ಕೃತಿಯಿಂದ ಉತ್ತುಂಗಕ್ಕೇರಲು ಸಾಧ್ಯ: ರಾಜು ನಾಯ್ಕ

| Published : Oct 09 2025, 02:01 AM IST

ಸಾರಾಂಶ

ಪಟ್ಟಣದ ಅರ್ಬನ್ ಬ್ಯಾಂಕ್ ಹಪಿಝ್ಕಾ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಭಟ್ಕಳ

ಪಟ್ಟಣದ ಅರ್ಬನ್ ಬ್ಯಾಂಕ್ ಹಪಿಝ್ಕಾ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಾವು ಹುಟ್ಟಿನಿಂದ ಏನೇ ಆಗಿರಲಿ ನಮ್ಮ ಕೃತಿಯಿಂದ ಉತ್ತುಂಗಕ್ಕೇರಲು ಸಾಧ್ಯ ಎನ್ನುವುದನ್ನು ವಾಲ್ಮೀಕಿಯವರು ತೋರಿಸಿಕೊಟ್ಟಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿಯವರು ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ರಾಮಾಯಣದ ಕುರಿತು ವಿವರಿಸಿದರು. ವಾಲ್ಮೀಕಿ ಮಹರ್ಷಿಗಳ ಜೀವನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ವಿವರಿಸಿದ ಅವರು ವಾಲ್ಮೀಕಿ ಮಹರ್ಷಿಗಳಾದ ಕುರಿತು ವಿವರಿಸಿದರು.

ಶ್ರಿ ಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಪ್ರದೀಪ ಕುಮಾರ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಎಂ., ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ಅಕ್ಷರ ದಾಸೋಸ ಅಧಿಕಾರಿ ರಾಘವೇಂದ್ರ ನಾಯ್ಕ, ಮಾರುಕೇರಿ ಗ್ರಾಪಂ ಆಧ್ಯಕ್ಷೆ ನಾಗವೇಣಿ ಗೊಂಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಶೀಲ ಮೊಗೇರ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಶಂಶುದ್ಧಿನ್, ಸಬ್ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ, ಗೊಂಡ ಸಮಾಜದ ಅಧ್ಯಕ್ಷ ರಾಘವೇಂದ್ರ ಗೊಂಡ, ಪರಿಶಿಷ್ಟ ಜಾತಿ ಪ್ರಮುಖ ಮಾದೇವ ಬಾಕಡ ಮುಂತಾದ ಪ್ರಮುಖರಿದ್ದರು.

ಕಾರ್ಯಕ್ರಮಕ್ಕೂ ಪೂರ್ವ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೃಷಿ ಇಲಾಖೆಯ ಅಧಿಕಾರಿ ಸಂಧ್ಯಾ ಭಟ್ಟ ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಹೆಗಡೆ ಸ್ವಾಗತಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಘವೇಂದ್ರ ನಾಯಕ ವಂದಿಸಿದರು.