ಸಾರಾಂಶ
ಹಿರಿಯರು ಹಾಕಿಕೊಟ್ಟ ಆಚರಣೆಗಳನ್ನು ಅನುಷ್ಠಾನ ಮಾಡಿದರೆ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ದೈವಜ್ಞ ಬ್ರಾಹ್ಮಣ ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು
ಅರಸೀಕೆರೆ: ಹಿರಿಯರು ಹಾಕಿಕೊಟ್ಟ ಆಚರಣೆಗಳನ್ನು ಅನುಷ್ಠಾನ ಮಾಡಿದರೆ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ದೈವಜ್ಞ ಬ್ರಾಹ್ಮಣ ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು ನಗರದ ಶ್ರೀ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ದೈವಜ್ಞ ಬ್ರಾಹ್ಮಣ ಯುವಕ ಸಂಘದ 20ನೇ ವಾರ್ಷಿಕೋತ್ಸವ, ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಪ್ರವಚನ ಮತ್ತು ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು. ನಾವು ಪ್ರತಿಯೊಬ್ಬರು ಅಸೂಯೆ, ಹೊಟ್ಟೆ ಕಿಚ್ಚು, ಕೀಳರಿಮೆ ಬಿಟ್ಟು ಸಕಲರಲ್ಲಿ ಜೊತೆಗೂಡಿದರೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರುದೈವಜ್ಞ ಬ್ರಾಹ್ಮಣ ಯುವಕ ಸಂಘದ ಅಧ್ಯಕ್ಷ ಗಣೇಶ್ ಮಾತನಾಡಿ, ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶಿರ್ವಚನ ಪಡೆದುಕೊಳ್ಳುವ ಭಾಗ್ಯ ನಮ್ಮ ಸಮಾಜ ಬಾಂಧವರಿಗ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಹೇಳಿದರು.
ಶ್ರೀ ಜ್ಞಾನೇಶ್ವರಿ ಮಹಿಳಾ ಸಂಘದ ಸದಸ್ಯೆಯರಿಂದ ಲಲಿತಾ ಸಹಸ್ರನಾಮ ವಿಷ್ಣು ಸಹಸ್ರನಾಮ ಭಜನೆ ಹಮ್ಮಿಕೊಳ್ಳಲಾಗಿತ್ತು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ದೈವಜ್ಞ ಬ್ರಾಹ್ಮಣ ಸಮಾಜದ ಹಿರಿಯರಿಗೆ ಗೌರವಿಸಿ ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಮನರಂಜನ ಕಾರ್ಯಕ್ರಮ ಏರ್ಪಡಿಸಲಾಯಿತು. ದೈವಜ್ಞ ಬ್ರಾಹ್ಮಣ ತಾಲೂಕು ಸಂಘದ ಅಧ್ಯಕ್ಷರಾದ ಗಜಾನನ ಶೇಟ್, ಮಾಜಿ ಅಧ್ಯಕ್ಷರಾದ ಲೋಕೇಶ್, ಅಭಿಮನ್ಯು, ಶ್ರೀಕಾಂತ್, ನಾಗೇಂದ್ರ, ರಮೇಶ್, ಹಾಗೂ ಸಂಘದ ನಿರ್ದೇಶಕರುಗಳು ಹಾಜರಿದ್ದರು.