ಅಂಬೇಡ್ಕರರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಳವಳಕಾರಿ: ಕೋಟಿಗಾನಹಳ್ಳಿ ರಾಮಯ್ಯ

| Published : Apr 15 2025, 01:01 AM IST

ಅಂಬೇಡ್ಕರರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಳವಳಕಾರಿ: ಕೋಟಿಗಾನಹಳ್ಳಿ ರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಕುಲಕ್ಕೆ ಸಂವಿಧಾನದ ಮೂಲಕ ನೀಡಿರುವ ಕೊಡುಗೆ ಅಪಾರವಾದದ್ದು, ಅವರು ನಮ್ಮ ದೇಶಕ್ಕೆ ಸಂವಿಧಾನವನ್ನು ನೀಡದಿದ್ದರೆ ಮನುಸ್ಮೃತಿ ನಮ್ಮನ್ನು ಆಳುತ್ತಿತ್ತು.

ಕನ್ನಡಪ್ರಭ ವಾರ್ತೆ ಮಾಲೂರು

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವರ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆದಿಮ ಸಂಸ್ಥೆಯ ಸಂಸ್ಥಾಪಕರು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಪಟ್ಟಣದ ಮಹಾರಾಜ ವೃತ್ತದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಕುಲಕ್ಕೆ ಸಂವಿಧಾನದ ಮೂಲಕ ನೀಡಿರುವ ಕೊಡುಗೆ ಅಪಾರವಾದದ್ದು, ಅವರು ನಮ್ಮ ದೇಶಕ್ಕೆ ಸಂವಿಧಾನವನ್ನು ನೀಡದಿದ್ದರೆ ಮನುಸ್ಮೃತಿ ನಮ್ಮನ್ನು ಆಳುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಆಚರಣೆ ಮಾಡುತ್ತಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮಗಳು ಕಣ್ಣೀರು ತೋರಿಸುವ ಕಾರ್ಯಕ್ರಮಗಳಾಗಿವೆ. 1978ರಿಂದ ನಮ್ಮನ್ನಾಳಿದ ಸರ್ಕಾರಗಳು ನಮ್ಮ ಕಾರ್ಯಕ್ರಮ ಆಚರಣೆ ಕಾಪಿ ಮಾಡಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ. ರಾಜಕಾರಣಿಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಕ್ಕಳು ಬಳಸಿಕೊಂಡು ಕೆಲವೇ ದಿನಗಳಲ್ಲಿ ಅವರು ಕತ್ತಿಗೆ ಇರಿದು ರಕ್ತಗಳು ಹರಿಸಿಕೊಳ್ಳುತ್ತಾರೆ ಎಂದರು.ಆಚರಣೆಗಳ ಶೈಲಿಗಳು ಮೆರವಣಿಗೆ ಪಕ್ಷಗಳಿಗೆ ಸೀಮಿತವಾಗದೆ ಬದಲಾಗಬೇಕೆಂದು ಅಂಬೇಡ್ಕರ್ ಅವರ ಹೇಳಿದ್ದಾರೆ. ಅಂಬೇಡ್ಕರ್ ಅವರು ಹುಟ್ಟಿದ್ದು ಏಪ್ರಿಲ್ 14 ಅಲ್ಲ. ಆದರೂ ಅನಿವಾರ್ಯವಾಗಿ ಅವರು ಸವಿತಾ ಅವರನ್ನು ಮದುವೆಯಾದ ವೇಳೆ ಏ. 14 ಜನ್ಮ ದಿನಾಂಕ ಪರಿಗಣಿಸಿದ ದಿನವಾಗಿದೆ ಎಂದರು. ಅಂಬೇಡ್ಕರ್ ಅವರು ಇತಿಹಾಸವನ್ನು ಸೃಷ್ಟಿಸಿದ್ದಾರೆ, ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂಬುದು ಅವರ ಬಯಕೆಯಾಗಿತ್ತು, ಪ್ರತಿಯೊಬ್ಬರು ಅಂಬೇಡ್ಕರ್ ಅವರ ಬಗ್ಗೆ ಓದಿ ವಿಚಾರಗಳನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.ಗ್ಲೋಬಲೈಸೇಶನ್ ಪರಿಣಾಮದಿಂದ ಪ್ರತಿನಿತ್ಯ ಸಮಾಜದಲ್ಲಿ ಕ್ರಿಮಿನಲ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ದ್ವೇಷಗಳು, ಸುಳ್ಳುಗಳು 1956 ರಿಂದಲೂ ಸೃಷ್ಟಿಯಾಗುತ್ತಿದೆ. ಅಂಬೇಡ್ಕರ್ ಅವರ ಗುಣಗಾನ ನಿಲ್ಲಬೇಕು, ಯಾವ ರೀತಿಯಲ್ಲೂ ಬಂಡಿಸಲಾಗದ ಪ್ರತಿರೋಧ ಸರಸ್ವತಿ ಅವರಲ್ಲಿತ್ತು. ಬಿಜೆಪಿಗರು ಪುಸ್ತಕಗಳನ್ನು ಬರೆಯಿಸುತ್ತಿದ್ದಾರೆ ಆ ಪುಸ್ತಕಗಳು ಓದಿದರೆ ಗುಲಾಮರಲ್ಲಿ ನಾವು ಸಹ ಗುಲಾಮರಾಗುತ್ತೇವೆ ಎಂದು ಎಚ್ಚರಿಸಿದರು.1926ರಲ್ಲಿ ಅಂಬೇಡ್ಕರ್ ಅವರ ಮೊದಲ ಜನ್ಮದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ವ್ಯಕ್ತಿ ಆರಾಧನೆ ವಿರೋಧಿಸಿದವರು, ಇತ್ತೀಚಿನ ದಿನಗಳಲ್ಲಿ ರಿಪಬ್ಲಿಕ್ ಮೂಲಕ ರಾಜಕಾರಣ ನಿರ್ವಹಿಸಲಾಗುತ್ತಿದೆ ಎಂದರು.ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಸಂವಿಧಾನದಡಿಯಲ್ಲಿ ಎಲ್ಲಾ ವರ್ಗದ ಜನತೆಯು ಸಮಾನತೆಯಿಂದ ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಕೆಲವು ಶಕ್ತಿಗಳು ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಆಡುತ್ತಾರೆ ಅದು ಎಂದಿಗೂ ಸಾಧ್ಯವಿಲ್ಲ ಎಂದರು.

