ಸಾರಾಂಶ
ಬಿಜೆಪಿ ಎಸ್‌ಸಿ ಮೋರ್ಚಾ, ಎಸ್‌ಟಿ ಮೋರ್ಚಾ ಹಾಗೂ ನಗರ ಮಂಡಲದ ವತಿಯಿಂದ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಹಾಗೂ ಆವರಣ ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬಿಜೆಪಿ ಎಸ್‌ಸಿ ಮೋರ್ಚಾ, ಎಸ್‌ಟಿ ಮೋರ್ಚಾ ಹಾಗೂ ನಗರ ಮಂಡಲದ ವತಿಯಿಂದ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಹಾಗೂ ಆವರಣ ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು.ಡಾ.ಬಿ.ಆರ್.ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಿದ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ಪ್ರತಿ ವರ್ಷವೂ ಎಸ್.ಸಿ, ಎಸ್.ಟಿ.ಮೋರ್ಚಾಗಳ ವತಿಯಿಂದ ಮುಖ್ಯ ಸ್ಥಳಗಳು, ಮಹನೀಯರ ಪುತ್ಥಳಿ ಸ್ವಚ್ಛತೆ ಮಾಡುವ ಮುಖಾಂತರ ಸ್ವಾತಂತ್ರ್ಯದಿನಾಚರಣೆಗೆ ಒಂದು ಅರ್ಥ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಬರಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ರಾಮಸಮುದ್ರ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಎಸ್‌ಸಿ ಮೋರ್ಚಾದ ಅಧ್ಯಕ್ಷ ಮೂಡಹಳ್ಳಿ ಮೂರ್ತಿ, ಟೌನ್ ಅಧ್ಯಕ್ಷ ಪರಶಿವಯ್ಯ, ಪ್ರಧಾನ ಕಾರ್ಯದರ್ಶಿ ರಾಜಪ್ಪ, ಮುಕುಂದಮೂರ್ತಿ, ವೇಣುಗೋಪಾಲ್, ಭಾನುಪ್ರಕಾಶ್, ಆನಂದ್ ಕುಮಾರ್, ಎಸ್‌ಟಿ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಬಸವಪುರ ಮಹೇಶ್, ಯುವ ಮೋರ್ಚಾ ಅಧ್ಯಕ್ಷ ಸೂರ್ಯಬಾಲರಾಜ್, ಆನಂದ್ ಭಗೀರಥ್, ಮಹೇಶ, ಸಂತೋಷ, ರಾಮಸಮುದ್ರ ಶಿವಕುಮಾರ್, ಮಹಿಳಾ ಮೋರ್ಚಾದ ಅಧ್ಯಕ್ಷ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಎಂ.ಶೈಲ, ಕಾರ್ಯದರ್ಶಿ ಪಾರ್ವತಿ ಮತ್ತಿತರರಿದ್ದರು.