ಮೂಲ ಸೌಕರ್ಯ ಒದಗಿಸುವುದು ಸರ್ಕಾರಗಳ ಕರ್ತವ್ಯ

| Published : Nov 23 2025, 01:45 AM IST

ಸಾರಾಂಶ

ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸತ್ತಿಗಲ್‌ನಿಂದ ಅರಕೆರೆ ಬಿ.ಬಿ ಶಿವಪ್ಪ ಸರ್ಕಲ್‌ವರೆಗೆ 54 ಲಕ್ಷ ರು. ವೆಚ್ಚದ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಗರದ ಸಮೀಪ ಇರುವ ಅರೆಕೆರೆ ಗ್ರಾಮ ಕುಗ್ರಾಮವಾಗಿದ್ದು ಇಲ್ಲಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧನಾಗಿದ್ದೇನೆ. ಗ್ರಾಮದ ರಸ್ತೆ ,ಚರಂಡಿ, ಕುಡಿಯುವ ನೀರು ಮತ್ತು ವಿದ್ಯುತ್‌ಗೆ ಪ್ರಮುಖ ಆಧ್ಯತೆ ನೀಡಲಾಗುವುದು. ಸರಕಾರದ ಮೂಲಕ ಅನುದಾನ ತಂದು ಎಲ್ಲಾ ನಾಗರಿಕರಿಗೂ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಪ್ರತಿಯೊಬ್ಬರಿಗೂ ಭೂಮಿ, ವಸತಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರಗಳ ಕರ್ತವ್ಯವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸತ್ತಿಗಲ್‌ನಿಂದ ಅರಕೆರೆ ಬಿ.ಬಿ ಶಿವಪ್ಪ ಸರ್ಕಲ್‌ವರೆಗೆ 54 ಲಕ್ಷ ರು. ವೆಚ್ಚದ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಗರದ ಸಮೀಪ ಇರುವ ಅರೆಕೆರೆ ಗ್ರಾಮ ಕುಗ್ರಾಮವಾಗಿದ್ದು ಇಲ್ಲಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧನಾಗಿದ್ದೇನೆ. ಗ್ರಾಮದ ರಸ್ತೆ ,ಚರಂಡಿ, ಕುಡಿಯುವ ನೀರು ಮತ್ತು ವಿದ್ಯುತ್‌ಗೆ ಪ್ರಮುಖ ಆಧ್ಯತೆ ನೀಡಲಾಗುವುದು. ಸರಕಾರದ ಮೂಲಕ ಅನುದಾನ ತಂದು ಎಲ್ಲಾ ನಾಗರಿಕರಿಗೂ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಸರ್ಕಾರದಿಂದ ಬರುತ್ತಿರುವ ಸಣ್ಣಪುಟ್ಟ ಅನುದಾನದಲ್ಲೆ ಕ್ಷೇತ್ರದ ಹೆಚ್ಚು ಅವಶ್ಯಕವಾಗಿರುವ ರಸ್ತೆಗಳ ಪಟ್ಟಿ ಮಾಡಿ ಯಾವುದೇ ತಾರತಮ್ಯ ಮಾಡದೇ ಅಭಿವೃದ್ಧಿಪಡಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಎಸ್‌ಇಪಿ, ಟಿಎಸ್‌ಪಿ ಅನುದಾನದಲಿ ತಾಲೂಕಿನಾದ್ಯಂತ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಕುರಿತಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡುವಂತೆ ತಿಳಿಸಲಾಗಿದೆ. ಯಾವುದೇ ಹಂತದಲೂ ಕಾಮಗಾರಿಯ ಗುಣಮಟ್ಟದ ಕಳಪೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಬಿಜೆಪಿ ಮುಖಂಡ ಎ.ವಿ ನರೇಶ್ ಮಾತನಾಡಿ, ಈ ಭಾಗದಲ್ಲಿ ಅಭಿವೃದ್ಧಿ ಅಂದಿನ ಶಾಸಕರಾದ ದಿವಂಗತ ಬಿ.ಬಿ ಶಿವಪ್ಪನವರ ಕಾಲದಲ್ಲಿ ಕಂಡಿತ್ತು. ತದನಂತರ ಬಂದಂತಹ ಯಾವುದೇ ಜನಪ್ರತಿನಿಧಿಗಳು ಮೂಲ ಸೌಕರ್ಯ ಒದಗಿಸಲು ಇಚ್ಛಾಶಕ್ತಿ ಹೊಂದಿರಲಿಲ್ಲ. ಹಾಗಾಗಿ ಈ ಗ್ರಾಮ ನಗರದಿಂದ ಕೂದಲೆಳೆ ಅಂತರದಲ್ಲಿದ್ದರೂ ಅಭಿವೃದ್ಧಿ ಕಾಣದೆ ಕುಗ್ರಾಮದಂತಿತ್ತು. ಇದೀಗ ಶಾಸಕ ಸಿಮೆಂಟ್ ಮಂಜು ಅವರ ಸರಳ, ಸಜ್ಜನಿಕೆ ವ್ಯಕ್ತಿತ್ವ ಹಾಗೂ ಜನರಿಗೆ ಮೂಲ ಸೌಕರ್ಯ ಒದಗಿಸಬೇಕೆಂಬ ಬದ್ಧತೆಯಿಂದ ಬ್ಯಾಕರವಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ರಂಗನಾಥ್, ಅರೆಕೆರೆ ಗ್ರಾಪಂ ಸದಸ್ಯ ನಂದೀಶ್, ಸರಿತಾ, ಮಾಜಿ ತಾಪಂ ರುಕ್ಮಿಣಿ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಕಾರ್ತಿಕ್, ಬಿಜೆಪಿ ಬೂತ್ ಅಧ್ಯಕ್ಷ ಚಿರಂತ್, ಕಸಬಾ ಹೋಬಳಿ ಬೆಳೆಗಾರರ ಸಂಘದ ನಿರ್ದೇಶಕ ಪ್ರಸನ್ನ, ಬ್ಯಾಕರವಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೆಳೆಗಾರರ ಸಂಘದ ಅಧ್ಯಕ್ಷ ಕುಮಾರಸ್ವಾಮಿ ಮುಖಂಡರಾದ ದಿನೇಶ್, ಅರೆಕೆರೆ ಇಂಧನ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.