ಪಟ್ಟಣದ ಪುರಸಭಾ ಉದ್ಯಾನವನದಲ್ಲಿ ಮಾಲಾರ್ಪಣೆ ಸಲ್ಲಿಸಿ ನಂತರ ತಾಲೂಕು ಕಚೇರಿಯ ಮುಂಭಾಗ ಅಂಬೇಡ್ಕರ್ ಅವರ ಪುತ್ತಳಿಯ ಭವ್ಯ ಮೆರವಣಿಗೆಗೆ ಶಾಸಕ ಕೆ ವೈ ನಂಜೇಗೌಡ ಪುರಸಭೆ ಅಧ್ಯಕ್ಷ ಕೋಮಲ ನಾರಾಯಣ ಅವರು ಚಾಲನೆ ನೀಡಿದರು.

ವೇಧಿಕೆ ಕಾರ‍್ಯಕ್ರಮದಲ್ಲಿ ಸಾಧಕರಿಗೆ ಗೌರವ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತರ ಪದವಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ವಿ.ರೂಪ, ತಾಪಂ ಇಒ ವಿ ಕೃಷ್ಣಪ್ಪ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಹಮ್ಮದ್ ನಹಿಂ ಉಲ್ಲಾ, ಪುರಸಭೆ ಸದಸ್ಯರಾದ ಮುರುಳಿ, ವಿಜಯಲಕ್ಷ್ಮಿ, ಪದ್ಮಾವತಿ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ ನರಸಿಂಹ, ಪೊಲೀಸ್ ಇನ್‌ಸ್ಪೆಕ್ಟರ್ ವಸಂತ್, ಮುಖ್ಯ ಅಧಿಕಾರಿ ಎಬಿ ಪ್ರದೀಪ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್, ಸಾಹಿತ್ಯ ಪರಿಷತ್ ಅಧ್ಯಕ್ಷ ಹನುಮಂತಯ್ಯ, ದರ್ಖಾಸು ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಅಂಜನಪ್ಪ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ವೆಂಕಟರಾಮ್, ತಾಲೂಕು ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು, ವೈದ್ಯಾಧಿಕಾರಿ ಡಾ.ವಸಂತ್, ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ರವಿ, ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಮುಖಂಡರು ಇನ್ನಿತರರು ಹಾಜರಿದ್ದರು.