ಸಾರಾಂಶ
ಕನ್ನಡಪ್ರಭ ವಾರ್ತೆ ಇಳಕಲ್ಲ
ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಹೇಳಿದರು.ನಗರದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದಿನ ವರ್ಷ ತಮ್ಮ ಶಾಲೆ ಉತ್ತಮ ಫಲಿತಾಂಶ ಪಡೆದಿದ್ದು, ಈ ಭಾರಿಯೂ ಮುಂದುವರೆಯಬೇಕು. ಶಾಲೆಗೆ ಕೊಠಡಿಗಳ ಕೊರತೆ ಇತ್ತು. ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು .
ಮರೋಳ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎ.ಎಂ.ಬೀಳೆಕುದರಿ ಮಾತನಾಡಿ, ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ವಿದ್ಯಾರ್ಥಿಗಳು ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದರು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಪ್ರೊ.ಡಾ.ವಿ.ಕೆ.ವಂಶಾಕೃತಮಠ, ಬಿಆರ್‌ಸಿ ಸಿದ್ದು ಪಾಟೀಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಮಾತನಾಡಿದರು.
ನಗರಸಭೆ ಸದಸ್ಯ ಸುರೇಶ ಜಂಗ್ಲಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಪ್ರೊ.ಡಾ.ವಿ.ಕೆ.ವಂಶಾಕೃತಮಠ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಿದ್ಯಾರ್ಥಿಗಳು ಬಸವಣ್ಣನವರ ನೃತ್ಯ ರೂಪಕವನ್ನು ಸೊಗಸಾಗಿ ಪ್ರಸ್ತುತಪಡಿಸಿದರು.ನಗರಸಭೆ ಸದಸ್ಯರಾದ ಸುರೇಶ ಜಂಗ್ಲಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಖಜಾಂಚಿ ಎಂ.ಎಸ್.ಬೀಳಗಿ, ಕೇಂದ್ರ ಶಾಲೆಯ ಮುಖ್ಯ ಶಿಕ್ಷಕ ಎಸ್.ಡಿ.ಜೋಗಿನ, ಕೆಬಿಎಸ್ ಶಾಲೆಯ ಮುಖ್ಯ ಶಿಕ್ಷಕ ಶಿವಾನಂದ ಕೋರಿ, ಶಿಕ್ಷಕ ಯಮನೂರಸಾಬ್ ನದಾಫ್, ನಿಲಯ ಪಾಲಕಿ ಎಚ್.ವೈ.ಕಾರಕೂರ, ಪತ್ರಕರ್ತ ಸುಲೇಮಾನ್ ಚೋಪದಾರ, ವಿದ್ಯಾರ್ಥಿ ಪ್ರತಿನಿಧಿ ಮರಿಯಂ ನದಾಫ್ ಇತರರು ಉಪಸ್ಥಿತರಿದ್ದರು. ೨೦೨೩-೨೪ನೇ ಸಾಲಿನ ಆದರ್ಶ ವಿದ್ಯಾರ್ಥಿ ಮಲ್ಲಿಕ್‌ರಿಹಾನ್ ಕೆರೂರ ಗೌರವಿಸಿ, ಸನ್ಮಾನಿಸಲಾಯಿತು.
ಶಿಕ್ಷಕರಾದ ಅತಾರಸೂಲ ರ‍್ನೂಲ್, ಮೆಹೆಬೂಬ್ ಗಂಜಿಕೋಟಿ, ರತ್ನಾ ಹಣಗಿ ಶ್ರೀಮತಿ ಸುಮಯ್ಯಾ ರ‍್ನೂಲ್ ಹಾಗೂ ಮಲ್ಲಿಕಾರ್ಜುನ ಬಿಜಾಪುರ ಇತರರು ಇದ್ದರು.ಫಾತಿಮಾ ಮೂಗನೂರ ಸ್ವಾಗತಿಸಿದರು. ಮಹೇಶ್ವರಿ ತೋಟಗಂಟಿಮಠ ವಚನ ಪ್ರಾರ್ಥಿಸಿದರು. ಶಿಕ್ಷಕಿ ಫರಜಾನ ಸೋಲಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಮರೇಶ ಬಿಜ್ಜಳ ಪರಿಚಯಿಸಿದರು. ಆರ್.ಎಫ್ ಮೇತ್ರಿ ನಿರೂಪಿಸಿದರು. ಕೆ.ಎಚ್. ಸೋಲಾಪೂರ ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))