರುತ್ತಾರೆ. ಆಗ ಈ ಬಗ್ಗೆ ಪ್ರಶ್ನಿಸಿ. ಅಲ್ಲದೆ ಬಿಸಿಯೂಟ ಅಡುಗೆ ಸಿಬ್ಬಂದಿ ಸಂಘಟನಾತ್ಮಕವಾಗಿ ಹೋರಾಟ ರೂಪಿಸಿದರೆ ಕೇಂದ್ರದ ಪಾಲು ಪಡೆಯುವುದು ಅಸಾಧ್ಯವಾದುದೇನಲ್ಲ ಎಂದರು. ಮುಂದಿನ ರಾಜ್ಯ ಬಜೆಟ್ ನಲ್ಲಿ ಅಡುಗೆಯವರಿಗೆ ಗೌರವಧನ ಹೆಚ್ಚಿಸಬೇಕು ಎಂಬ ಬೇಡಿಕೆ ಮುಂದೆ ಇಡುತ್ತೇನೆ ಎಂದರು.ಅಕ್ಷರದಾಸೋಹ ಫೆಡರೇಶನ್ ಕಾರ್ಯದರ್ಶಿ ವಿಜಯ್‌ಕುಮಾರ್ ಮಾತನಾಡಿ. ಹೋರಾಟದಿಂದ ಅಡುಗೆ ಸಿಬ್ಬಂದಿ ವೇತನ ಹೆಚ್ಚಿಸುತ್ತಲೆ ಬಂದಿದ್ದೇವೆ. 23 ವರ್ಷದ ಹೋರಾಟದ ಫಲ ಇಂದು ₹4700 ರು.ಗೆ ಬಂದಿದೆ. ಅದೇ ಅಂತಿಮವಲ್ಲ. ಸಂಘದ ಕಾರ್ಯಕ್ರಮಗಳಿಗೆ ಶೇ.೫೦ ಜನ ಮಾತ್ರ ಬರುತ್ತಿದ್ದೀರಿ. ಪೂರ್ಣ ಪ್ರಮಾಣದಲ್ಲಿ ಸಂಘಕ್ಕೆ ಬಂದಲ್ಲಿ ನಿಮ್ಮ ಬೇಡಿಕೆಗಳ ಸಂಪೂರ್ಣ ಈಡೇರಿಕೆಗೆ ಸಹಾಯವಾಗಲಿದೆ ಎಂದರು.ಪಿಎಂ ಪೋಷಣ್ ಶಿಕ್ಷಣಾಕಾರಿ ಎಸ್.ಪಿ.ನಟರಾಜ್ ಮಾತನಾಡಿ, ಇಡೀ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಲಾ ಮಕ್ಕಳಿಗೆ ಅತ್ಯುತ್ತಮ ಯೋಜನೆ ಜಾರಿಗೆ ತರುತ್ತಿವೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕೊಡುವ ಮೂಲಕ ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಲು ಮುಂದಾಗಿವೆ ಎಂದರು.

ಶಿಕ್ಷಣ ಅಕಾರಿ ನೀಲಕಂಠ ಸ್ವಾಗತಿಸಿದರು. ಅಕ್ಷರದಾಸೋಹ ಫೆಡರೇಶನ್ ಅಧ್ಯಕ್ಷ ಜಿ.ರಘು, ಬಿಇಒ ರುದ್ರಪ್ಪ, ನಟರಾಜ್, ತಾಪಂ ಇಒ ವಿಜಯ್‌ಕುಮಾರ್, ಇಂಧುಮತಿ, ಸಮೀಮಾಭಾನು, ಕಾಂತರಾಜು, ಅಂಜನಪ್ಪ, ಪೂರ್ಣೇಶ್ ಮತ್ತಿತರರಿದ್ದರು.