ಸಾರಾಂಶ
ಇದಕ್ಕೂ ಮೊದಲು ನಗರದ ಪ್ರಮುಖ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ ಧರಿಸಿರುವ ದ್ವಿಚಕ್ರ ವಾಹನ ಸವಾರರಿಂದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
- ಭದ್ರಾವತಿಯಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಎಸ್‌ಪಿ ಸೂಚನೆ- - - ಕನ್ನಡಪ್ರಭ ವಾರ್ತೆ ಭದ್ರಾವತಿ
ಜಿಲ್ಲಾ ರಕ್ಷಣಾಧಿಕಾರಿ ಸೇರಿ ನಗರದ ಉಪವಿಭಾಗದ ಪೊಲೀಸರು ಸೋಮವಾರ ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಐಎಸ್‌ಐ ಪ್ರಮಾಣೀಕೃತ ಹೆಲ್ಮೆಟ್ ಧರಿಸಿ ರಸ್ತೆ ಸಂಚಾರ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಿದರು.ನಗರದ ಬಿ.ಎಚ್. ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ವಾಹನ ಸವಾರರಿಗೆ ತಿಳಿ ಹೇಳಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಅರ್ಧ ಹೆಲ್ಮೆಟ್ ಧರಿಸದಂತೆ ಸೂಚನೆ ನೀಡಿದ್ದರೂ ಸಹ ಬಳಸುತ್ತಿರುವುದು ಸರಿಯಲ್ಲ. ನಿಯಮ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ ಎಂದರು.ಹೆಲ್ಮೆಟ್ ವಿಚಾರ ಕಾನೂನು ಕ್ರಮ ಮಾತ್ರವಲ್ಲ. ವಾಹನ ಸವಾರರ ಜವಾಬ್ದಾರಿ. ದಂಡ ಪಾವತಿಯಿಂದ ಸಮಸ್ಯೆ ಸಂಪೂರ್ಣ ನಿವಾರಣೆ ಅಸಾಧ್ಯ. ಜನರು ಸುರಕ್ಷತೆ ತಮ್ಮ ಜವಾಬ್ದಾರಿ ಎಂದು ಭಾವಿಸಿದಾಗ ಮಾತ್ರ ಸುರಕ್ಷತೆ ಸಾಧ್ಯ ಎಂದು ಹೇಳಿದರು.
ಪೊಲೀಸ್ ಉಪಾಧೀಕ್ಷಕ ಕೆ.ಆರ್. ನಾಗರಾಜ್, ನಗರ ಪೊಲೀಸ್ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ವಿವಿಧ ಠಾಣೆಗಳ ಠಾಣಾಧಿಕಾರಿಗಳಾದ ಶಾಂತಲ, ರಮೇಶ್, ಶರಣಪ್ಪ ಹಂಡ್ರಾಗಲ್, ಸಹಾಯಕ ಠಾಣಾಧಿಕಾರಿ ಎಂ. ರಾಜಪ್ಪ ಸೇರಿ ಹಲವು ಸಿಬ್ಬಂದಿ ಪಾಲ್ಗೊಂಡಿದ್ದರು.ಇದಕ್ಕೂ ಮೊದಲು ನಗರದ ಪ್ರಮುಖ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ ಧರಿಸಿರುವ ದ್ವಿಚಕ್ರ ವಾಹನ ಸವಾರರಿಂದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
- - - -ಡಿ4-ಬಿಡಿವಿಟಿ2:ಭದ್ರಾವತಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಸೇರಿ ಉಪವಿಭಾಗದ ಪೊಲೀಸರು ಸೋಮವಾರ ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಐಎಸ್‌ಐ ಪ್ರಮಾಣೀಕೃತ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು.